AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣದ ಡಾಬಾದಲ್ಲಿ ಅವಳಿ ಸಿಲಿಂಡರ್ ಸ್ಫೋಟ, ಐವರ ಸ್ಥಿತಿ ಚಿಂತಾಜನಕ

ಹರ್ಯಾಣದ ಡಾಬಾದಲ್ಲಿ ಸಂಭವಿಸಿದ ಅವಳಿ ಸಿಲಿಂಡರ್​ ಸ್ಫೋಟದಲ್ಲಿ 9 ಮಂದಿ ಗಾಯಗೊಂಡಿದ್ದು, ಐವರ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹರ್ಯಾಣದ ಡಾಬಾದಲ್ಲಿ ಅವಳಿ ಸಿಲಿಂಡರ್ ಸ್ಫೋಟ, ಐವರ ಸ್ಥಿತಿ ಚಿಂತಾಜನಕ
ಸಿಲಿಂಡರ್​ ಸ್ಫೋಟ-ಸಾಂದರ್ಭಿಕ ಚಿತ್ರImage Credit source: Greater Kashmir
ನಯನಾ ರಾಜೀವ್
|

Updated on: Jun 20, 2024 | 11:13 AM

Share

ಹರ್ಯಾಣದ ಬಹುದ್ದೂರ್​ಗಢದ ಡಾಬಾದಲ್ಲಿ ಅವಳಿ ಸಿಲಿಂಡರ್​ ಸ್ಫೋಟ(Cylinder Blast)ಗೊಂಡಿದ್ದು, ಐವರ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಲವು ಮಂದಿ ಗಾಯಗೊಂಡಿದ್ದಾರೆ. ಬಹದ್ದೂರ್‌ಗಢದ ಡಾಬಾದಲ್ಲಿ ಎರಡು ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು 9 ಮಂದಿ ಗಾಯಗೊಂಡಿದ್ದಾರೆ.

ಈ ಪೈಕಿ ಐವರ ಸ್ಥಿತಿ ಚಿಂತಾಜನಕವಾಗಿದೆ. ಮಾಡರ್ನ್ ಇಂಡಸ್ಟ್ರಿಯಲ್ ಏರಿಯಾದ ಮೆಟ್ರೋ ಪಿಲ್ಲರ್ 770 ಬಳಿ ಈ ಘಟನೆ ನಡೆದಿದೆ. ಸಿಲಿಂಡರ್ ಸ್ಫೋಟದ ಘಟನೆಯಲ್ಲಿ ಗಾಯಗೊಂಡವರಲ್ಲಿ ಡಾಬಾದಲ್ಲಿದ್ದ ಕೆಲಸಗಾರರು ಮತ್ತು ಆ ಪ್ರದೇಶದಲ್ಲಿ ಓಡಾಡುತ್ತಿದ್ದ ಜನರು ಕೂಡ ಸೇರಿದ್ದಾರೆ.

ಗಾಯಾಳುಗಳು ಜೆಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದ್ದು, ಶೇ.50ರಷ್ಟು ಸುಟ್ಟ ಗಾಯಗಳಾಗಿವೆ.

ಮತ್ತಷ್ಟು ಓದಿ: ಅಡುಗೆ ಮನೆಯಲ್ಲಿ ಮಹಿಳೆ ಕೆಲಸ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ

ಸಿಲಿಂಡರ್ ಸ್ಫೋಟದಿಂದ ಉಂಟಾದ ಕಾಲ್ತುಳಿತದಲ್ಲಿ ವ್ಯಕ್ತಿಯ ಕಾಲು ಕೂಡ ಮುರಿದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಮತ್ತೊಂದು ಘಟನೆಯಲ್ಲಿ, ಬುಧವಾರ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಜೈಲಿನೊಳಗೆ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ ಏಳು ಕೈದಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಕಾಶ್ಮೀರ ಜಿಲ್ಲೆಯ ಜಿಲ್ಲಾ ಕಾರಾಗೃಹದ ಅಡುಗೆ ಕೋಣೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಒಟ್ಟು ಏಳು ಮಂದಿ ಗಾಯಗೊಂಡವರನ್ನು ಆಸ್ಪತ್ರೆಗೆ ಕಳುಹಿಸಲಾಯಿತು. ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?