Vaikunta Ekadasi 2023 ವೈಕುಂಟ ಏಕಾದಶಿ ದಿನದಂದು ತಿರುಪತಿ ತಿಮ್ಮಪ್ಪನ ಹುಂಡಿಗೆ ದಾಖಲೆ ಪ್ರಮಾಣದಲ್ಲಿ ಕಾಣಿಕೆ ಸಂಗ್ರಹ

ವಿಶ್ವದ ಅತ್ಯಂತ ಶ್ರೀಮಂತ ದೇಗುಲಗಳ ಪೈಕಿ ಒಂದಾದ ತಿರುಪತಿ ತಿಮ್ಮಪ್ಪ ಹುಂಡಿಗೆ ವೈಕುಂಟ ಏಕಾದಶಿ ದಿನದಂದು ದಾಖಲೆ ಪ್ರಮಾಣದಲ್ಲಿ ಕಾಣಿಕೆ ಹರಿದುಬಂದಿದೆ.

Vaikunta Ekadasi 2023 ವೈಕುಂಟ ಏಕಾದಶಿ ದಿನದಂದು ತಿರುಪತಿ ತಿಮ್ಮಪ್ಪನ ಹುಂಡಿಗೆ ದಾಖಲೆ ಪ್ರಮಾಣದಲ್ಲಿ ಕಾಣಿಕೆ ಸಂಗ್ರಹ
ತಿರುಪತಿ ತಿಮ್ಮಪ್ಪ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 03, 2023 | 10:31 PM

ತಿರುಪತಿ: ನಿನ್ನೆ (ಜನವರಿ 02) ವೈಕುಂಠ ಏಕಾದಶಿಯಂದು ತಿರುಪತಿ ತಿಮ್ಮಪ್ಪನ ಹುಂಡಿಗೆ ದಾಖಲೆ ಪ್ರಮಾಣದಲ್ಲಿ ಕಾಣಿಕೆ ಹರಿದುಬಂದಿದೆ. ವೈಕುಂಠ ಏಕಾದಶಿ(Vaikunta Ekadasi) ದಿನ ವ್ರತ ಆಚರಿಸಿ ಗೋವಿಂದನ ದರ್ಶನ ಪಡೆದ್ರೆ ಇಷ್ಟಾರ್ಥ ಸಿದ್ಧಿಯಾಗತ್ತೆ ಎನ್ನುವ ನಂಬಿಕೆ ಇದೆ. ಹೀಗಾಗಿ ಲಕ್ಷಾಂತರ ಭಕ್ತರು ತಿರುಪತಿ ತಿಮ್ಮಪ್ಪನ9Tirupati Timmappa) ಸನ್ನಿಧಿಗೆ ಭೇಟಿ ನೀಡಿದ್ದು, ಒಂದೇ ದಿನದಲ್ಲಿ ತಿಮ್ಮಪ್ಪನ ಹುಂಡಿಗೆ ಬರೋಬ್ಬರಿ 7.68 ಕೋಟಿ ರೂಪಾಯಿ ಸಂಗ್ರಹವಾಗಿದೆ. ಇದು ಈವರೆಗಿನ ಗರಿಷ್ಠ ಮೊತ್ತಗಿದೆ.

ಇದನ್ನೂ ಓದಿ: ಇದೇ ಮೊದಲ ಬಾರಿಗೆ ಆಸ್ತಿ ಘೋಷಿಸಿದ TTD, ಅಬ್ಬಬ್ಬಾ…ತಿರುಪತಿ ತಿಮ್ಮಪ್ಪ ಎಷ್ಟು ಶ್ರೀಮಂತ ಗೊತ್ತಾ?

ತಿರುಮಲದಲ್ಲಿ ವೈಕುಂಠ ಏಕಾದಶಿಯ ಸೊಬಗನ್ನ ನೋಡೋದೆ ಕಣ್ಣಿಗೆ ಹಬ್ಬವಾಗಿತ್ತು. ವೆಂಕಟೇಶ್ವರನ ಸ್ವರ್ಣ ರಥೋತ್ಸವ ಕೂಡಾ ಅದ್ಧೂರಿಯಾಗಿ ನೆರವೇರಿದ್ದು, ದೇಗುಲಗಳಲ್ಲಿ ಭಕ್ತಿಯ ಭಾವ ಮೇಳೈಸಿತ್ತು. ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ಇತರೆ ರಾಜ್ಯಗಳ ಚುನಾಯಿತ ಪ್ರತಿನಿಧಿಗಳು, ನ್ಯಾಯಾಧೀಶರು, ಅಧಿಕಾರಿಗಳು, ಸೆಲೆಬ್ರಿಟಿಗಳು ಮತ್ತು ಇತರ ವಿಐಪಿಗಳು ಸೋಮವಾರ ವೈಕುಂಠ ಏಕಾದಶಿಯಂದು ತಿರುಮಲದಲ್ಲಿರುವ ಬೆಟ್ಟದ ದೇವಾಲಯಕ್ಕೆ ಭೇಟಿ ನೀಡಿ ಶ್ರೀನಿವಾಸನನ್ನು ಕಣ್ತುಂಬಿಕೊಂಡಿದ್ದಾರೆ. ಹೊಸ ವರ್ಷದ ಹಿಂದಿನ ದಿನವೇ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು. ಡಿಸೆಂಬರ್ 31ರಿಂದಲೇ ತಿರುಮಲದಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಲ್ಲಲು ಪ್ರಾರಂಭಿಸಿದ್ದರು. ಕಾಲ್ನಡಿಗೆ ಮೂಲಕ ಬೆಟ್ಟ ಹತ್ತುವ ಭಕ್ತರ ಸಂಖ್ಯೆ ಕೂಡಾ ಅಧಿಕವಾಗಿತ್ತು.

ಹೊಸ ವರ್ಷ ಬಂದ ಬೆನ್ನಲ್ಲೇ ವೈಕುಂಠ ಏಕಾದಶಿ ಮತ್ತು ವೈಕುಂಠ ದ್ವಾದಶಿ ಉತ್ಸವ ಏಕಕಾಲದಲ್ಲಿ ನಡೆದಿದೆ. ಹೀಗಾಗಿ ತಿರುಮಲ ದೇವಸ್ಥಾನದಲ್ಲಿ ಸೋಮವಾರದಂದು ಅತಿ ಹೆಚ್ಚು ಹುಂಡಿ ಸಂಗ್ರಹವಾಗಿದೆ. ಈ ಹಿಂದೆ 2022ರ ಅಕ್ಟೋಬರ್ 23ರಂದು 6.3 ಕೋಟಿ ರೂಪಾಯಿ ಸಂಗ್ರಹವಾಗಿತ್ತು. ಇದು ಹಿಂದೆ ಒಂದೇ ದಿನ ಸಂಗ್ರಹವಾದ ಅತಿ ಹೆಚ್ಚು ಹುಂಡಿ ಮೊತ್ತವಾಗಿತ್ತು. ಇದೀಗ ಆ ದಾಖಲೆ ಮುರಿದಿದೆ.

ತಿರುಪತಿ ತಿಮ್ಮಪ್ಪ ದೇವಾಲಯದ ಆಸ್ತಿ

ವಿಶ್ವದ ಅತ್ಯಂತ ಶ್ರೀಮಂತ ದೇಗುಲಗಳ ಪೈಕಿ ಒಂದಾದ ತಿರುಪತಿ ತಿಮ್ಮಪ್ಪ ದೇವಾಲಯ, ಜಮೀನು ಸೇರಿದಂತೆ ಒಟ್ಟು 85,705 ಕೋಟಿ ರು. ಮೌಲ್ಯದಷ್ಟು ಸ್ಥಿರಾಸ್ತಿ ಹೊಂದಿದೆ. ಅಲ್ಲದೇ ದೇಶದ ವಿವಿಧ ಕಡೆ ಒಟ್ಟು 7123 ಎಕರೆ ಪ್ರದೇಶದಲ್ಲಿ ತಿರುಪತಿ ದೇಗುಲದ 960 ಸ್ಥಿರಾಸ್ತಿಗಳಿವೆ ಎಂದು ಮಾಹಿತಿ ನೀಡಿದ್ದಾರೆ.

ದೇಗುಲ ಆಡಳಿತ ಮಂಡಳಿ ದೇಶದಲ್ಲಿ 960 ಆಸ್ತಿಗಳನ್ನು ಹೊಂದಿದೆ. ಅವುಗಳ ವ್ಯಾಪ್ತಿ 7,123 ಎಕರೆ. ಅವುಗಳ ಮಾರುಕಟ್ಟೆ ಮೌಲ್ಯ ಬರೋಬ್ಬರಿ 85,705 ಕೋಟಿ ರೂ. 1974ರಿಂದ 2014ರವರೆಗೆ ವಿವಿಧ ಕಾರಣಗಳಿಗಾಗಿ ಟಿಟಿಡಿಯ ಆಡಳಿತದ ಚುಕ್ಕಾಣಿ ಹೊಂದಿದ್ದ ಟ್ರಸ್ಟ್‌ನ ವ್ಯಕ್ತಿಗಳು ಬೇರೆ ಬೇರೆ ಸರ್ಕಾರದ ಅವಧಿಯಲ್ಲಿ 113 ಆಸ್ತಿಯನ್ನು ವಿವಿಧ ಕಾರಣಗಳಿಗಾಗಿ ವಿಲೇವಾರಿ ಮಾಡಿದ್ದಾರೆ. 2014ರಿಂದೀಚೆಗೆ ಟಿಟಿಡಿ ಆಸ್ತಿ ವಿಲೇವಾರಿ ಆಗಿಲ್ಲ ಎಂದೂ ಅವರು ಹೇಳಿದ್ದಾರೆ.

14 ಟನ್‌ ಚಿನ್ನ ಕೇವಲ ಆಸ್ತಿ ಮಾತ್ರವಲ್ಲ ದೇಶದ ವಿವಿಧ ಸರ್ಕಾರಿ ಬ್ಯಾಂಕ್‌ಗಳಲ್ಲಿ 14 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತವನ್ನು ಠೇವಣಿ ಮಾಡಲಾದೆ. ಅಲ್ಲದೇ ಪ್ರಮುಖವಾಗಿ, ತಿಮ್ಮಪ್ಪನ ಭಂಡಾರದಲ್ಲಿ 14 ಸಾವಿರ ಕೇಜಿ ಚಿನ್ನ ಇದೆ.

ದೇಗುಲದ ಆಡಳಿತದಲ್ಲಿ ಪಾರದರ್ಶಕತೆ ತರಲು 2020ರಲ್ಲೇ ದೇಗುಲದ ಆಸ್ತಿ ಕುರಿತು ಶ್ವೇತಪತ್ರ ಹೊರಡಿಸಲು ಟಿಟಿಡಿ ನಿರ್ಧರಿಸಿತ್ತು. ಆದರೆ ಕೋವಿಡ್‌ ಮತ್ತಿತರ ಕಾರಣಗಳಿಂದಾಗಿ ಆಸ್ತಿ ಸಮೀಕ್ಷೆ ಮತ್ತು ಸರ್ವೇ ಸಾಧ್ಯವಾಗಿರಲಿಲ್ಲ. ಇದೀಗ ಆ ಕಾರ್ಯ ಪೂರ್ಣಗೊಂಡಿದ್ದು, ದೇಗುಲವು ಜಮೀನು ಸೇರಿದಂತೆ ಒಟ್ಟು 85,705 ಕೋಟಿ ರು.ಮೌಲ್ಯದ ಸ್ಥಿರಾಸ್ತಿ ಹೊಂದಿದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಸುಬ್ಬಾರೆಡ್ಡಿ ತಿಳಿಸಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:31 pm, Tue, 3 January 23

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ