ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರಿಗೆ ಉದ್ಯಮಿಯೊಬ್ಬರು ಸಹಾಯ ಮಾಡುತ್ತಿರುವ ವಿಡಿಯೋ ವೈರಲ್

ತ್ರಿಪುರಾದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಉದ್ಯಮಿಯೊಬ್ಬರು ಶಸ್ತ್ರಚಿಕಿತ್ಸೆ ವೇಳೆ ವೈದ್ಯರಿಗೆ ಸಹಾಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ತನಿಖೆ ಆರಂಭವಾಗಿದೆ. ಶಸ್ತ್ರ ಚಿಕಿತ್ಸೆ ವೇಳೆ ವೈದ್ಯರನ್ನು ಹೊರತುಪಡಿಸಿ ಹೊರಗಿನವರಿಗೆ ಅವಕಾಶ ನೀಡುವುದಿಲ್ಲ ಎಂದು ಆಸ್ಪತ್ರೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರಿಗೆ ಉದ್ಯಮಿಯೊಬ್ಬರು ಸಹಾಯ ಮಾಡುತ್ತಿರುವ ವಿಡಿಯೋ ವೈರಲ್
ಶಸ್ತ್ರಚಿಕಿತ್ಸೆImage Credit source: India Today
Follow us
ನಯನಾ ರಾಜೀವ್
|

Updated on: Feb 11, 2024 | 8:32 AM

ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ(Operation) ವೇಳೆ ವೈದ್ಯರಿಗೆ ಉದ್ಯಮಿಯೊಬ್ಬರು ಸಹಾಯ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತ್ರಿಪುರಾ ಆರೋಗ್ಯ ಇಲಾಖೆಯು ಅಗರ್ತಲಾದ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಶಸ್ತ್ರಚಿಕಿತ್ಸಕರಿಗೆ ಉದ್ಯಮಿಯೊಬ್ಬರು ಆರ್ಥೋಪೆಡಿಕ್ ಇಂಪ್ಲಾಂಟ್ ಸಾಮಗ್ರಿಗಳನ್ನು ನೀಡಿ ಸಹಾಯ ಮಾಡಿದ ಘಟನೆಯ ಕುರಿತು ತನಿಖೆಗೆ ಆದೇಶಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಜನವರಿ 19 ರಂದು ಇಂದಿರಾಗಾಂಧಿ ಸ್ಮಾರಕ (ಐಜಿಎಂ) ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ರೋಗಿಗಳ ಶಸ್ತ್ರಚಿಕಿತ್ಸಾ ವಿಧಾನಗಳಲ್ಲಿ ವ್ಯಕ್ತಿಯೊಬ್ಬರು ಶಸ್ತ್ರಚಿಕಿತ್ಸಕರ ಏಪ್ರನ್ ಧರಿಸಿ ಇಬ್ಬರು ಮೂಳೆ ಶಸ್ತ್ರಚಿಕಿತ್ಸಕರಿಗೆ ಸಹಾಯ ಮಾಡುತ್ತಿರುವುದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಐಜಿಎಂ ಆಸ್ಪತ್ರೆಯು ತ್ರಿಪುರಾದ ಎರಡನೇ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಾಗಿದೆ. ಜಂತು ದೇಬನಾಥ್ ಎಂದು ಗುರುತಿಸಲಾದ ವ್ಯಕ್ತಿ ಆಪರೇಷನ್ ಸಂದರ್ಭದಲ್ಲಿ ಅಲ್ಲಿದ್ದರು ಎನ್ನಲಾಗಿದೆ. ಈ ವಿಡಿಯೋ ಆಧಾರದ ಮೇಲೆ ಆರೋಗ್ಯ ಸೇವೆಗಳ ಜಂಟಿ ನಿರ್ದೇಶಕ ಡಾ ಸೌವಿಕ್ ದೆಬ್ಬರ್ಮಾ ನೇತೃತ್ವದ ನಾಲ್ವರು ಸದಸ್ಯರ ಸಮಿತಿಯು ಘಟನೆಯ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಿ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: Guntur GGH: ಪೋಕಿರಿ ಪಿಕ್ಚರ್​​​ ತೋರಿಸ್ತಾ ಮೆದುಳಿಗೇ ಶಸ್ತ್ರಚಿಕಿತ್ಸೆ ಮಾಡಿ, ಪವಾಡ ಮೆರೆದ ಸರ್ಕಾರಿ ಆಸ್ಪತ್ರೆ ವೈದ್ಯರು

ಘಟನೆ ನಿಜವೆಂದು ಸಾಬೀತಾದರೆ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಉದ್ಯಮಿಯಾಗಲಿ ಇನ್ಯಾರೇ ಆಗಲಿ ಇರುವಂತಿಲ್ಲ ಎಂದಿದ್ದಾರೆ. ಆಪರೇಷನ್ ಥಿಯೇಟರ್‌ನಲ್ಲಿ ಶಸ್ತ್ರಚಿಕಿತ್ಸಾ ವಿಧಾನಗಳ ಸಮಯದಲ್ಲಿ ಜಂತು ದೇಬಂತ್ ಇರಲಿಲ್ಲ ಅಥವಾ ಮೂಳೆ ಶಸ್ತ್ರಚಿಕಿತ್ಸಕರಿಗೆ ಸಹಾಯ ಮಾಡಲಿಲ್ಲ ಎಂದು ಐಜಿಎಂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದೇಬಶ್ರೀ  ಹೇಳಿದ್ದಾರೆ. ಹೊರಗಿನವರನ್ನು ಆಪರೇಷನ್ ಥಿಯೇಟರ್​ಗೆ ಬಿಟ್ಟುಕೊಳ್ಳುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ, ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್