AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದಲ್ಲಿ ಗುಂಡಿಕ್ಕಿ ಟಿಎಂಸಿ ಕಾರ್ಯಕರ್ತನ ಹತ್ಯೆ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರೊಬ್ಬರ ಹತ್ಯೆ ನಡೆದಿದೆ. ಸ್ಥಳೀಯ ಮೂಲಗಳ ಪ್ರಕಾರ, ಹಾಲಿನ ವ್ಯಾಪಾರಿ ಮತ್ತು ಟಿಎಂಸಿ ಕಾರ್ಯಕರ್ತ ಸನಾತನ ಘೋಷ್ ಅವರು ಭಾನುವಾರ ರಾತ್ರಿ ಘಜ್ನಿಪುರದಿಂದ ಪಾರಾ ಗ್ರಾಮಕ್ಕೆ ಬೈಕಿನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಅವರನ್ನು ತಡೆದ ದುಷ್ಕರ್ಮಿಗಳು ಅವರಿಗೆ ಸಮೀಪದಿಂದ ಗುಂಡು ಹಾರಿಸಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ಪಶ್ಚಿಮ ಬಂಗಾಳದಲ್ಲಿ ಗುಂಡಿಕ್ಕಿ ಟಿಎಂಸಿ ಕಾರ್ಯಕರ್ತನ ಹತ್ಯೆ
ಗುಂಡಿನ ದಾಳಿ
ನಯನಾ ರಾಜೀವ್
|

Updated on: Jun 10, 2024 | 2:32 PM

Share

ಪಶ್ಚಿಮ ಬಂಗಾಳ(West Bengal)ದ ಮುರ್ಷಿದಾಬಾದ್​ನಲ್ಲಿ ಟಿಎಂಸಿ ಕಾರ್ಯಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹತ್ಯೆಯಲ್ಲಿ ಬಿಜೆಪಿಯ ಕೈವಾಡವಿದೆ ಎಂದು ಟಿಎಂಸಿ ಆರೋಪಿಸಿದೆ, ಆದರೆ ಬಿಜೆಪಿ ಆರೋಪವನ್ನು ತಳ್ಳಿಹಾಕಿದೆ.

ಸ್ಥಳೀಯ ಮೂಲಗಳ ಪ್ರಕಾರ, ಹಾಲಿನ ವ್ಯಾಪಾರಿ ಮತ್ತು ಟಿಎಂಸಿ ಕಾರ್ಯಕರ್ತ ಸನಾತನ ಘೋಷ್ ಅವರು ಭಾನುವಾರ ರಾತ್ರಿ ಘಜ್ನಿಪುರದಿಂದ ಪಾರಾ ಗ್ರಾಮಕ್ಕೆ ಬೈಕಿನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಅವರನ್ನು ತಡೆದ ದುಷ್ಕರ್ಮಿಗಳು ಅವರಿಗೆ ಸಮೀಪದಿಂದ ಗುಂಡು ಹಾರಿಸಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ಗುಂಡಿನ ಸದ್ದು ಮತ್ತು ಕಿರುಚಾಟದ ಸದ್ದಿನಿಂದ ಎಚ್ಚೆತ್ತ ಸ್ಥಳೀಯರು ರಕ್ತದ ಮಡುವಿನಲ್ಲಿದ್ದ ಆತನನ್ನು ಪತ್ತೆಮಾಡಿದ್ದಾರೆ. ಕ್ಷಣವೇ ಅವರನ್ನು ಹರಿಹರಪಾರ ಬ್ಲಾಕ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರನ್ನು ಬಹರಂಪುರದ ಮುರ್ಷಿದಾಬಾದ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಿದರು.

ಮತ್ತಷ್ಟು ಓದಿ: Jammu and Kashmir Terrorist Attack: ಜಮ್ಮುವಿನಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರಿಂದ ಗುಂಡಿನ ದಾಳಿ; 10 ಮಂದಿ ಸಾವು

ಗುಂಡೇಟಿನಿಂದ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಘೋಷ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘೋಷ್ ಹತ್ಯೆಯಲ್ಲಿ ಬಿಜೆಪಿಯ ಕೈವಾಡವಿದೆ ಎಂದು ಸ್ಥಳೀಯ ಟಿಎಂಸಿ ಸದಸ್ಯರು ಆರೋಪಿಸಿದ್ದಾರೆ. ಬಿಜೆಪಿ ನಾಯಕರು ಈ ಘಟನೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿ ಆರೋಪವನ್ನು ತಳ್ಳಿಹಾಕಿದ್ದಾರೆ.

ಮಣಿಪುರ ಮುಖ್ಯಮಂತ್ರಿ ಬೆಂಗಾವಲು ವಾಹನದ ಮೇಲೆ ದಾಳಿ, ಓರ್ವ ಭದ್ರತಾ ಸಿಬ್ಬಂದಿಗೆ ಗಾಯ ಮಣಿಪುರ ಮುಖ್ಯಮಂತ್ರಿ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಓರ್ವ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಬೆಂಗಾವಲು ವಾಹನದ ಮೇಲೆ ಸೋಮವಾರ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಉಗ್ರರು ಹೊಂಚುದಾಳಿ ನಡೆಸಿದ್ದು, ಓರ್ವ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಮುಖ್ಯಮಂತ್ರಿ ಕಚೇರಿಯ ಮೂಲಗಳ ಪ್ರಕಾರ, ಬೆಂಗಾವಲು ಪಡೆ ಇಂಫಾಲ್‌ನಿಂದ ಜಿರಿಬಾಮ್ ಜಿಲ್ಲೆಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ-37 ರ ರಲ್ಲಿ ಬೆಳಗ್ಗೆ 10.30 ರ ಸುಮಾರಿಗೆ ದಾಳಿ ನಡೆಸಿತು.

ಜೂನ್ 6 ರಂದು ಅಪರಿಚಿತ ದುಷ್ಕರ್ಮಿಗಳು ವ್ಯಕ್ತಿಯ ಶಿರಚ್ಛೇದ ಮಾಡಿದ ನಂತರ ಕಳೆದ ಕೆಲವು ದಿನಗಳಿಂದ ಅಶಾಂತಿಯಿಂದ ನಲುಗಿರುವ ಜಿರಿಬಾಮ್‌ಗೆ ಭೇಟಿ ನೀಡಲು ಮುಖ್ಯಮಂತ್ರಿ ಯೋಜಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ