ಕೋಲ್ಕತ್ತಾ ವೈದ್ಯೆ ಹತ್ಯೆ ವಿರೋಧಿಸಿ ಟಿಎಂಸಿಗೆ ರಾಜೀನಾಮೆ ನೀಡಿದ ಸಂಸದ

ಆರ್‌ಜಿ ಕರ್ ಆಸ್ಪತ್ರೆ ಘಟನೆಯನ್ನು ವಿರೋಧಿಸಿ ಟಿಎಂಸಿ ರಾಜ್ಯಸಭಾ ಸಂಸದ ಜವಾಹರ್ ಸರ್ಕಾರ್ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದು ರಾಜೀನಾಮೆ ನೀಡಿರುವ ಬಗ್ಗೆ ತಿಳಿಸಿದ್ದಾರೆ.

ಕೋಲ್ಕತ್ತಾ ವೈದ್ಯೆ ಹತ್ಯೆ ವಿರೋಧಿಸಿ ಟಿಎಂಸಿಗೆ ರಾಜೀನಾಮೆ ನೀಡಿದ ಸಂಸದ
ಜವಾಹರ್Image Credit source: India Today
Follow us
|

Updated on: Sep 08, 2024 | 12:44 PM

ಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆಯನ್ನು ವಿರೋಧಿಸಿ ಟಿಎಂಸಿಗೆ ಸಂಸದ ಜವಾಹರ್ ಸರ್ಕಾರ್ ರಾಜೀನಾಮೆ ನೀಡಿದ್ದಾರೆ. ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಮತ್ತು ಅದರ ಹಿನ್ನೆಲೆಯಲ್ಲಿ ನಡೆದ ಎಲ್ಲವನ್ನು ಬಂಗಾಳ ಸರ್ಕಾರ ನಿರ್ವಹಿಸಿದ ಕ್ರಮವನ್ನು ವಿರೋಧಿಸಿ ಅಧಿಕಾರ ತೊರೆದಿದ್ದಾರೆ.

ಮುಖ್ಯಮಂತ್ರಿ ಮತ್ತು ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರಿಗೆ ಬರೆದ ಪತ್ರದಲ್ಲಿ, ಸರ್ಕಾರ್ ಅವರು ತಮ್ಮದೇ ಪಕ್ಷದಲ್ಲಿ ಭ್ರಷ್ಟರ ವರ್ತನೆ ಮಿತಿ ಮೀರಿದೆ ಎಂದಿದ್ದಾರೆ.

ತಪ್ಪಿತಸ್ಥರ ಬಗ್ಗೆ ಮಮತಾ ಬ್ಯಾನರ್ಜಿ ಸರ್ಕಾರ ತುರ್ತು ಕ್ರಮ ತೆಗೆದುಕೊಳ್ಳುತ್ತೆ ಎಂದು ಭಾವಿಸಿದ್ದೆ ಆದರೆ ಅಂತಹ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ. ರಾಜ್ಯದಲ್ಲಿ ಶೀಘ್ರ ಶಾಂತಿ ನೆಲೆಸಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಅವರು ಹೇಳಿದರು.

ಮತ್ತಷ್ಟು ಓದಿ:ಭ್ರಷ್ಟಾಚಾರ ಆರೋಪ; ಕೊಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಬಂಧನ

ಆರ್​ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಘಟನೆ ತೀವ್ರ ಆಘಾತವನ್ನುಂಟು ಮಾಡಿದೆ. ಧರಣಿ ನಿರತ ವೈದ್ಯರನ್ನು ಸಮಾಧಾನಗೊಳಿಸಲು ನೀವೇ ಮುಂದೆ ಬರುತ್ತೀರಿ ಎಂದುಕೊಂಡೆ ಆದರೆ ಅದು ಆಗಿಲ್ಲ.

ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯ ತರಬೇತಿ ನಿರತ ವೈದ್ಯೆ ಮೇಲೆ ಅತ್ಯಾಚಾರ ನಡೆದಿದೆ, ಆಕೆಯನ್ನು ಹತ್ಯೆ ಮಾಡಲಾಗಿತ್ತು. ಈ ವಿಚಾರವಾಗಿ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ