AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಾಬಂಧನ, ಗಣೇಶ ಚತುರ್ಥಿಗೆ ಪ್ರವಾಸ ಹೋಗೋ ಪ್ಲಾನ್ ಇದೆಯಾ?; ಮಿಸ್ ಮಾಡದೆ ಈ ಸುದ್ದಿ ಓದಿ

Covid-19 Guidelines: ಬೇರೆ ರಾಜ್ಯಗಳಿಂದ ಬರುವವರಿಗೆ ಹಲವು ರಾಜ್ಯಗಳಲ್ಲಿ ಕೊವಿಡ್ ನೆಗೆಟಿವ್ RT-PCR ವರದಿಯನ್ನು ಕಡ್ಡಾಯಗೊಳಿಸಲಾಗಿದೆ. ಹೀಗಾಗಿ, ಬೇರೆ ರಾಜ್ಯಗಳಿಗೆ ಪ್ರವಾಸ ಹೋಗುವ ಮುನ್ನ ಅಲ್ಲಿನ ಕೊರೊನಾ ನಿಯಮಗಳ ಬಗ್ಗೆ ನೀವು ತಿಳಿದಿರುವುದು ಅಗತ್ಯ.

ರಕ್ಷಾಬಂಧನ, ಗಣೇಶ ಚತುರ್ಥಿಗೆ ಪ್ರವಾಸ ಹೋಗೋ ಪ್ಲಾನ್ ಇದೆಯಾ?; ಮಿಸ್ ಮಾಡದೆ ಈ ಸುದ್ದಿ ಓದಿ
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Aug 05, 2021 | 2:32 PM

Share

ಬೆಂಗಳೂರು: ರಕ್ಷಾಬಂಧನದಿಂದ ಗಣೇಶ ಚತುರ್ಥಿಯವರೆಗೂ ಆಗಸ್ಟ್ ತಿಂಗಳಿನಿಂದ ಸೆಪ್ಟೆಂಬರ್ ಮೊದಲ ವಾರದವರೆಗೂ ಸಾಲು ಸಾಲು ರಜೆಗಳಿವೆ. ಕೊವಿಡ್​ ಅಟ್ಟಹಾಸದಿಂದ ಮನೆಯೊಳಗೇ ಕುಳಿತು ಬೋರಾಯ್ತು, ಹಬ್ಬದ ರಜೆಗೆ ಬೇರೆಲ್ಲಾದರೂ ಹೋಗಿ ಬರೋಣ ಎಂದು ನೀವೇನಾದರೂ ಪ್ಲಾನ್ ಮಾಡಿದ್ದರೆ ಈ ವಿಷಯಗಳ ಬಗ್ಗೆ ಗಮನವಿರಲಿ. ಬೇರೆ ರಾಜ್ಯಗಳಿಂದ ಬರುವವರಿಗೆ ಹಲವು ರಾಜ್ಯಗಳಲ್ಲಿ ಕೊವಿಡ್ ನೆಗೆಟಿವ್ RT-PCR ವರದಿಯನ್ನು ಕಡ್ಡಾಯಗೊಳಿಸಲಾಗಿದೆ. ಹೀಗಾಗಿ, ಬೇರೆ ರಾಜ್ಯಗಳಿಗೆ ಪ್ರವಾಸ ಹೋಗುವ ಮುನ್ನ ಅಲ್ಲಿನ ಕೊರೊನಾ ನಿಯಮಗಳ ಬಗ್ಗೆ ನೀವು ತಿಳಿದಿರುವುದು ಅಗತ್ಯ.

ಕರ್ನಾಟಕದಲ್ಲಿ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಗಡಿ ಭಾಗಗಳಲ್ಲಿ ಈ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ.

ಛತ್ತೀಸ್​ಗಢ: ಬೇರೆ ರಾಜ್ಯಗಳಿಂದ ವಿಮಾನಗಳಲ್ಲಿ ಬರುವ ಪ್ರಯಾಣಿಕರಿಗೆ ಛತ್ತೀಸ್​ಗಢ ಸರ್ಕಾರ ಕೊವಿಡ್ ನೆಗೆಟಿವ್ ಆರ್​ಟಿ-ಪಿಸಿಆರ್ ವರದಿಯನ್ನು ಕಡ್ಡಾಯಗೊಳಿಸಿದೆ. ವಿಮಾನ ಸಂಚಾರಕ್ಕೂ 96 ಗಂಟೆಗಳ ಮೊದಲು ಕೊವಿಡ್ ಟೆಸ್ಟ್ ಮಾಡಿಸಿ, ಅದರಲ್ಲಿ ನೆಗೆಟಿವ್ ವರದಿ ಬಂದಿದ್ದರೆ ಮಾತ್ರ ಪ್ರವೇಶಕ್ಕೆ ಅವಕಾಶ.

ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶಕ್ಕೆ ತೆರಳುವವರು 72 ಗಂಟೆಯೊಳಗೆ ಪಡೆದ ಕೊವಿಡ್ ನೆಗೆಟಿವ್ ವರದಿಯನ್ನು ತೋರಿಸಬೇಕು. ಹಾಗೇ, ಈಗಾಗಲೇ ಒಂದಾದರೂ ಡೋಸ್​ನ ಕೊವಿಡ್ ಲಸಿಕೆ ಹಾಕಿಸಿರುವ ಸರ್ಟಿಫಿಕೆಟ್ ತೋರಿಸಿದರೆ ಪ್ರವಾಸಿಗರು ಹಿಮಾಚಲ ಪ್ರದೇಶಕ್ಕೆ ಪ್ರವೇಶಿಸಲು ಅನುಮತಿ ನೀಡಲಾಗುವುದು.

ತಮಿಳುನಾಡು: ಕೇರಳದಿಂದ ತಮಿಳುನಾಡಿಗೆ ಬರುವ ಪ್ರಯಾಣಿಕರು ಇಂದಿನಿಂದ ಆರ್​ಟಿ-ಪಿಸಿಆರ್ ನೆಗೆಟಿವ್ ವರದಿ ತೋರಿಸುವುದು ಕಡ್ಡಾಯ. ವಿಮಾನ, ಬಸ್, ಕಾರು, ರೈಲು ಯಾವುದೇ ಮಾರ್ಗದಿಂದ ಬರುವ ಪ್ರಯಾಣಿಕರಿಗೆ ಇದು ಅನ್ವಯವಾಗುತ್ತದೆ.

ಗೋವಾ: ರಜೆ ಬಂತೆಂದರೆ ಗೋವಾಗೆ ಪ್ರವಾಸಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗುತ್ತದೆ. ಕೇರಳದಿಂದ ಗೋವಾಕ್ಕೆ ತೆರಳುವವರು ಕೊವಿಡ್ ನೆಗೆಟಿವ್ ವರದಿ ತೋರಿಸುವುದು ಕಡ್ಡಾಯ.

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಸರ್ಕಾರವೂ ಕೊವಿಡ್ ನಿಯಮಾವಳಿಗಳ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಪುಣೆ, ಮಹಾರಾಷ್ಟ್ರ, ತಮಿಳುನಾಡಿನಿಂದ ಆಗಮಿಸುವ ಪ್ರಯಾಣಿಕರು 72 ಗಂಟೆಯೊಳಗಿನ ಕೊವಿಡ್ ನೆಗೆಟಿವ್ ರಿಪೋರ್ಟ್ ತೋರಿಸಬೇಕು. ಆಗಸ್ಟ್ 8ರಿಂದ ಈ ನಿಯಮ ಜಾರಿಗೆ ಬರಲಿದೆ.

ಆಂಧ್ರ ಪ್ರದೇಶ, ಮಧ್ಯ ಪ್ರದೇಶ, ಪಂಜಾಬ್, ಚಂಡೀಘಡ, ಹರಿಯಾಣಕ್ಕೆ ಪ್ರಯಾಣಿಸಲು ಕೊವಿಡ್ ನೆಗೆಟಿವ್ ವರದಿಯ ಅಗತ್ಯವಿಲ್ಲ. ಯಾರು ಬೇಕಾದರೂ ಈ ರಾಜ್ಯಗಳಿಗೆ ತೆರಳಬಹುದು. ರಾಜಸ್ಥಾನ, ನಾಗಾಲ್ಯಾಂಡ್ ರಾಜ್ಯಗಳಲ್ಲಿ ಕೊವಿಡ್ ನೆಗೆಟಿವ್ ವರದಿಯ ಅಗತ್ಯವಿಲ್ಲ. ಆದರೆ, ಒಂದಾದರೂ ಕೊರೊನಾ ಲಸಿಕೆಯ ಡೋಸ್ ಹಾಕಿಸಿಕೊಂಡಿರುವುದು ಕಡ್ಡಾಯ. ಕೊರೊನಾ ಲಸಿಕೆ ಹಾಕಿಸಿಕೊಳ್ಳದವರು ನೆಗೆಟಿವ್ ಟೆಸ್ಟ್​ನ ರಿಪೋರ್ಟ್ ತೋರಿಸಬೇಕು.

ಮಣಿಪುರ, ಒರಿಸ್ಸಾ, ತ್ರಿಪುರ, ಉತ್ತರಾಖಂಡ, ಮಹಾರಾಷ್ಟ್ರ, ಮೇಘಾಲಯಕ್ಕೆ ಪ್ರವಾಸಕ್ಕೆ ತೆರಳುವವರು ಎರಡೂ ಡೋಸ್ ಕೊವಿಡ್ ಲಸಿಕೆ ಹಾಕಿಸಿಕೊಂಡಿರುವ ಸರ್ಟಿಫಿಕೆಟ್ ತೋರಿಸಿದರೆ ಕೊವಿಡ್ ಪರೀಕ್ಷೆಯ ವರದಿಯ ಅಗತ್ಯವಿಲ್ಲ.

ಇದನ್ನೂ ಓದಿ: Covid-19: ಕೊರೊನಾ ರೋಗಿಗಳ ಕಣ್ಣೀರಿನಿಂದಲೂ ಹರಡುತ್ತೆ ಕೊವಿಡ್ ಸೋಂಕು!; ಅಚ್ಚರಿಯ ವಿಷಯ ಬಯಲು

Karnataka Covid-19: ಕರ್ನಾಟಕದಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ; ಕೇರಳ, ಮಹಾರಾಷ್ಟ್ರದ ಪ್ರಯಾಣಿಕರಿಗೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯ

(Travel Plan for Holidays on Raksha Bandhan, Ganesh Chaturthi? other States Covid-19 Guidelines list is here)

Published On - 2:31 pm, Thu, 5 August 21

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?