AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಸರ್ಕಾರ ರಚನೆ ಬಿಕ್ಕಟ್ಟು; ಎಡಪಕ್ಷಗಳ ಬೆಂಬಲ ಕೋರಿದ ಟಿವಿಕೆ

ಟಿವಿಕೆ ಮುಖ್ಯಸ್ಥ ವಿಜಯ್ ಪತ್ರಗಳು ಮತ್ತು ನೇರ ಸಂವಹನದ ಮೂಲಕ ಎಡಪಕ್ಷಗಳನ್ನು ಸಂಪರ್ಕ ಮಾಡಿದ್ದಾರೆ. ಸರ್ಕಾರ ರಚಿಸಲು ತಮಗೆ ಬೆಂಬಲ ನೀಡಲು ಮನವಿ ಮಾಡಿದ್ದಾರೆ. ಆದರೆ, ಟಿವಿಕೆ ಎನ್​ಡಿಎ ಮೈತ್ರಿ ಪಕ್ಷಗಳನ್ನು ಬೆಂಬಲಕ್ಕಾಗಿ ಸಂಪರ್ಕಿಸಿಲ್ಲ. ಎನ್​ಡಿಎ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವ ಯಾವುದೇ ಯೋಜನೆಗಳನ್ನು ಟಿವಿಕೆ ಹೊಂದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಈಗಾಗಲೇ ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಟಿವಿಕೆ-ಕಾಂಗ್ರೆಸ್ ಮೈತ್ರಿಗೆ ಇನ್ನೂ 5 ಶಾಸಕರ ಬೆಂಬಲ ಬೇಕಾಗಿದೆ. ಅತ್ತ ಡಿಎಂಕೆ ಮತ್ತು ಎಐಎಡಿಎಂಕೆ ಕೂಡ ತನ್ನ ಪಕ್ಷದ ಶಾಸಕರ ಜೊತೆ ಸಾಲು ಸಾಲು ಸಭೆಗಳನ್ನು ನಡೆಸುತ್ತಿದೆ.

ತಮಿಳುನಾಡಿನಲ್ಲಿ ಸರ್ಕಾರ ರಚನೆ ಬಿಕ್ಕಟ್ಟು; ಎಡಪಕ್ಷಗಳ ಬೆಂಬಲ ಕೋರಿದ ಟಿವಿಕೆ
Vijay
ಸುಷ್ಮಾ ಚಕ್ರೆ
|

Updated on: May 07, 2026 | 8:38 PM

Share

ಚೆನ್ನೈ, ಮೇ 7: ತಮಿಳುನಾಡಿನಲ್ಲಿ ಅತ್ಯಧಿಕ ಸ್ಥಾನಗಳನ್ನು ಪಡೆದಿದ್ದರೂ ಟಿವಿಕೆ ಇನ್ನೂ ಬಹುಮತ ಪಡೆದಿಲ್ಲ. ಹೀಗಾಗಿ, ತಮಿಳುನಾಡಿನಲ್ಲಿ (Tamil Nadu Politics) ಇನ್ನೂ ಸರ್ಕಾರ ರಚನೆಯ ಬಿಕ್ಕಟ್ಟು ಬಗೆಹರಿದಿಲ್ಲ. ಈಗಾಗಲೇ ಕಾಂಗ್ರೆಸ್ ಜೊತೆ ಕೈ ಜೋಡಿಸಿರುವ ಟಿವಿಕೆ ಉಳಿದ 5 ಸ್ಥಾನಗಳಿಗಾಗಿ ಎಡಪಕ್ಷಗಳ ಬೆಂಬಲ ಕೋರಿದೆ. ಟಿವಿಕೆ ನಾಯಕ ಸಿಟಿಆರ್ ನಿರ್ಮಲ್ ಕುಮಾರ್ ಇಂದು ಸಿಪಿಐ ರಾಜ್ಯ ಕಾರ್ಯದರ್ಶಿ ಎಂ ವೀರಪಾಂಡ್ಯನ್ ಮತ್ತು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ ಷಣ್ಮುಗಂ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸುವಲ್ಲಿ ಅವರ ಬೆಂಬಲ ಕೋರಿದ್ದಾರೆ. ಟಿವಿಕೆ ಪತ್ರ ಮತ್ತು ಇ-ಮೇಲ್ ಮೂಲಕವೂ ಎಡಪಕ್ಷಗಳ ಬೆಂಬಲ ಕೋರಿದೆ.

“ಟಿವಿಕೆ ಪಕ್ಷವು ವಿದುತಲೈ ಚಿರುತೈಗಲ್ ಕಚ್ಚಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸೇರಿದಂತೆ ಪಕ್ಷಗಳನ್ನು ಇಮೇಲ್‌ಗಳು ಮತ್ತು ನೇರ ಸಂವಹನದ ಮೂಲಕ ಸಂಪರ್ಕಿಸಿದೆ” ಎಂದು ಟಿವಿಕೆ ಜಂಟಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ಆರ್. ನಿರ್ಮಲ್ ಕುಮಾರ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡಲ್ಲಿ ಸರ್ಕಾರ ರಚನೆಗೆ ಟಿವಿಕೆಗೆ ಸಂಖ್ಯಾಬಲದ ಹೋರಾಟ, ಅತ್ತ ಬಿಹಾರ ರಾಜಕಾರಣದಲ್ಲಿ ಹೊಸ ಚದುರಂಗದಾಟ!

“ತಮ್ಮ ನಿರ್ಧಾರಗಳನ್ನು ಪ್ರಕಟಿಸುವ ಮೊದಲು ಪಕ್ಷಗಳು ತಮ್ಮ ಕಾರ್ಯಕಾರಿಣಿ ಮತ್ತು ಸಾಮಾನ್ಯ ಮಂಡಳಿ ಸಭೆಗಳಲ್ಲಿ ಈ ವಿಷಯವನ್ನು ಚರ್ಚಿಸುತ್ತವೆ. ಟಿವಿಕೆ ನಾಯಕರು ಬೆಂಬಲ ಪಡೆಯಲು ಮತ್ತೆ ಅವರನ್ನು ವೈಯಕ್ತಿಕವಾಗಿ ಭೇಟಿಯಾಗುತ್ತಾರೆ. ತಮಿಳುನಾಡಿನಾದ್ಯಂತ ಜನರು ನಮ್ಮ ನಾಯಕ ವಿಜಯ್ ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಿದ್ದಾರೆ. ಅದಕ್ಕಾಗಿಯೇ ಅವರು ನಮಗೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ರಾಜ್ಯಪಾಲರು ಇದನ್ನು ಪರಿಗಣಿಸಿ ಟಿವಿಕೆಯನ್ನು ಸರ್ಕಾರ ರಚಿಸಲು ಆಹ್ವಾನಿಸುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ. ರಾಜ್ಯಪಾಲರು ಕಾನೂನಿನ ಪ್ರಕಾರ ಕಾರ್ಯನಿರ್ವಹಿಸುತ್ತಾರೆ ಎಂದು ನಾವು ನಂಬುತ್ತೇವೆ. ಇಲ್ಲದಿದ್ದರೆ, ಮುಂದುವರಿಯಲು ನಾವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ” ಎಂದು ನಿರ್ಮಲ್ ಕುಮಾರ್ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?