AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕೊವಿಡ್ ನೆಗೆಟಿವ್ ಸರ್ಟಿಫಿಕೆಟ್, ಕೊರೊನಾ ಲಸಿಕೆ ಕಡ್ಡಾಯ

Tirumala Tirupati Devasthanams: ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಅಥವಾ ಎರಡೋ ಡೋಸ್ ಕೊರೊನಾ ಲಸಿಕೆಯ ಸರ್ಟಿಫಿಕೆಟ್ ಎರಡರಲ್ಲಿ ಒಂದು ಕಡ್ಡಾಯವಾಗಿದೆ ಎಂದು ಟಿಟಿಡಿ ಚೇರ್ಮನ್ ವೈ.ಎಸ್. ಸುಬ್ಬಾ ರೆಡ್ಡಿ ತಿಳಿಸಿದ್ದಾರೆ.

TTD: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕೊವಿಡ್ ನೆಗೆಟಿವ್ ಸರ್ಟಿಫಿಕೆಟ್, ಕೊರೊನಾ ಲಸಿಕೆ ಕಡ್ಡಾಯ
ತಿರುಪತಿ
TV9 Web
| Updated By: ಸುಷ್ಮಾ ಚಕ್ರೆ|

Updated on:Sep 24, 2021 | 1:09 PM

Share

ತಿರುಪತಿ: ಭಾರತದ ಅತ್ಯಂತ ಶ್ರೀಮಂತ ದೇವಸ್ಥಾನ ಎಂದೇ ಕರೆಯಲ್ಪಡುವ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಇನ್ನು ಮುಂದೆ ಕೊವಿಡ್ ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಅವಕಾಶ. ಅಥವಾ ಕೊರೊನಾ ನೆಗೆಟಿವ್ ವರದಿಯನ್ನು ನೀಡುವುದು ಕಡ್ಡಾಯ. ಅ. 1ರಿಂದ ಈ ಹೊಸ ನಿಯಮ ಜಾರಿಯಾಗಲಿದೆ.

ಆಂಧ್ರಪ್ರದೇಶದಲ್ಲೂ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ನಿಯಮವನ್ನು ಜಾರಿಗೊಳಿಸಲಾಗಿದೆ. ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಅಥವಾ ಎರಡೋ ಡೋಸ್ ಕೊರೊನಾ ಲಸಿಕೆಯ ಸರ್ಟಿಫಿಕೆಟ್ ಎರಡರಲ್ಲಿ ಒಂದು ಕಡ್ಡಾಯವಾಗಿದೆ ಎಂದು ಟಿಟಿಡಿ ಚೇರ್ಮನ್ ವೈ.ಎಸ್. ಸುಬ್ಬಾ ರೆಡ್ಡಿ ತಿಳಿಸಿದ್ದಾರೆ.

ಕೊವಿಡ್ ಲಸಿಕೆಯ ಒಂದು ಡೋಸ್ ಮಾತ್ರ ಪಡೆದವರಿಗೆ ದೇವಸ್ಥಾನದೊಳಗೆ ಪ್ರವೇಶವಿಲ್ಲ. ಹಾಗೇ, ಕೊರೊನಾ ನೆಗೆಟಿವ್ ಸರ್ಟಿಫಿಕೆಟ್ ಕೂಡ 72 ಗಂಟೆಯೊಳಗೆ ಪಡೆದಿದ್ದಾಗಿರಬೇಕು. ಆನ್​ಲೈನ್ ವಿಶೇಷ ಪ್ರವೇಶದ ಟಿಕೆಟ್ ಮೂಲಕ ಬರುವ ಭಕ್ತರು ಅಥವಾ ದರ್ವ ಸೇವಾ ದರ್ಶನದ ಟಿಕೆಟ್ ಪಡೆದವರಿಗೆ ಕೂಡ ಇದು ಅನ್ವಯವಾಗಲಿದೆ ಎಂದು ರೆಡ್ಡಿ ಮಾಹಿತಿ ನೀಡಿದ್ದಾರೆ.

ಸೆ. 9ರಿಂದ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರವೇಶ ಕಲ್ಪಿಸಲಾಗುತ್ತಿದೆ. ಮೊದಲು ಚಿತ್ತೂರು ಜಿಲ್ಲೆಯ ಭಕ್ತರಿಗೆ ಮಾತ್ರ ಸದ್ಯಕ್ಕೆ ಪ್ರತಿದಿನ ದೇವ ದರ್ಶನ ಪಡೆಯಲು ಅವಕಾಶ ನೀಡಲಾಗಿತ್ತು. ನಾಳೆಯಿಂದ ಅಂದರೆ ಸೆ. 25ರಿಂದ ತಿರುಪತಿಗೆ ಬರುವ ಭಕ್ತರು ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯಲು 300 ರೂ. ನೀಡಿ ಟಿಕೆಟ್ ಪಡೆಯಬಹುದು.

ಇದನ್ನೂ ಓದಿ: ತಿರುಮಲ ತಿರುಪತಿಯಲ್ಲಿ ದೇವರ ದರ್ಶನ ಸಮಯ ವಿಸ್ತರಣೆ; ರಾತ್ರಿ 11ಗಂಟೆವರೆಗೂ ಭಕ್ತರಿಗೆ ಅವಕಾಶ 

Coronavirus cases in India: ದೇಶದಲ್ಲಿ 31,382 ಹೊಸ ಕೊವಿಡ್ ಪ್ರಕರಣ ಪತ್ತೆ, 318 ಸಾವು

(TTD makes COVID-19 vaccine certificate Coronavirus negative RT-PCR test report mandatory for Lord Venkateshwara temple)

Published On - 1:05 pm, Fri, 24 September 21

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ