ಸರ್ಕಾರಿ ಬಂಗಲೆ ತೆರವು ಆದೇಶದ ವಿರುದ್ಧ ದೆಹಲಿ ಹೈಕೋರ್ಟ್‌ ಮೊರೆ ಹೋದ ಮಹುವಾ ಮೊಯಿತ್ರಾ

ಕಳೆದ ವರ್ಷ ಲೋಕಸಭೆಯಿಂದ ಉಚ್ಚಾಟಿಸಲ್ಪಟ್ಟ ಕಾರಣ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಡಿಒಇ, ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರಿಗೆ ಹೇಳಲಾಗಿತ್ತು. ಸಂಸದೆಯಾಗಿ ಆಕೆಗೆ ಮನೆ ಮಂಜೂರು ಮಾಡಲಾಗಿತ್ತು. ಆದರೆ ಉಚ್ಚಾಟನೆ ನಂತರ ಮನೆ ಖಾಲಿ ಮಾಡುವಂತೆ ಇಲಾಖೆ ಹೇಳಿದೆ.

ಸರ್ಕಾರಿ ಬಂಗಲೆ ತೆರವು ಆದೇಶದ ವಿರುದ್ಧ ದೆಹಲಿ ಹೈಕೋರ್ಟ್‌ ಮೊರೆ ಹೋದ ಮಹುವಾ ಮೊಯಿತ್ರಾ
ಮಹುವಾ ಮೊಯಿತ್ರಾ
Follow us
ರಶ್ಮಿ ಕಲ್ಲಕಟ್ಟ
|

Updated on:Jan 18, 2024 | 2:30 PM

ದೆಹಲಿ ಜನವರಿ 18: ದೆಹಲಿಯಲ್ಲಿರುವ ಸರ್ಕಾರಿ ಬಂಗಲೆಯನ್ನು ತೆರವು ಮಾಡುವಂತೆ ಎಸ್ಟೇಟ್ ನಿರ್ದೇಶನಾಲಯದ ನೋಟಿಸ್ ವಿರುದ್ಧ ತೃಣಮೂಲ ಕಾಂಗ್ರೆಸ್ (TMC) ನಾಯಕಿ ಮಹುವಾ ಮೊಯಿತ್ರಾ (Mahua Moitra) ದೆಹಲಿ ಹೈಕೋರ್ಟ್‌ಗೆ (Delhi High Court) ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದಾರೆ. ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಗಿರೀಶ್ ಕತ್ಪಾಲಿಯಾ ಅವರ ಪೀಠ ಈ ಪ್ರಕರಣದ ವಿಚಾರಣೆ ನಡೆಸಲಿದೆ.

ಕಳೆದ ವರ್ಷ ಲೋಕಸಭೆಯಿಂದ ಉಚ್ಚಾಟಿಸಲ್ಪಟ್ಟ ಕಾರಣ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಡಿಒಇ ಮೊಯಿತ್ರಾ ಅವರಿಗೆ ಹೇಳಲಾಗಿತ್ತು. ಸಂಸದೆಯಾಗಿ ಆಕೆಗೆ ಮನೆ ಮಂಜೂರು ಮಾಡಲಾಗಿತ್ತು. ಆದರೆ ಉಚ್ಚಾಟನೆ ನಂತರ ಮನೆ ಖಾಲಿ ಮಾಡುವಂತೆ ಇಲಾಖೆ ಹೇಳಿದೆ. ಎಸ್ಟೇಟ್ ನಿರ್ದೇಶನಾಲಯವು ಕೇಂದ್ರ ಸರ್ಕಾರದ ಅಧಿಕೃತ ಮತ್ತು ವಸತಿ ಆಸ್ತಿಗಳನ್ನು ನಿರ್ವಹಿಸುತ್ತದೆ.ಕಳೆದ ವರ್ಷ ಡಿಸೆಂಬರ್ 8 ರಂದು ಲೋಕಸಭೆಯಿಂದ ಉಚ್ಚಾಟಿಸಲ್ಪಟ್ಟ ಟಿಎಂಸಿ ನಾಯಕಿಗೆ ನೀಡಲಾದ ಸೌಲಭ್ಯಗಳನ್ನು ರದ್ದುಗೊಳಿಸಿದ ನಂತರ ಜನವರಿ 7 ರೊಳಗೆ ಮನೆಯನ್ನು ಖಾಲಿ ಮಾಡುವಂತೆ ಈ ಹಿಂದೆ ಕೇಳಲಾಗಿತ್ತು.

ಜನವರಿ 8 ರಂದು, ಎಸ್ಟೇಟ್ ನಿರ್ದೇಶನಾಲಯವು ತನ್ನ ಸರ್ಕಾರಿ ವಸತಿಗಳನ್ನು ಏಕೆ ಖಾಲಿ ಮಾಡಿಲ್ಲ ಎಂಬುದಕ್ಕೆ ಮೂರು ದಿನಗಳಲ್ಲಿ ಉತ್ತರ ನೀಡುವಂತೆ ನೋಟಿಸ್ ನೀಡಿತ್ತು. ಜನವರಿ 12ರಂದು ಆಕೆಗೆ ಮತ್ತೊಂದು ನೋಟಿಸ್ ಕೂಡ ಜಾರಿ ಮಾಡಲಾಗಿತ್ತು.

ಜನವರಿ 4 ರಂದು, ದೆಹಲಿ ಹೈಕೋರ್ಟ್ ಟಿಎಂಸಿ ನಾಯಕಿ ತನಗೆ ಮಂಜೂರು ಮಾಡಲಾದ ಸರ್ಕಾರಿ ವಸತಿಯಲ್ಲಿರಲು ಅವಕಾಶ ನೀಡುವಂತೆ ವಿನಂತಿಯೊಂದಿಗೆ DoE ಅನ್ನು ಸಂಪರ್ಕಿಸುವಂತೆ ಕೇಳಿಕೊಂಡಿತು.

ಜನವರಿ 7 ರೊಳಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಮೊಯಿತ್ರಾ ಅವರು ಅಧಿಕೃತ ಸೂಚನೆಗೆ ಮೊಯಿತ್ರಾ ಪರ ವಾದಿಸುತ್ತಿರುವ  ನ್ಯಾಯಮೂರ್ತಿ ಸುಬ್ರಮೋನಿಯುನ್ ಪ್ರಸಾದ್, ಅಸಾಧಾರಣ ಸಂದರ್ಭಗಳಲ್ಲಿ ಕೆಲವು ಶುಲ್ಕಗಳನ್ನು ಪಾವತಿಸಿ, ಅಲ್ಲಿ ಆರು ತಿಂಗಳವರೆಗೆ ಹೆಚ್ಚುವರಿಯಾಗಿ ಉಳಿಯಲು ನಿಯಮಗಳು ಅನುಮತಿ ನೀಡುತ್ತವೆ ಎಂದು ಗಮನಿಸಿದರು.

ನ್ಯಾಯಾಲಯವು ಮೊಯಿತ್ರಾ ಅವರ ಅರ್ಜಿಯನ್ನು ಹಿಂಪಡೆಯಲು ಅವಕಾಶ ಮಾಡಿಕೊಟ್ಟಿತು.ಅದೇ ವೇಳೆ ವಿಷಯದ ಅರ್ಹತೆಯ ಬಗ್ಗೆ ಯಾವುದೇ ಅವಲೋಕನಗಳನ್ನು ಮಾಡಿಲ್ಲ ಎಂದು ಗಮನಿಸಿತು. ಈ ಬಗ್ಗೆ DoE ಪ್ರಕರಣವನ್ನು ನಿರ್ಧರಿಸುತ್ತದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಪ್ರಶ್ನೆಗಾಗಿ ನಗದು ಪ್ರಕರಣ: ಮಹುವಾ ಮೊಯಿತ್ರಾ ಸರ್ಕಾರಿ ಮನೆ ತೆರವು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್​​​

ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಉಡುಗೊರೆಗಳನ್ನು ಸ್ವೀಕರಿಸಿದ ಮತ್ತು ಸಂಸತ್ತಿನ ವೆಬ್‌ಸೈಟ್‌ನ ಯೂಸರ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ಅವರೊಂದಿಗೆ ಹಂಚಿಕೊಂಡ ಆರೋಪದಲ್ಲಿ ಮೊಯಿತ್ರಾ ಅವರನ್ನು “ಅನೈತಿಕ ನಡವಳಿಕೆ” ಯಲ್ಲಿ ತಪ್ಪಿತಸ್ಥರೆಂದು ಪರಿಗಣಿಸಿ ಕಳೆದ ವರ್ಷ ಡಿಸೆಂಬರ್ 8 ರಂದು ಲೋಕಸಭೆಯಿಂದ ಹೊರಹಾಕಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:16 pm, Thu, 18 January 24

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ