AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tripura Rath Yatra: ತ್ರಿಪುರಾ; ರಥೋತ್ಸವದ ವೇಳೆ ತಗುಲಿದ ಹೈಟೆನ್ಷನ್ ತಂತಿ, 7 ಮಂದಿ ಸಾವು

ಹೈಟೆನ್ಷನ್ ತಂತಿ ತಗುಲಿದಾಗ ಸಾವಿರಾರು ಜನರು ರಥವನ್ನು ಎಳೆಯುತ್ತಿದ್ದರು. ಎಲ್ಲಾ ಗಾಯಾಳುಗಳಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಹಾಯಕ ಇನ್ಸ್‌ಪೆಕ್ಟರ್ ಜನರಲ್ (ಕಾನೂನು ಮತ್ತು ಸುವ್ಯವಸ್ಥೆ) ಜ್ಯೋತಿಷ್ಮನ್ ದಾಸ್ ಚೌಧರಿ ತಿಳಿಸಿದ್ದಾರೆ.

Tripura Rath Yatra: ತ್ರಿಪುರಾ; ರಥೋತ್ಸವದ ವೇಳೆ ತಗುಲಿದ ಹೈಟೆನ್ಷನ್ ತಂತಿ, 7 ಮಂದಿ ಸಾವು
ತ್ರಿಪುರಾ; ರಥೋತ್ಸವದ ವೇಳೆ ತಗುಲಿದ ಹೈಟೆನ್ಷನ್ ತಂತಿ, 7 ಮಂದಿ ಸಾವು
Follow us
Ganapathi Sharma
|

Updated on: Jun 28, 2023 | 10:18 PM

ಅಗರ್ತಲ: ತ್ರಿಪುರಾದ ಕುಮಾರ್‌ಘಾಟ್ ಪಟ್ಟಣದ (Kumarghat) ಉನಕೋಟಿಯಲ್ಲಿ ರಥೋತ್ಸವದ ವೇಳೆ ರಥಕ್ಕೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಭಗವಾನ್ ಜಗನ್ನಾಥನ ‘ಉಲ್ಟಾ ರಥ ಯಾತ್ರೆ’ (Rath Yatra) ಉತ್ಸವದ ಸಂದರ್ಭದಲ್ಲಿ, ಕುಮಾರ್‌ಘಾಟ್ ಪ್ರದೇಶದಲ್ಲಿ ಸಂಜೆ 4.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈಟೆನ್ಷನ್ ತಂತಿ ತಗುಲಿ ಅಪಘಾತ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಪ್ರಾಣಹಾನಿಗೆ ಸಂತಾಪ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರ ಅವರ ಜೊತೆ ನಿಂತಿದೆ ಎಂದು ಸಹಾ ಹೇಳಿದ್ದಾರೆ.

ಹೈಟೆನ್ಷನ್ ತಂತಿ ತಗುಲಿದಾಗ ಸಾವಿರಾರು ಜನರು ರಥವನ್ನು ಎಳೆಯುತ್ತಿದ್ದರು. ಎಲ್ಲಾ ಗಾಯಾಳುಗಳಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಹಾಯಕ ಇನ್ಸ್‌ಪೆಕ್ಟರ್ ಜನರಲ್ (ಕಾನೂನು ಮತ್ತು ಸುವ್ಯವಸ್ಥೆ) ಜ್ಯೋತಿಷ್ಮನ್ ದಾಸ್ ಚೌಧರಿ ತಿಳಿಸಿದ್ದಾರೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Chandrashekhar Azad: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಉತ್ತರ ಪ್ರದೇಶದ ಸಹರಾನ್​ಪುರದಲ್ಲಿ ಗುಂಡಿನ ದಾಳಿ

ಸುಟ್ಟಗಾಯಗಳಾಗಿರುವ ಇಬ್ಬರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದರ ನಂತರ, 10-12 ಜನರನ್ನು ಆಸ್ಪತ್ರೆಗೆ ಕರೆತರಲಾಯಿತು. ಆ ಪೈಕಿ ಇಬ್ಬರು ಮಕ್ಕಳು ಸೇರಿದಂತೆ 7 ಮಂದಿ ಮೃತಪಟ್ಟರು. 6-7 ಜನರಿಗೆ ಸುಟ್ಟ ಗಾಯಗಳಾಗಿವೆ. ಇನ್ನು ಆರು ಮಂದಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಮಾರ್‌ಘಾಟ್ ಉಪವಿಭಾಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಸಂಜಿತ್ ಚಕ್ಮಾ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ