ವಿಶ್ವಸಂಸ್ಥೆ ಭದ್ರತಾ ಮಂಡಳಿ ಭಯೋತ್ಪಾದನ ನಿಗ್ರಹ ಸಮಿತಿ ಅಧ್ಯಕ್ಷರಾಗಿ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್​.ತಿರುಮೂರ್ತಿ ಅಧಿಕಾರ ಸ್ವೀಕಾರ

ತಿರುಮೂರ್ತಿಯವರು ವಿಶ್ವಸಂಸ್ಥೆಗೆ ಖಾಯಂ ಪ್ರತಿನಿಧಿಯಾಗಿ ನೇಮಕಗೊಳ್ಳುವುದಕ್ಕೂ ಮೊದಲು, 2020ರಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಭಯೋತ್ಪಾದನ ನಿಗ್ರಹ ಸಮಿತಿ ಅಧ್ಯಕ್ಷರಾಗಿ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್​.ತಿರುಮೂರ್ತಿ ಅಧಿಕಾರ ಸ್ವೀಕಾರ
ಟಿಎಸ್​ ತಿರುಮೂರ್ತಿ
Follow us
TV9 Web
| Updated By: Lakshmi Hegde

Updated on:Jan 05, 2022 | 9:39 AM

ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ(Permanent Representative to the UN) ಯಾಗಿರುವ ಟಿ.ಎಸ್​. ತಿರುಮೂರ್ತಿ(TS Tirumurti), ಭದ್ರತಾ ಮಂಡಳಿಯ ಭಯೋತ್ಪಾದನಾ ನಿಗ್ರಹ ಸಮಿತಿ 2022ರ ಅಧ್ಯಕ್ಷರಾಗಿ ನಿನ್ನೆ (ಜನವರಿ 4)ಅಧಿಕಾರ ಸ್ವೀಕಾರ ಮಾಡಿದ್ದಾರೆ. ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಶಾಶ್ವತವಲ್ಲದ ಸದಸ್ಯ ಸ್ಥಾನವನ್ನು ಹೊಂದಿದೆ. ಇದೀಗ ಅಧ್ಯಕ್ಷರಾಗಿ ನೇಮಕವಾಗಿರುವ ತಿರುಮೂರ್ತಿ ಅವರ ಆಡಳಿತದ ಅವಧಿ 2022ರ ಡಿಸೆಂಬರ್​ 31ಕ್ಕೆ ಮುಕ್ತಾಯಗೊಳ್ಳಲಿದೆ. 

ವಿಶ್ವಸಂಸ್ಥೆಯ ಭಯೋತ್ಪಾದನ ನಿಗ್ರಹ ಸಮಿತಿ (CTC) 2001ರಲ್ಲಿ ಸ್ಥಾಪನೆಯಾಗಿದೆ. ಯುಎಸ್​ ಮೇಲೆ ಸೆಪ್ಟೆಂಬರ್​ 11ರಂದು ಭೀಕರ ಭಯೋತ್ಪಾದಕ ದಾಳಿಯಾಗಿತ್ತು. ಅದರ ಬೆನ್ನಲ್ಲೇ ಈ ಸಮಿತಿ ಹುಟ್ಟಿಕೊಂಡಿದೆ. ಇದು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಂಗಸಂಸ್ಥೆಯೇ ಆಗಿದೆ. ಭಯೋತ್ಪಾದನಾ ನಿಗ್ರಹ ಸಮಿತಿಯ ಕಾರ್ಯನಿರ್ವಾಹಕ ನಿರ್ದೇಶನಾಲಯ(ಸಿಟಿಇಡಿ)ದ ಆದೇಶವನ್ನು ನವೀಕರಿಸುವ ನಿರ್ಣಯದ ಪರವಾಗಿ ಭಾರತ ಮತಚಲಾಯಿಸಿದ ಮರುದಿನವೇ ಟಿ.ಎಸ್​. ತಿರುಮೂರ್ತಿ ಸಿಟಿಸಿಯ ಅಧ್ಯಕ್ಷರಾಗಿ ನೇಮಕರಾಗಿದ್ದಾರೆ.

ತಿರುಮೂರ್ತಿಯವರು ವಿಶ್ವಸಂಸ್ಥೆಗೆ ಖಾಯಂ ಪ್ರತಿನಿಧಿಯಾಗಿ ನೇಮಕಗೊಳ್ಳುವುದಕ್ಕೂ ಮೊದಲು, 2020ರಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಗಲ್ಫ್, ಅರಬ್, ಆಫ್ರಿಕಾ ಮತ್ತು ಭಾರತದ ಅಭಿವೃದ್ಧಿ ಪಾಲುದಾರಿಕೆ ಒಳಗೊಂಡಿರುವ ಆರ್ಥಿಕ ಖಾತೆ ವಿಭಾಗದಲ್ಲೂ ಕೆಲಸ ಮಾಡಿದ್ದರು. ಹಾಗೇ, ತಿರುಮೂರ್ತಿಯವರು ಈ ಹಿಂದೆ ಈಜಿಪ್ಟ್​​ನ ಭಾರತೀಯ ರಾಯಭಾರಿಯಾಗಿದ್ದರು.  ಜಿನಿವಾದಲ್ಲಿದ್ದುಕೊಂಡು ವಿಶ್ವಸಂಸ್ಥೆಗೆ ಭಾರತದ ಖಾಯಂ ಮಿಷನ್‌ನಲ್ಲಿ ಕಾರ್ಯನಿರ್ವಹಿಸಿದ್ದರು. ಪ್ಯಾಲೇಸ್ಟಿನಿಯನ್ ಪ್ರಾಧಿಕಾರಕ್ಕೆ ಭಾರತದ ಪ್ರತಿನಿಧಿಯಾಗಿದ್ದರು. ಆಗ ಅವರು ಗಾಜಾದಲ್ಲಿ ಇದ್ದರು. ಯುನೈಟೆಡ್​ ನೇಶನ್ಸ್​ನ ಭಾರತದ ರಾಯಭಾರಿ ಕೌನ್ಸಿಲರ್​ ಆಗಿ, ಇಂಡೋನೇಷ್ಯಾದ ಜಕಾರ್ತಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಉಪಮುಖ್ಯಸ್ಥರಾಗಿ, ಮಲೇಷಿಯಾದ ಕೌಲಾ ಲಂಪುರ್​​ನಲ್ಲಿ ಭಾರತದ ಹೈಕಮಿಷನರ್​ ಆಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡರ ಉದ್ಧಟತನ; ತಾಕತ್ತಿದ್ರೆ ಎಂಇಎಸ್ ನಿಷೇಧಿಸಿ ಎಂದು ಕರ್ನಾಟಕ ಸರ್ಕಾರಕ್ಕೆ ಸವಾಲ್

Published On - 9:32 am, Wed, 5 January 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ