ಸಂದೇಶ್​ಖಾಲಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ತೃಣಮೂಲ ಕಾಂಗ್ರೆಸ್​ ಕಾರ್ಯಕರ್ತನ ಬಂಧನ

ಬಂಗಾಳದ ಸಂದೇಶ್​ಖಾಲಿಯಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನನ್ನು ಬಂಧಿಸಲಾಗಿದೆ. ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಸಂದೇಶ್​ಖಾಲಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ತೃಣಮೂಲ ಕಾಂಗ್ರೆಸ್​ ಕಾರ್ಯಕರ್ತನ ಬಂಧನ

Updated on: May 19, 2024 | 12:00 PM

ಪಶ್ಚಿಮ ಬಂಗಾಳ(West Bengal)ದ ಸಂದೇಶ್​ಖಾಲಿ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ತಾಯಿ ನೀಡಿರುವ ದೂರಿನ ಪ್ರಕಾರ ಆರೋಪಿಯು ಶುಕ್ರವಾರ ರಾತ್ರಿ ಅವರ ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದಾರೆ.

ಕೋಲ್ಕತ್ತಾದಿಂದ ಸುಮಾರು 100 ಕಿಮೀ ದೂರದಲ್ಲಿರುವ ಸುಂದರಬನ್ಸ್‌ನ ಗಡಿಯಲ್ಲಿರುವ ನದಿಯ ಸಂದೇಶ್‌ಖಾಲಿ ಪ್ರದೇಶವು ಫೆಬ್ರವರಿಯಲ್ಲಿ ಬಂಧಿತ ತೃಣಮೂಲ ಕಾಂಗ್ರೆಸ್ ನಾಯಕ ಶೆಹಜಹಾನ್ ಶೇಖ್ ಮತ್ತು ಅವರ ಬೆಂಬಲಿಗರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಭೂಹಗರಣದ ಆರೋಪದ ಮೇಲೆ ಪ್ರತಿಭಟನೆಗಳು ನಡೆಯುತ್ತಿವೆ.

ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರು ಹೊರಗೆ ಬರುತ್ತಿದ್ದಂತೆ 8 ನೇ ತರಗತಿ ವಿದ್ಯಾರ್ಥಿನಿ ಬಾಲಕಿ ತಪ್ಪಿಸಿಕೊಂಡು ಸಹಾಯಕ್ಕಾಗಿ ಕೂಗಲು ಪ್ರಾರಂಭಿಸಿದಳು ಎಂದು ದೂರನ್ನು ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Sheikh Shahjahan Arrest: ಸಂದೇಶಖಾಲಿ ಪ್ರಕರಣದ ಆರೋಪಿ ಶೇಖ್ ಷಹಜಹಾನ್ ಬಂಧಿಸಿದ ಇಡಿ

ಸುಮಾರು 20 ವರ್ಷ ವಯಸ್ಸಿನ ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಬಸಿರ್‌ಹತ್ ಪೊಲೀಸ್ ಜಿಲ್ಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಅದರ ವರದಿಗಾಗಿ ಕಾಯಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ