AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರಿದ್ದ ಕೋಣೆಯ ಪಕ್ಕದ ಬಾಲ್ಕನಿಯಿಂದ ಹಾರಿ ಪ್ರಾಣ ಬಿಟ್ಟ ತರಬೇತಿ ನಿರತ ವೈದ್ಯ

ತರಬೇತಿ ನಿರತ ವೈದ್ಯನೊಬ್ಬ 21ನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪೋಷಕರಿದ್ದ ಕೋಣೆಯ ಪಕ್ಕದ ಬಾಲ್ಕನಿಯಿಂದ ಕೆಳಗೆ ಹಾರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಥುರಾ ನಿವಾಸಿ 29 ವರ್ಷದ ಶಿವ ತನ್ನ ಹೆತ್ತವರೊಂದಿಗೆ ಗೌರ್ ಸಿಟಿ 2 ರಲ್ಲಿರುವ ತನ್ನ ಸಹೋದರಿಯ ಮನೆಗೆ ಹೋಗಿದ್ದರು. ಸೋಮವಾರ ಮಧ್ಯಾಹ್ನ, ಶಿವ ಬಾಲ್ಕನಿಗೆ ಹೋಗಿ 21 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೋಷಕರಿದ್ದ ಕೋಣೆಯ ಪಕ್ಕದ ಬಾಲ್ಕನಿಯಿಂದ ಹಾರಿ ಪ್ರಾಣ ಬಿಟ್ಟ ತರಬೇತಿ ನಿರತ ವೈದ್ಯ
ವೈದ್ಯರು
ನಯನಾ ರಾಜೀವ್
|

Updated on: Sep 29, 2025 | 10:17 PM

Share

ನೋಯ್ಡಾ, ಸೆಪ್ಟೆಂಬರ್ 29: ತರಬೇತಿ ನಿರತ ವೈದ್ಯನೊಬ್ಬ 21ನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪೋಷಕರಿದ್ದ ಕೋಣೆಯ ಪಕ್ಕದ ಬಾಲ್ಕನಿಯಿಂದ ಕೆಳಗೆ ಹಾರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಥುರಾ ನಿವಾಸಿ 29 ವರ್ಷದ ಶಿವ ತನ್ನ ಹೆತ್ತವರೊಂದಿಗೆ ಗೌರ್ ಸಿಟಿ 2 ರಲ್ಲಿರುವ ತನ್ನ ಸಹೋದರಿಯ ಮನೆಗೆ ಹೋಗಿದ್ದರು.

ಸೋಮವಾರ ಮಧ್ಯಾಹ್ನ, ಶಿವ ಬಾಲ್ಕನಿಗೆ ಹೋಗಿ 21 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಅವನ ಶವವನ್ನು ಆಸ್ಪತ್ರೆಗೆ ಸಾಗಿಸಿದರು, ಅಲ್ಲಿ ಅವನು ಮೃತಪಟ್ಟಿದ್ದಾನೆ ಎಂದು ಘೋಷಿಸಲಾಯಿತು. ಫ್ಲಾಟ್‌ನಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಕಂಡುಬಂದಿಲ್ಲ.

ದೆಹಲಿಯ ಖಾಸಗಿ ಕಾಲೇಜಿನ 2015 ರ ಬ್ಯಾಚ್‌ನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಶಿವ ಎಂಬ ವಿದ್ಯಾರ್ಥಿ, 2020 ರಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿದ್ದವು. ನಂತರ ತನ್ನ ವೈದ್ಯಕೀಯ ತರಬೇತಿಯನ್ನು ಸ್ಥಗಿತಗೊಳಿಸಿದ್ದ, ಇದು ಅವರಲ್ಲಿ ಖನ್ನತೆಯನ್ನುಂಟು ಮಾಡಿತ್ತು. ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆತ್ಮಹತ್ಯೆಗೆ ಕಾರಣವೇನೆಂದು ತಿಳಿಯಲು ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ:  ದೇವರ ಕಡೆಯಿಂದ ಹೊಡೆಸುತ್ತೇನೆ: ಚಿತ್ರ ವಿಚಿತ್ರವಾಗಿ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

ಮತ್ತೊಂದು ಘಟನೆ

ಭಾವಿ ಪತ್ನಿಯೊಂದಿಗೆ ವಿಡಿಯೋ ಕಾಲ್​ನಲ್ಲಿರುವಾಗಲೇ ವ್ಯಕ್ತಿ ಆತ್ಮಹತ್ಯೆ ವ್ಯಕ್ತಿಯೊಬ್ಬ ತನ್ನ ಭಾವಿ ಪತ್ನಿಯೊಂದಿಗೆ ವಿಡಿಯೋ ಕಾಲ್​ನಲ್ಲಿರುವಾಗಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹರಿದ್ವಾರದಲ್ಲಿ ನಡೆದಿದೆ. ನವೀನ್ ಎಂದು ಗುರುತಿಸಲಾದ ಆ ವ್ಯಕ್ತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದು, ಸ್ನೇಹಿತನ ಕೋಣೆಯಲ್ಲಿ ತಂಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆತ ಇಷ್ಟ ಪಟ್ಟ ಹುಡುಗಿಯೊಂದಿಗೆ ಆತನ ನಿಶ್ಚಿತಾರ್ಥವಾಗಿತ್ತು, ಆದರೂ ಯಾಕೆ ದುಡುಕಿ ಈ ನಿರ್ಧಾರ ತೆಗೆದುಕೊಂಡ ಎನ್ನುವ ಕುರಿತು ಇನ್ನೂ ಮಾಹಿತಿ ಹೊರಬರಬೇಕಿದೆ. ಮಧ್ಯಾಹ್ನ 2.30 ರ ಸುಮಾರಿಗೆ ನವೀನ್ ತನ್ನ ನಿಶ್ಚಿತ ವಧುವಿನೊಂದಿಗೆ ವೀಡಿಯೊ ಕರೆಯಲ್ಲಿ ಮಾತನಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಹಗ್ಗದಿಂದ ನೇಣು ಬಿಗಿದು, ಅದನ್ನು ಸೀಲಿಂಗ್ ಫ್ಯಾನ್‌ಗೆ ಕಟ್ಟಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ನವೀನ್ ಹಾಗೂ ಋಷಿ ಬಹಳ ಸಮಯದಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಭಾನುವಾರ, ಫೇಸ್‌ಬುಕ್ ವೀಡಿಯೊ ಕರೆಯಲ್ಲಿ ಅವರೊಂದಿಗೆ ಮಾತನಾಡುತ್ತಿದ್ದಾಗ, ನವೀನ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಮತ್ತು ದುರದೃಷ್ಟವಶಾತ್ ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ