AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಡಕಟ್ಟು ನಮ್ಮ ಸಮಾಜದ ಮೂಲ, ಅವರ ಕಲೆ, ಸಂಸ್ಕೃತಿ, ಉಡುಪುಗಳಿಗೆ ಅದರದೇ ಆದ ವೈಶಿಷ್ಟ್ಯವಿದೆ: ಧರ್ಮೇಂದ್ರ ಪ್ರಧಾನ್

ಬುಡಕಟ್ಟು ನಮ್ಮ ಸಮಾಜದ ಮೂಲವಾಗಿದೆ, ಕಲೆ, ಸಂಸ್ಕೃತಿ, ಆಚಾರ, ವಿಚಾರ, ನೃತ್ಯ ಸಂಗೀತ, ಹಾಡು, ಉಡುಗೆ, ತೊಡುಗೆಯಲ್ಲಿ ಈ ಸಮಾಜ ತನ್ನದೇ ಆದ ವೈಶಿಷ್ಟ್ಯ ಹೊಂದಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ನಾಲ್ಕೋ ನಗರದಲ್ಲಿ ನಡೆದ ‘ಪರಿಚಯ: ರಾಷ್ಟ್ರೀಯ ಜನಜಾತಿ ಮಹೋತ್ಸವ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬುಡಕಟ್ಟು ನಮ್ಮ ಸಮಾಜದ ಮೂಲ, ಅವರ ಕಲೆ, ಸಂಸ್ಕೃತಿ, ಉಡುಪುಗಳಿಗೆ ಅದರದೇ ಆದ ವೈಶಿಷ್ಟ್ಯವಿದೆ: ಧರ್ಮೇಂದ್ರ ಪ್ರಧಾನ್
ಧರ್ಮೇಂದ್ರ ಪ್ರಧಾನ್
ನಯನಾ ರಾಜೀವ್
|

Updated on:Aug 19, 2023 | 9:43 AM

Share

“ಬುಡಕಟ್ಟು ನಮ್ಮ ಸಮಾಜದ ಮೂಲವಾಗಿದೆ, ಕಲೆ, ಸಂಸ್ಕೃತಿ, ಆಚಾರ, ವಿಚಾರ, ನೃತ್ಯ ಸಂಗೀತ, ಹಾಡು, ಉಡುಗೆ, ತೊಡುಗೆಯಲ್ಲಿ ಈ ಸಮಾಜ ತನ್ನದೇ ಆದ ವೈಶಿಷ್ಟ್ಯ ಹೊಂದಿದೆ” ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್(Dharmendra Pradhan) ಹೇಳಿದ್ದಾರೆ. ನಾಲ್ಕೋ ನಗರದಲ್ಲಿ ನಡೆದ ‘ಪರಿಚಯ: ರಾಷ್ಟ್ರೀಯ ಜನಜಾತಿ ಮಹೋತ್ಸವ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಒಡಿಶಾದಲ್ಲಿ 62 ಬುಡಕಟ್ಟು ಜನಾಂಗಗಳಿವೆ, 21 ವಿವಿಧ ಭಾಷೆಗಳು ಹಾಗೂ 74 ಉಪಭಾಷೆಗಳನ್ನು ಹೊಂದಿರುವ ವಿಶಿಷ್ಟ ರಾಜ್ಯವಾಗಿದೆ. ಒಡಿಶಾದಲ್ಲಿ ಪ್ರಸ್ತುತ 7 ಬುಡಕಟ್ಟು ಲಿಪಿಗಳು ಕೂಡ ಇವೆ. ಬುಡಕಟ್ಟು ಜನರು ಸರಳ ಹಾಗೂ ಸ್ವಚ್ಛ ಮನಸ್ಸಿನವರು, ಒಡಿಶಾದ ಹೆಮ್ಮೆಯ ಪುತ್ರಿ ದ್ರೌಪದಿ ಮುರ್ಮು ಈಗ ಭಾರತದ ರಾಷ್ಟ್ರಪತಿಯಾಗಿದ್ದಾರೆ.

ಬುಡಕಟ್ಟು ನಾಯಕತ್ವಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡುವಲ್ಲಿ ಮೋದಿ ಸರ್ಕಾರವು ಪ್ರಮುಖ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಮೋದಿ ಸರ್ಕಾರ ಏಕಲವ್ಯ ವಿದ್ಯಾಲಯಗಳನ್ನು ಸ್ಥಾಪಿಸಿದೆ. ಈಗ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ‘ಜಂಜಾತಿ ಗೌರವ್ ದಿವಸ್’ ಎಂದು ಆಚರಿಸಲಾಗುತ್ತಿದೆ ಎಂದು ಪ್ರಧಾನ್ ಹೇಳಿದರು.

ಸಾಂಪ್ರದಾಯಿಕ ಕುಶಲಕರ್ಮಿಗಳು, ಕರಕುಶಲ ಮತ್ತು ಇತರ ಕಲಾವಿದರನ್ನು ಬೆಂಬಲಿಸಲು ಪ್ರಧಾನ ಮಂತ್ರಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಹೊಸ ಯೋಜನೆಯನ್ನು ತಂದಿದ್ದಾರೆ ಎಂದು ಅವರು ಹೇಳಿದರು. ಈ ಯೋಜನೆಯಿಂದ ಬುಡಕಟ್ಟು ಸಮಾಜವೂ ಪ್ರಯೋಜನ ಪಡೆಯಲಿದೆ.

ಮತ್ತಷ್ಟು ಓದಿ: ಹಾಸನದ ಎಸ್ಪಿ ಕಚೇರಿಯಲ್ಲಿ ಧ್ವಜಾರೋಹಣ ಮಾಡಿದ ಬುಡಕಟ್ಟು ಜನಾಂಗದ ಬಾಲಕಿ ಈ ಸಂದರ್ಭದಲ್ಲಿ ಆದಿವಾಸಿಗಳು ಡೊಳ್ಳು ಬಾರಿಸುವ, ಕುಣಿತ, ಗಾಯನದ ನಡುವೆ ಸಚಿವರಿಗೆ ಭವ್ಯ ಸ್ವಾಗತ ಕೋರಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:25 am, Sat, 19 August 23

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು