
ನವದೆಹಲಿ, ಮೇ 22: ತ್ವಿಶಾ ಶರ್ಮಾ (Twisha Sharma) ಅವರ ಕುಟುಂಬಸ್ಥರು ಈ ಮೊದಲಿನಿಂದಲೂ ತಮ್ಮ ಮಗಳ ಸಾವಿನಲ್ಲಿ ಸಮರ್ಥ್ ಸಿಂಗ್ ಅವರದ್ದೇ ವ್ಯವಸ್ಥಿತ ಸಂಚು ಎಂದು ಆರೋಪಿಸುತ್ತಿದ್ದರು. ಈಗ ಪತಿ ಶರಣಾಗಿರುವುದರಿಂದ ಮತ್ತು ಇತ್ತ ದೆಹಲಿ ಏಮ್ಸ್ ತಜ್ಞರು ಎರಡನೇ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆ ಆರಂಭಿಸಿರುವುದರಿಂದ, ತ್ವಿಶಾ ಅವರದ್ದು ಕೊಲೆಯೇ ಅಥವಾ ಆತ್ಮಹತ್ಯೆಯೇ ಎಂಬ ನಿಜವಾದ ರಹಸ್ಯ ಸದ್ಯದಲ್ಲೇ ಬಹಿರಂಗಗೊಳ್ಳಲಿವೆ.
ಕಳೆದ 10 ದಿನಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಸಮರ್ಥ್ ಸಿಂಗ್ ಇಂದು ಮಧ್ಯಪ್ರದೇಶದ ಸ್ಥಳೀಯ ನ್ಯಾಯಾಲಯಕ್ಕೆ ಶರಣಾಗಲು ಆಗಮಿಸಿದ್ದಾರೆ. ದೆಹಲಿ ಏಮ್ಸ್ (AIIMS) ಮೂಲಕ ತ್ವಿಶಾ ಶರ್ಮಾ ಅವರ ಶವದ ಎರಡನೇ ಮರಣೋತ್ತರ ಪರೀಕ್ಷೆಗೆ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಸಮರ್ಥ್ ಸಿಂಗ್ ಈ ನಿರ್ಧಾರಕ್ಕೆ ಬಂದಿದ್ದಾರೆ. ಮೊದಲೇ ಆತ ಸಲ್ಲಿಸಿದ್ದ ಮುಂಗಡ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದರಿಂದ, ಪೊಲೀಸರು ಯಾವುದೇ ಕ್ಷಣದಲ್ಲೂ ತನ್ನನ್ನು ಬಂಧಿಸಬಹುದು ಮತ್ತು ಕಠಿಣ ಪೊಲೀಸ್ ವಿಚಾರಣೆಗೆ ಒಳಪಡಿಸಬಹುದು ಎಂಬುದನ್ನು ಅರಿತು, ಪೊಲೀಸ್ ಬಂಧನದಿಂದ ತಪ್ಪಿಸಿಕೊಳ್ಳಲು ನೇರವಾಗಿ ನ್ಯಾಯಾಲಯದ ಮುಂದೆ ಶರಣಾಗುವ ತಂತ್ರ ಹೂಡಿದ್ದಾರೆ.
#WATCH | Jabalpur, Madhya Pradesh | Twisha Sharma death case: Twisha’s husband and accused, Samarth Singh, arrives at the Jabalpur court. He was absconding in the case.
According to his advocate, Saurabh Sunder, Samarth Singh is here to surrender, and they are moving an… https://t.co/XN54mYLfJO pic.twitter.com/zRLCm9xFKz
— ANI (@ANI) May 22, 2026
ಇದನ್ನೂ ಓದಿ: ದೆಹಲಿ ಏಮ್ಸ್ನಿಂದ ತ್ವಿಶಾ ಶರ್ಮಾ 2ನೇ ಮರಣೋತ್ತರ ಪರೀಕ್ಷೆಗೆ ಮಧ್ಯಪ್ರದೇಶ ಹೈಕೋರ್ಟ್ ಅನುಮತಿ
ಸಮರ್ಥ್ ಸಿಂಗ್ ನ್ಯಾಯಾಲಯದ ಆವರಣಕ್ಕೆ ಆಗಮಿಸುತ್ತಿದ್ದಂತೆ ತನಿಖಾಧಿಕಾರಿಗಳು ಮತ್ತು ಪೊಲೀಸರು ಅಲರ್ಟ್ ಆಗಿದ್ದಾರೆ. ನ್ಯಾಯಾಲಯವು ಆತನ ಶರಣಾಗತಿಯನ್ನು ಅಂಗೀಕರಿಸಿದ ತಕ್ಷಣ, ಪೊಲೀಸರು ಆತನನ್ನು ತಮ್ಮ ಕಸ್ಟಡಿಗೆ ನೀಡುವಂತೆ ಕೋರಲಿದ್ದಾರೆ.
#WATCH | Jabalpur, Madhya Pradesh | Twisha Sharma death case | Twisha’s husband and the accused, Samarth Singh’s advocate Saurabh Sunder says, “He (Twisha’s husband and the accused, Samarth Singh) is here to surrender…We are moving an application before the CJM…” pic.twitter.com/53VHwNNCVL
— ANI (@ANI) May 22, 2026
ತ್ವಿಶಾ ಶರ್ಮಾ ಅವರ ಸಾವು ಸಾಮಾನ್ಯ ಆತ್ಮಹತ್ಯೆಯಲ್ಲ, ಇದೊಂದು ವ್ಯವಸ್ಥಿತ ಕೊಲೆ ಎಂದು ಅವರ ಪೋಷಕರು ಮತ್ತು ಕುಟುಂಬದವರು ಗಂಭೀರ ಆರೋಪ ಮಾಡಿದ್ದರು. ಮೊದಲನೇ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಕೆಲವು ಲೋಪದೋಷಗಳಿರಬಹುದು. ಸತ್ಯವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿರಬಹುದು ಎಂದು ಶಂಕಿಸಿದ ಕುಟುಂಬಸ್ಥರು, ಎರಡನೇ ಬಾರಿ ಮರಣೋತ್ತರ ಪರೀಕ್ಷೆ ನಡೆಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ