AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನದ ಅದ್ಭುತ ಅನುಭವದಲ್ಲೊಂದು; ಅಬುಧಾಬಿಯ ಬಿಎಪಿಎಸ್ ಹಿಂದೂ ಮಂದಿರಕ್ಕೆ ಸಿಎಂ ಚಂದ್ರಬಾಬು ನಾಯ್ಡು ಭೇಟಿ

ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಅಬುಧಾಬಿಯ ಬಿಎಪಿಎಸ್ ಹಿಂದೂ ಮಂದಿರವನ್ನು 'ವಿಶಿಷ್ಟ ಯಶಸ್ಸಿನ ಕಥೆ' ಎಂದು ಬಣ್ಣಿಸಿದ್ದಾರೆ. ವಾರಪೂರ್ತಿ ನಡೆಯುತ್ತಿರುವ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಅಬುಧಾಬಿಯಲ್ಲಿರುವ ಬಿಎಪಿಎಸ್ ಹಿಂದೂ ಮಂದಿರಕ್ಕೆ ಭೇಟಿ ನೀಡಿ ಅದನ್ನು "ನನ್ನ ಜೀವನದ ಅತ್ಯಂತ ಅಸಾಧಾರಣ ಅನುಭವಗಳಲ್ಲಿ ಒಂದು" ಎಂದು ಬಣ್ಣಿಸಿದ್ದಾರೆ.

ಜೀವನದ ಅದ್ಭುತ ಅನುಭವದಲ್ಲೊಂದು; ಅಬುಧಾಬಿಯ ಬಿಎಪಿಎಸ್ ಹಿಂದೂ ಮಂದಿರಕ್ಕೆ ಸಿಎಂ ಚಂದ್ರಬಾಬು ನಾಯ್ಡು ಭೇಟಿ
Chandrababu Naidu
ಸುಷ್ಮಾ ಚಕ್ರೆ
|

Updated on: Oct 24, 2025 | 7:22 PM

Share

ಅಬುಧಾಬಿ, ಅಕ್ಟೋಬರ್ 24: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಗೆ ಭೇಟಿ ನೀಡಿದ್ದಾರೆ. ನಿನ್ನೆ ಯುಎಇಗೆ ಮೂರು ದಿನಗಳ ಭೇಟಿಗಾಗಿ ತೆರಳಿರುವ ಅವರು ಅಬುಧಾಬಿಯಲ್ಲಿರುವ ಬಿಎಪಿಎಸ್ (ಬೋಚಸಂವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ) ಹಿಂದೂ ಮಂದಿರಕ್ಕೆ ಭೇಟಿ ನೀಡಿದ್ದಾರೆ.

ಯುಎಇಗೆ 3 ದಿನಗಳ ಭೇಟಿ ನೀಡಿರುವ ಚಂದ್ರಬಾಬು ನಾಯ್ಡು ಅವರು, ಮಧ್ಯಪ್ರಾಚ್ಯದ ಮೊದಲ ಸಾಂಪ್ರದಾಯಿಕ ಕಲ್ಲಿನ ಹಿಂದೂ ದೇವಾಲಯದಲ್ಲಿ ಕೈಯಿಂದ ಕೆತ್ತಿದ ವಿಶಿಷ್ಟ ಲಕ್ಷಣಗಳನ್ನು ವೀಕ್ಷಿಸಿದ ನಂತರ ಭಾವಪರವಶರಾದರು. “ಇದೊಂದು ಅದ್ಭುತವಾದ ಅನುಭವ. ಇದು ನಿಜವಾದ ಪವಾಡ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ದೇಶವಾಗಿ ಮಾಡೋಣ; ಬಿಎಪಿಎಸ್​ ಸ್ವಯಂಸೇವಕರನ್ನು ಹುರಿದುಂಬಿಸಿದ ಮೋದಿ

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಬಿಎಪಿಎಸ್ ಹಿಂದೂ ಮಂದಿರದ ಮುಖ್ಯಸ್ಥ ಬ್ರಹ್ಮವಿಹರಿದಾಸ್ ಸ್ವಾಮಿ ಮಾರ್ಗದರ್ಶನದ ಪ್ರವಾಸವನ್ನು ನೀಡಿದರು. ಅವರು ದೇವಾಲಯದ ವಿನ್ಯಾಸ, ನಿರ್ಮಾಣ ಮತ್ತು ಸಾಂಸ್ಕೃತಿಕ ವೈಶಿಷ್ಟ್ಯಗಳ ಬಗ್ಗೆ ವಿವರಿಸಿದರು. ಸಾಂಪ್ರದಾಯಿಕ ಮೌಲ್ಯಗಳನ್ನು ಕಳೆದುಕೊಳ್ಳದೆ ಆಧುನಿಕ ತಂತ್ರಗಳ ಮೂಲಕ ನಂಬಿಕೆಯನ್ನು ಹೇಗೆ ವ್ಯಕ್ತಪಡಿಸಬಹುದು ಎಂಬುದನ್ನು ಈ ಮಂದಿರವು ಪ್ರದರ್ಶಿಸಿದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಇದನ್ನೂ ಓದಿ: ಭಾಷಾ ವಿವಾದದ ನಡುವೆಯೇ ಹಿಂದಿ ಕಲಿಕೆ ಸಮರ್ಥಿಸಿಕೊಂಡ ಸಿಎಂ ಚಂದ್ರಬಾಬು ನಾಯ್ಡು

ಮುಖ್ಯ ದೇವಾಲಯ ಪ್ರದೇಶದ ಒಳಗೆ ಸಿಎಂ ಚಂದ್ರಬಾಬು ನಾಯ್ಡು ಪ್ರಾರ್ಥನೆ ಸಲ್ಲಿಸಿದರು. ನಂತರ ಮಂದಿರದ ನಿರ್ಮಾಣದಲ್ಲಿ ಭಾಗಿಯಾಗಿರುವ ಸ್ವಯಂಸೇವಕರು ಮತ್ತು ಕುಶಲಕರ್ಮಿಗಳನ್ನು ಭೇಟಿಯಾದರು. ಈ ಮಂದಿರವು ನಾಗರಿಕತೆಗಳಾದ್ಯಂತ ಶಾಂತಿಯ ಬೋಧನೆಗಳನ್ನು ಸಂಯೋಜಿಸುತ್ತದೆ, ಧರ್ಮ ಅಥವಾ ರಾಷ್ಟ್ರೀಯತೆಯನ್ನು ಮೀರಿ ಏಕತೆಯನ್ನು ಉತ್ತೇಜಿಸುತ್ತದೆ ಎಂದು ಚಂದ್ರಬಾಬು ನಾಯ್ಡು ಬಣ್ಣಿಸಿದ್ದಾರೆ.

“ಇದು ನನ್ನ ಜೀವಿತಾವಧಿಯಲ್ಲಿ ಒಂದು ಅಸಾಧಾರಣ ಅನುಭವ. ನಾನು ಅನೇಕ ಸಾಧನೆಗಳನ್ನು ಕಂಡಿದ್ದೇನೆ, ಆದರೆ ಇಂದು ನಾನು ಇಲ್ಲಿ ಕಂಡದ್ದು ನಿಜಕ್ಕೂ ನಂಬಲಾಗದ ವಿಷಯ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು