
ಚೆನ್ನೈ, ಮೇ 8: ತಮಿಳುನಾಡಿನಲ್ಲಿ ನಾಳೆಯಿಂದ ವಿಜಯ್ ದರ್ಬಾರ್ ಆರಂಭವಾಗಲಿದೆ. ಟಿವಿಕೆ (TVK) ಮುಖ್ಯಸ್ಥ ಜೋಸೆಫ್ ವಿಜಯ್ (Joseph Vijay) ಬಹುಮತ ಸಾಬೀತುಪಡಿಸಲು ಯಶಸ್ವಿಯಾಗಿದ್ದಾರೆ. ಇಂದು ಸಂಜೆ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿಯಾದ ವಿಜಯ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಅಗತ್ಯವಿರುವ ಬಹುಮತವನ್ನು ವಿಜಯ್ ಸಾಬೀತುಪಡಿಸಿದ್ದರಿಂದ ರಾಜ್ಯಪಾಲರು ಸರ್ಕಾರ ರಚನೆಗೆ ಒಪ್ಪಿಗೆ ನೀಡಿದ್ದಾರೆ. ನಾಳೆಯೇ (ಶನಿವಾರ) ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲರು ಜೋಸೆಫ್ ವಿಜಯ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.
ತಮಿಳುನಾಡು ವಿಕ್ಟರಿ ಪಾರ್ಟಿ (ಟಿವಿಕೆ) 108 ಸ್ಥಾನಗಳನ್ನು ಪಡೆದಿದ್ದು, ಕಾಂಗ್ರೆಸ್ ಹಾಗೂ ಇತರೆ ಎಡಪಕ್ಷಗಳ ಬೆಂಬಲ ಸೇರಿ ಒಟ್ಟು ಸ್ಥಾನಗಳ ಸಂಖ್ಯೆ 121 ಆಗಿದೆ. ಹೀಗಾಗಿ, ವಿಜಯ್ ಅವರು ನಾಳೆ, ಅಂದರೆ ಮೇ 9ರ ಬೆಳಿಗ್ಗೆ 11 ಗಂಟೆಗೆ ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಸಮಾರಂಭಕ್ಕೆ ಭಾರೀ ಸಿದ್ಧತೆಗಳು ಆರಂಭವಾಗಿದೆ.
TVK chief Vijay meets Governor Rajendra Arlekar and stakes claim to form the next government in Tamil Nadu.
Vijay to take oath at 11 am tomorrow. pic.twitter.com/nfTfSORsMO
— Abhijit Pathak (@aajtakabhijit) May 8, 2026
ಇದನ್ನೂ ಓದಿ: ತಮಿಳುನಾಡಿನಲ್ಲಿ ಇನ್ಮುಂದೆ ವಿಜಯ್ ‘ಸರ್ಕಾರ್’; ಕೊನೆಗೂ ಟಿವಿಕೆಗೆ ಸಿಕ್ಕಿತು ಮ್ಯಾಜಿಕ್ ನಂಬರ್
ನಟ, ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರು ಶನಿವಾರ (ಮೇ 9) ತಮಿಳುನಾಡಿನ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಾಹಿತಿಯ ಪ್ರಕಾರ, ಬೆಳಿಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ವಿಜಯ್ ಶುಕ್ರವಾರ ಮೂರನೇ ಬಾರಿಗೆ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿ ಮಾಡಿ 121 ಶಾಸಕರ ಬೆಂಬಲ ಪತ್ರದೊಂದಿಗೆ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು.
ಇದನ್ನೂ ಓದಿ: ಟಿವಿಕೆಗೆ ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ಕೊನೆ ಕ್ಷಣದಲ್ಲಿ ವಿಜಯ್ ಕೈ ಹಿಡಿದ ಪಕ್ಷಗಳಾವುವು?
234 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತಕ್ಕೆ 118 ಶಾಸಕರ ಬೆಂಬಲ ಪತ್ರಗಳನ್ನು ವಿಜಯ್ ಸಲ್ಲಿಸಿದರು. ಕಾಂಗ್ರೆಸ್, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಟಿವಿಕೆಗೆ ಬೆಂಬಲ ನೀಡಿದ ನಂತರ ವಿಜಯ್ ನಾಳೆಯೇ ಪ್ರಮಾಣವಚನ ಸ್ವೀಕಾರಕ್ಕೆ ಮುಹೂರ್ತಿ ಫಿಕ್ಸ್ ಮಾಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:55 pm, Fri, 8 May 26