AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಕಾಲೇಜು ಕಟ್ಟಡದಿಂದ ಜಿಗಿದು ಟ್ರೈನಿ ವೈದ್ಯೆ ಆತ್ಮಹತ್ಯೆ

ತರಬೇತಿ ನಿರತ ವೈದ್ಯೆಯೊಬ್ಬರು ಕಾಲೇಜು ಕಟ್ಟಡದಿಂದ ಜಿಗಿದು ಪ್ರಾಣ ಬಿಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.ಕಾಂಚಿಪುರಂ ಜಿಲ್ಲೆಯ ಖಾಸಗಿ ಆಸ್ಪತ್ರೆ ಮೀನಾಕ್ಷಿ ವೈದ್ಯಕೀಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ತಮಿಳುನಾಡು: ಕಾಲೇಜು ಕಟ್ಟಡದಿಂದ ಜಿಗಿದು ಟ್ರೈನಿ ವೈದ್ಯೆ ಆತ್ಮಹತ್ಯೆ
ಸಾವು
ನಯನಾ ರಾಜೀವ್
|

Updated on: Sep 02, 2024 | 1:04 PM

Share

ತಮಿಳುನಾಡಿನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದ ಟ್ರೈನಿ ವೈದ್ಯೆಯೊಬ್ಬರು ಕ್ಯಾಂಪಸ್‌ನಲ್ಲಿರುವ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾರೆ. ಕಾಂಚಿಪುರಂ ಜಿಲ್ಲೆಯ ಖಾಸಗಿ ಆಸ್ಪತ್ರೆ ಮೀನಾಕ್ಷಿ ವೈದ್ಯಕೀಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

23 ವರ್ಷದ ಶೆರ್ಲಿನ್, ತಿರುನಲ್ವೇಲಿ ಮೂಲದವರಾಗಿದ್ದು, ಸಂಸ್ಥೆಯಲ್ಲಿ ಐದನೇ ವರ್ಷದ ವಿದ್ಯಾರ್ಥಿ ಮತ್ತು ತರಬೇತಿ ವೈದ್ಯರಾಗಿದ್ದರು. ಭಾನುವಾರ ರಾತ್ರಿ, ಐದನೇ ಮಹಡಿಯ ಕಿಟಕಿಯ ಹಲಗೆಯ ಹೊರಗೆ ಬಹಳ ಹೊತ್ತು ಕುಳಿತಿದ್ದ ಇತರ ವಿದ್ಯಾರ್ಥಿಗಳ ಕ್ಯಾಮರಾದಲ್ಲಿ ಸೆರೆಯಾಗಿದೆ.

ಯಾರಾದರೂ ಅವಳನ್ನು ಸಂಪರ್ಕಿಸುವ ಅಥವಾ ಮಾತನಾಡುವ ಮೊದಲು, ಶೆರ್ಲಿನ್ ಹಾರಿದ್ದಾರೆ ಎಂದು ವರದಿಯಾಗಿದೆ. ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಉಪನ್ಯಾಸಕ ವಶಕ್ಕೆ

ವೈಯಕ್ತಿಕ ಕಾರಣಗಳಿಂದಾಗಿ ಶೆರ್ಲಿನ್ ಖಿನ್ನತೆಗೆ ಒಳಗಾಗಿದ್ದರು ಎಂದು ಪ್ರಾಥಮಿಕ ಮಾಹಿತಿಗಳು ಸೂಚಿಸಿವೆ. ಈ ಕುರಿತು ಸ್ಥಳೀಯ ಪೊಲೀಸರು ವಿವರವಾದ ತನಿಖೆ ಆರಂಭಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇತ್ತೀಚೆಗಷ್ಟೇ ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಪ್ರಕರಣ ಇನ್ನೂ ಜನರ ಮನಸ್ಸಿಂದ ಮಾಸಿಲ್ಲ, ಇದೀಗ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಸಾವಿನ ನಿರ್ಧಾರ ತೆಗೆದುಕೊಳ್ಳಲು ಅವರಿಗಿದ್ದ ಕಾರಣಗಳ ಬಗ್ಗೆ ತನಿಖೆ ಆರಂಭವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ