IPS ಅಧಿಕಾರಿ ಮಾಡ್ತೀನಿ ಅಂತಾ TV ನಟಿ ಮತ್ತು ಪತಿಯಿಂದ 3.5 ಕೋಟಿ ರೂ ವಂಚನೆ, ಎಲ್ಲಿ?

ಮುಂಬೈ: ಐಪಿಎಸ್ ಅಧಿಕಾರಿಯಾಗಿ ನೇಮಕಗೊಳಿಸುವುದಾಗಿ ಭರವಸೆ ನೀಡಿ 3.5 ಕೋಟಿ ರೂ.ಗೆ ವಂಚನೆ ಮಾಡಿದ್ದ ಟಿವಿ ನಟಿ ಸಪ್ನಾ ರಹಾನ್ (28) ಮತ್ತು ಅವರ ಪತಿ ಪುನೀತ್ ಕುಮಾರ್ ರಹಾನ್ (26) ದಂಪತಿಯನ್ನು ಬಂಧಿಸಲಾಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಭಾನುವಾರ ದಂಪತಿಯನ್ನು ಅರೆಸ್ಟ್ ಮಾಡಿದ್ದಾರೆ. ಸಪ್ನಾ ರಹಾನ್ ಟಿವಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದರು. ಹೀಗಾಗಿ ಅವರಿಗೆ ಅನೇಕ ಪ್ರಭಾವಿಗಳ ಪರಿಚಯವಿರುತ್ತೆ ಎಂದು ವ್ಯಕ್ತಿಯೊಬ್ಬ ಇವರನ್ನು ನಂಬಿದ್ದ. ಈ ನಂಬಿಕೆಯನ್ನೇ ಅದಾಯ ಮಾಡಿಕೊಳ್ಳಲು ಹೋಗಿ ಸಪ್ನಾ ರಹಾನ್ ಮತ್ತು […]

IPS ಅಧಿಕಾರಿ ಮಾಡ್ತೀನಿ ಅಂತಾ TV ನಟಿ ಮತ್ತು ಪತಿಯಿಂದ 3.5 ಕೋಟಿ ರೂ ವಂಚನೆ, ಎಲ್ಲಿ?
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Sep 29, 2020 | 5:08 PM

ಮುಂಬೈ: ಐಪಿಎಸ್ ಅಧಿಕಾರಿಯಾಗಿ ನೇಮಕಗೊಳಿಸುವುದಾಗಿ ಭರವಸೆ ನೀಡಿ 3.5 ಕೋಟಿ ರೂ.ಗೆ ವಂಚನೆ ಮಾಡಿದ್ದ ಟಿವಿ ನಟಿ ಸಪ್ನಾ ರಹಾನ್ (28) ಮತ್ತು ಅವರ ಪತಿ ಪುನೀತ್ ಕುಮಾರ್ ರಹಾನ್ (26) ದಂಪತಿಯನ್ನು ಬಂಧಿಸಲಾಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಭಾನುವಾರ ದಂಪತಿಯನ್ನು ಅರೆಸ್ಟ್ ಮಾಡಿದ್ದಾರೆ.

ಸಪ್ನಾ ರಹಾನ್ ಟಿವಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದರು. ಹೀಗಾಗಿ ಅವರಿಗೆ ಅನೇಕ ಪ್ರಭಾವಿಗಳ ಪರಿಚಯವಿರುತ್ತೆ ಎಂದು ವ್ಯಕ್ತಿಯೊಬ್ಬ ಇವರನ್ನು ನಂಬಿದ್ದ. ಈ ನಂಬಿಕೆಯನ್ನೇ ಅದಾಯ ಮಾಡಿಕೊಳ್ಳಲು ಹೋಗಿ ಸಪ್ನಾ ರಹಾನ್ ಮತ್ತು ಅವರ ಪತಿ ಪುನೀತ್ ಇಂತಹ ವಂಚನೆ ಮಾಡಿದ್ದಾರೆ. ವ್ಯಕ್ತಿಯನ್ನು ಐಪಿಎಸ್ ಅಧಿಕಾರಿಯಾಗಿ ನೇಮಕ ಮಾಡಿ ಜಲಂಧರ್‌ನಲ್ಲಿ ಪೋಸ್ಟಿಂಗ್ ಮಾಡಿಸುವುದಾಗಿ ಭರವಸೆ ನೀಡಿ ಬರೊಬ್ಬರಿ 3.5 ಕೋಟಿ ರೂ. ವಂಚನೆ ಮಾಡಿದ್ದಾರೆ. ಈ ಕುರಿತು ಪಂಜಾಬ್‌ನ ಜಲಂಧರ್‌ನಲ್ಲಿ ದಂಪತಿಯ ವಿರುದ್ಧ ವಂಚನೆ ಪ್ರಕರಣ ದಾಖಲಾಗಿತ್ತು.

ಪಂಜಾಬ್ ವಂಚನೆ-ವಿರೋಧಿ ಘಟಕವು (Punjab Police anti-fraud unit) ಮುಂಬೈ ಪೊಲೀಸರನ್ನು ಸಂಪರ್ಕಿಸಿ ತನಿಖೆಗೆ ಸಹಾಯ ಮಾಡಲು ಕೇಳಿದೆ. ನಂತರ ಒಶಿವಾರಾ ಪ್ರದೇಶದ ಅಪಾರ್ಟ್ಮೆಂಟ್ ಮೇಲೆ ದಾಳಿ ನಡೆಸಿ ದಂಪತಿಯನ್ನು ಬಂಧಿಸಿದ್ದಾರೆ. ಇದಾದ ನಂತರ ಪಂಜಾಬ್ ಪೊಲೀಸರು ತಮ್ಮ ಆರೋಪಿಗಳನ್ನು ರಿಮಾಂಡ್ ಪಡೆದು ಜಲಂಧರ್‌ಗೆ ಕರೆದೊಯ್ದಿದ್ದಾರೆ ಎಂದು ಇನ್ಸ್‌ಪೆಕ್ಟರ್ ವಿನಯ್ ಘೋರ್ಪುಡೆ ತಿಳಿಸಿದ್ದಾರೆ.

ಕೆಲವು ಟಿವಿ ಕಾರ್ಯಕ್ರಮಗಳಲ್ಲಿ ನಟಿಸಿರುವ ಸಪ್ನಾ ಮತ್ತು ಆಕೆಯ ಪತಿಯನ್ನು ಜಲಾಂಧರ್ ಪೊಲೀಸರು ಮೋಸ, ನಂಬಿಕೆ ಉಲ್ಲಂಘನೆ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಿಸಿದ್ದಾರೆ. ತನಿಖೆಯ ಸಮಯದಲ್ಲಿ, ದಂಪತಿ ಕೇಂದ್ರ ರಕ್ಷಣಾ ಸಚಿವಾಲಯ ಮತ್ತು ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ನಕಲಿ ನೇಮಕಾತಿ ಪತ್ರಗಳನ್ನು ವಂಚನೆಗೆ ಒಳಗಾದ ವ್ಯಕ್ತಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಗಂಡ-ಹೆಂಡತಿ ವಿರುದ್ಧ ಜಲಂಧರ್ ಮ್ಯಾಜಿಸ್ಟ್ರೇಟ್ ಜಾಮೀನು ರಹಿತ ವಾರಂಟ್ ಹೊರಡಿಸಿದರೂ ಪೊಲೀಸರು ಅವರನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ.

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ