
ಚೆನ್ನೈ, ನವೆಂಬರ್ 19: ತಮಿಳುನಾಡಿನ ಕೊಳತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರನ್ನು ಸೋಲಿಸಿ ಇತಿಹಾಸ ಸೃಷ್ಟಿಸಿದ್ದ ಟಿವಿಕೆ ಶಾಸಕ ವಿ.ಎಸ್. ಬಾಬು ಇಂದು ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವಿ.ಎಸ್. ಬಾಬು ಅವರನ್ನು ಕಳೆದ ಸೆಪ್ಟೆಂಬರ್‌ನಲ್ಲಿ ಚೆನ್ನೈನ ಎಂಜಿಎಂ ಹೆಲ್ತ್‌ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2 ತಿಂಗಳಿನಿಂದ ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮಧ್ಯಾಹ್ನ 2.24ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಅಧಿಕೃತ ಪ್ರಕಟಣೆ ತಿಳಿಸಿದೆ.
2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷದ ಅಭ್ಯರ್ಥಿಯಾಗಿ ಕೊಲತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಾಬು, ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಭದ್ರಕೋಟೆಯನ್ನು ಭೇದಿಸಿ ಭರ್ಜರಿ ಜಯ ಸಾಧಿಸಿದ್ದರು. ಈ ಗೆಲುವು ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿತ್ತು. ಹಿರಿಯ ರಾಜಕಾರಣಿ ವಿ.ಎಸ್. ಬಾಬು ಅವರ ನಿಧನಕ್ಕೆ ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ‘ಡಿಎಂಕೆ, ಎಐಎಡಿಎಂಕೆ, ಬಿಜೆಪಿ ನಡುವೆ ಗುಪ್ತ ಒಪ್ಪಂದ’; ತಮಿಳುನಾಡು ಸಿಎಂ ಜೋಸೆಫ್ ವಿಜಯ್ ವಾಗ್ದಾಳಿ
ಹಿರಿಯ ರಾಜಕಾರಣಿ ಹಾಗೂ ಜನಪ್ರಿಯ ಶಾಸಕರಾಗಿದ್ದ ವಿ.ಎಸ್. ಬಾಬು ಅವರ ನಿಧನಕ್ಕೆ ಟಿವಿಕೆ ಪಕ್ಷದ ನಾಯಕರು, ಕಾರ್ಯಕರ್ತರು ಸೇರಿದಂತೆ ತಮಿಳುನಾಡಿನ ವಿವಿಧ ರಾಜಕೀಯ ಪಕ್ಷಗಳ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
2011ರಲ್ಲಿ, ಡಿಎಂಕೆ ನಾಯಕತ್ವದೊಂದಿಗಿನ ಭಿನ್ನಾಭಿಪ್ರಾಯಗಳಿಂದಾಗಿ ವಿ.ಎಸ್. ಬಾಬು ಡಿಎಂಕೆಗೆ ರಾಜೀನಾಮೆ ನೀಡಿದ್ದರು. ಇದರ ನಂತರ, ಅವರು ಡಿಎಂಕೆ ತೊರೆದು ಎಐಎಡಿಎಂಕೆ ಸೇರಿದರು. ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ನಿಧನದ ನಂತರ, ಎಐಎಡಿಎಂಕೆ ತೊರೆದ ವಿ.ಎಸ್. ಬಾಬು, ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಜೊತೆ ಪ್ರಯಾಣಿಸಲು ಪ್ರಾರಂಭಿಸಿದರು. ಇದರ ನಂತರ, ಅವರು ತಮಿಳುನಾಡು ವೆಟ್ರಿ ಕಳಗಂ ಸೇರಿ ಇತ್ತೀಚೆಗೆ ನಡೆದ ತಮಿಳುನಾಡು ಶಾಸಕಾಂಗ ಚುನಾವಣೆಯಲ್ಲಿ ಕೊಳತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಡಿಎಂಕೆ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ ಸ್ಪರ್ಧಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ