Viral News: ತ್ರಿವಳಿ ತಲಾಖ್​ನಿಂದ ಬೇಸತ್ತು ಗಂಡನ ಹಿಂದೂ ಗೆಳೆಯನನ್ನೇ ಮದುವೆಯಾದ ಮಹಿಳೆ

ಆಕೆಯ ಪತಿ ಆಕೆಗೆ ತ್ರಿವಳಿ ತಲಾಖ್ ನೀಡಿದ ನಂತರ ರುಬಿನಾ ಪ್ರೇಂಪಾಲ್ ಅವರನ್ನು ಮದುವೆಯಾಗಲು ನಿರ್ಧರಿಸಿದರು. ರುಬಿನಾ ಹಿಂದೂ ಧರ್ಮವನ್ನು ಸ್ವೀಕರಿಸಿ, ಪ್ರೇಂಪಾಲ್ ಅವರನ್ನು ಮದುವೆಯಾಗಿದ್ದಾರೆ.

Viral News: ತ್ರಿವಳಿ ತಲಾಖ್​ನಿಂದ ಬೇಸತ್ತು ಗಂಡನ ಹಿಂದೂ ಗೆಳೆಯನನ್ನೇ ಮದುವೆಯಾದ ಮಹಿಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 24, 2022 | 4:32 PM

ಲಕ್ನೋ: ತನ್ನ ಪತಿ ತ್ರಿವಳಿ ತಲಾಖ್ (Triple Talaq) ನೀಡಿದ ಹಿನ್ನೆಲೆಯಲ್ಲಿ ನೊಂದ ಮುಸ್ಲಿಂ ಮಹಿಳೆಯೊಬ್ಬರು ಇದೀಗ ಹಿಂದೂ (Hindu) ಧರ್ಮವನ್ನು ಸ್ವೀಕರಿಸಿದ್ದಾರೆ. ರುಬಿನಾ ಎಂಬ ಹೆಸರನ್ನು ಪುಷ್ಪಾ ಎಂದು ಬದಲಾಯಿಸಿಕೊಂಡಿರುವ ಆ ಮಹಿಳೆ ಬರೇಲಿಯ ನವಾಬ್‌ಗಂಜ್‌ನಲ್ಲಿ ಹಿಂದೂ ವ್ಯಕ್ತಿಯನ್ನು ಮದುವೆಯಾಗಿದ್ದಾರೆ. ತನ್ನ ಮುಸ್ಲಿಂ ಗಂಡನ ಗೆಳೆಯನಾಗಿದ್ದ ಹಿಂದೂ ವ್ಯಕ್ತಿಯನ್ನೇ 2ನೇ ಬಾರಿಗೆ ಮದುವೆಯಾಗುವ ಮೂಲಕ ಆ ಮಹಿಳೆ ಅಚ್ಚರಿ ಮೂಡಿಸಿದ್ದಾರೆ.

ಉತ್ತರಾಖಂಡದ ಹಲ್ದ್ವಾನಿ ನಿವಾಸಿ ಶೋಯೆಬ್ ಎಂಬಾತನ ಜೊತೆ ರುಬಿನಾ ಪ್ರೇಮ ಸಂಬಂಧ ಹೊಂದಿದ್ದರು. ಸುಮಾರು 9 ವರ್ಷಗಳ ಹಿಂದೆ ಇವರಿಬ್ಬರು ವಿವಾಹವಾಗಿದ್ದರು. ಮದುವೆಯಾದ ಕೆಲವು ವರ್ಷಗಳ ನಂತರ ದಂಪತಿಗಳ ನಡುವೆ ಜಗಳ ಪ್ರಾರಂಭವಾಯಿತು. ದಿನವೂ ಶೋಯೆಬ್ ರುಬಿನಾಳನ್ನು ಥಳಿಸುತ್ತಿದ್ದರು. ಆ ದಂಪತಿಗೆ ಮೂವರು ಗಂಡು ಮಕ್ಕಳಿದ್ದಾರೆ.

ಇದನ್ನೂ ಓದಿ: ತ್ರಿವಳಿ ತಲಾಖ್ ಇನ್ನೂ ಇದೆಯಾ? ಗಂಡನ ವಿರುದ್ಧ ತ್ರಿವಳಿ ತಲಾಖ್​​ ಪ್ರಕರಣ ದಾಖಲಿಸಿದ ಕೊಪ್ಪಳ ಮಹಿಳೆ!

ಒಂದು ವಾರದ ಹಿಂದೆ ಶೋಯೆಬ್ ಮತ್ತು ರುಬಿನಾ ನಡುವೆ ಮತ್ತೆ ಜಗಳವಾಗಿತ್ತು. ಇದಾದ ನಂತರ ಆಕೆಯ ಪತಿ ಆಕೆಯ ಮೇಲೆ ಹಲ್ಲೆ ನಡೆಸಿ ತ್ರಿವಳಿ ತಲಾಖ್ ನೀಡಿದ್ದ. ರುಬಿನಾ 5 ವರ್ಷಗಳ ಹಿಂದೆ ಬರೇಲಿಯ ಹೊರವಲಯದಲ್ಲಿರುವ ನವಾಬ್‌ಗಂಜ್ ನಿವಾಸಿ ಪ್ರೇಂಪಾಲ್ ಅವರನ್ನು ಭೇಟಿಯಾಗಿದ್ದರು. ಅವರು ಕೂಡ ರುಬಿನಾಳ ಗಂಡನ ಸ್ನೇಹಿತರಾಗಿದ್ದರು. ಆಕೆಯ ಪತಿ ಆಕೆಗೆ ತ್ರಿವಳಿ ತಲಾಖ್ ನೀಡಿದ ನಂತರ ರುಬಿನಾ ಪ್ರೇಂಪಾಲ್ ಅವರನ್ನು ಮದುವೆಯಾಗಲು ನಿರ್ಧರಿಸಿದರು. ರುಬಿನಾ ಹಿಂದೂ ಧರ್ಮವನ್ನು ಸ್ವೀಕರಿಸಿ, ಪ್ರೇಂಪಾಲ್ ಅವರನ್ನು ಮದುವೆಯಾಗಿದ್ದಾರೆ. ಅಲ್ಲದೆ, ತನ್ನ ಹೆಸರನ್ನು ಪುಷ್ಪಾ ದೇವಿ ಎಂದು ಬದಲಾಯಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್