AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Swearing-In: ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

ತಮಿಳುನಾಡಿನಲ್ಲಿ ಕೊನೆಗೂ ಬಹುಮತ ಸಾಬೀತುಪಡಿಸುವಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಯಶಸ್ವಿಯಾಗಿದ್ದಾರೆ. ಬಹುಮತ ಸಾಬೀತುಪಡಿಸಲು 118 ಶಾಸಕರ ಬೆಂಬಲ ಬೇಕಾಗಿತ್ತು. ಟಿವಿಕೆಗೆ ಈಗಾಗಲೇ 121 ಶಾಸಕರ ಬೆಂಬಲ ಸಿಕ್ಕಿರುವುದರಿಂದ ಆ ಬೆಂಬಲ ಪತ್ರಗಳೊಂದಿಗೆ ವಿಜಯ್ ಇಂದು ಸಂಜೆ ತಮಿಳುನಾಡು ರಾಜ್ಯಪಾಲರಾದ ಆರ್.ವಿ. ಅರ್ಲೇಕರ್ ಅವರನ್ನು ಭೇಟಿ ಮಾಡಿದ್ದಾರೆ. ಬೆಂಬಲ ಪತ್ರಗಳನ್ನು ಹಸ್ತಾಂತರಿಸಿದ ನಂತರ ರಾಜ್ಯಪಾಲರು ನೂತನ ಸರ್ಕಾರ ರಚನೆಗೆ ಸಮ್ಮತಿ ನೀಡಿದ್ದಾರೆ. ಹೀಗಾಗಿ, ನಾಳೆ (ಶನಿವಾರ) ಬೆಳಗ್ಗೆ 11 ಗಂಟೆಗೆ ನಟ ಹಾಗೂ ಟಿವಿಕೆ ಮುಖ್ಯಸ್ಥ ಜೋಸೆಫ್ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Vijay Swearing-In: ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ
Vijay Meets Tamil Nadu Governor
ಸುಷ್ಮಾ ಚಕ್ರೆ
|

Updated on:May 08, 2026 | 8:11 PM

Share

ಚೆನ್ನೈ, ಮೇ 8: ತಮಿಳುನಾಡಿನಲ್ಲಿ ನಾಳೆಯಿಂದ ವಿಜಯ್ ದರ್ಬಾರ್ ಆರಂಭವಾಗಲಿದೆ. ಟಿವಿಕೆ (TVK) ಮುಖ್ಯಸ್ಥ ಜೋಸೆಫ್ ವಿಜಯ್ (Joseph Vijay) ಬಹುಮತ ಸಾಬೀತುಪಡಿಸಲು ಯಶಸ್ವಿಯಾಗಿದ್ದಾರೆ. ಇಂದು ಸಂಜೆ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿಯಾದ ವಿಜಯ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಅಗತ್ಯವಿರುವ ಬಹುಮತವನ್ನು ವಿಜಯ್ ಸಾಬೀತುಪಡಿಸಿದ್ದರಿಂದ ರಾಜ್ಯಪಾಲರು ಸರ್ಕಾರ ರಚನೆಗೆ ಒಪ್ಪಿಗೆ ನೀಡಿದ್ದಾರೆ. ನಾಳೆಯೇ (ಶನಿವಾರ) ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲರು ಜೋಸೆಫ್ ವಿಜಯ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ತಮಿಳುನಾಡು ವಿಕ್ಟರಿ ಪಾರ್ಟಿ (ಟಿವಿಕೆ) 108 ಸ್ಥಾನಗಳನ್ನು ಪಡೆದಿದ್ದು, ಕಾಂಗ್ರೆಸ್ ಹಾಗೂ ಇತರೆ ಎಡಪಕ್ಷಗಳ ಬೆಂಬಲ ಸೇರಿ ಒಟ್ಟು ಸ್ಥಾನಗಳ ಸಂಖ್ಯೆ 121 ಆಗಿದೆ. ಹೀಗಾಗಿ, ವಿಜಯ್ ಅವರು ನಾಳೆ, ಅಂದರೆ ಮೇ 9ರ ಬೆಳಿಗ್ಗೆ 11 ಗಂಟೆಗೆ ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಸಮಾರಂಭಕ್ಕೆ ಭಾರೀ ಸಿದ್ಧತೆಗಳು ಆರಂಭವಾಗಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಇನ್ಮುಂದೆ ವಿಜಯ್ ‘ಸರ್ಕಾರ್’; ಕೊನೆಗೂ ಟಿವಿಕೆಗೆ ಸಿಕ್ಕಿತು ಮ್ಯಾಜಿಕ್ ನಂಬರ್

ನಟ, ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರು ಶನಿವಾರ (ಮೇ 9) ತಮಿಳುನಾಡಿನ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಾಹಿತಿಯ ಪ್ರಕಾರ, ಬೆಳಿಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ವಿಜಯ್ ಶುಕ್ರವಾರ ಮೂರನೇ ಬಾರಿಗೆ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿ ಮಾಡಿ 121 ಶಾಸಕರ ಬೆಂಬಲ ಪತ್ರದೊಂದಿಗೆ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು.

ಇದನ್ನೂ ಓದಿ: ಟಿವಿಕೆಗೆ ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ಕೊನೆ ಕ್ಷಣದಲ್ಲಿ ವಿಜಯ್​​ ಕೈ ಹಿಡಿದ ಪಕ್ಷಗಳಾವುವು?

234 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತಕ್ಕೆ 118 ಶಾಸಕರ ಬೆಂಬಲ ಪತ್ರಗಳನ್ನು ವಿಜಯ್ ಸಲ್ಲಿಸಿದರು. ಕಾಂಗ್ರೆಸ್, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್​ವಾದಿ) ಟಿವಿಕೆಗೆ ಬೆಂಬಲ ನೀಡಿದ ನಂತರ ವಿಜಯ್ ನಾಳೆಯೇ ಪ್ರಮಾಣವಚನ ಸ್ವೀಕಾರಕ್ಕೆ ಮುಹೂರ್ತಿ ಫಿಕ್ಸ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:55 pm, Fri, 8 May 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!