ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆಯ ಟ್ವಿಟರ್​ ಖಾತೆ ಹ್ಯಾಕ್​; ಕೆಲವೇ ಹೊತ್ತಲ್ಲಿ ರಿಸ್ಟೋರ್​, ತನಿಖೆಗೆ ಆದೇಶ

2021ರ ಡಿಸೆಂಬರ್​ 12ರಂದು ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ಟ್ವಿಟರ್ ಖಾತೆ ಹ್ಯಾಕ್ ಆಗಿತ್ತು. ಪ್ರಧಾನಿ ನರೇಂದ್ರ ಮೋದಿ ಟ್ವಿಟರ್​ ಖಾತೆಯನ್ನು ಹ್ಯಾಕ್​ ಮಾಡಿದ್ದ ಕಿಡಿಗೇಡಿಗಳು ಅದರಲ್ಲಿ ಬಿಟ್​ಕಾಯಿನ್​ ಸಂಬಂಧಪಟ್ಟ ಟ್ವೀಟ್ ಗಳನ್ನು ಮಾಡಿದ್ದರು.

ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆಯ ಟ್ವಿಟರ್​ ಖಾತೆ ಹ್ಯಾಕ್​; ಕೆಲವೇ ಹೊತ್ತಲ್ಲಿ ರಿಸ್ಟೋರ್​, ತನಿಖೆಗೆ ಆದೇಶ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Jan 23, 2022 | 1:27 PM

ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆ (NDRF)ಯ ಅಧಿಕೃತ ಟ್ವಿಟರ್​ ಅಕೌಂಟ್​ ಜನವರಿ 22ರಂದು ಕೆಲಕಾಲದ ಮಟ್ಟಿಗೆ ಹ್ಯಾಕ್​ ಆಗಿತ್ತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹ್ಯಾಕ್ ಆದ ಅಕೌಂಟ್​​ನ್ನು ಕೆಲವೇ ಹೊತ್ತಲ್ಲಿ ಟೆಕ್ನಿಕಲ್ ತಜ್ಞರು ಸರಿಪಡಿಸಿದ್ದಾರೆ. ನಂತರ ಎನ್​ಡಿಆರ್​ಎಫ್​ ಟ್ವಿಟರ್​ ಖಾತೆ ಭದ್ರವಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಎನ್​ಡಿಆರ್​ಎಫ್​ ಎಂದರೆ ದೇಶದ ಯಾವುದೇ ಪ್ರದೇಶದಲ್ಲಿಯೂ ಪ್ರಾಕೃತಿಕ ವಿಪತ್ತು, ಮತ್ತಿತರ ಅವಘಡಗಳಾದಾಗ ರಕ್ಷಣೆಗೆ ಧಾವಿಸುವ ರಕ್ಷಣಾ ಪಡೆಯಾಗಿದೆ. ಸದ್ಯ ಅದರ ಟ್ವಿಟರ್​ ಖಾತೆ (@NDRFHQ) ಸುರಕ್ಷಿತಗೊಂಡಿದೆ. ಆದರೆ ಹ್ಯಾಕ್​ ಮಾಡಿದವರು ಯಾರಿರಬಹುದು ಎಂಬಿತ್ಯಾದಿ ವಿಚಾರಗಳ ಬಗ್ಗೆ ತನಿಖೆ ನಡೆಯುತ್ತಿದೆ.

ಇತ್ತೀಚೆಗೆ ಟ್ವಿಟರ್​ ಖಾತೆಗಳಿಗೆ ಹ್ಯಾಕಿಂಗ್ ಬೂತ ಕಾಡುತ್ತಿದೆ.  2021ರ ಡಿಸೆಂಬರ್​ 12ರಂದು ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ಟ್ವಿಟರ್ ಖಾತೆ ಹ್ಯಾಕ್ ಆಗಿತ್ತು. ಪ್ರಧಾನಿ ನರೇಂದ್ರ ಮೋದಿ ಟ್ವಿಟರ್​ ಖಾತೆಯನ್ನು ಹ್ಯಾಕ್​ ಮಾಡಿದ್ದ ಕಿಡಿಗೇಡಿಗಳು ಅದರಲ್ಲಿ ಬಿಟ್​ಕಾಯಿನ್​ ಸಂಬಂಧಪಟ್ಟ ಟ್ವೀಟ್ ಗಳನ್ನು ಮಾಡಿದ್ದರು. ಬಿಟ್​ಕಾಯಿನ್​ಗಳನ್ನು ಸರ್ಕಾರವೇ ಅಧಿಕೃತವಾಗಿ ಖರೀದಿ ಮಾಡಿದೆ ಎಂದೂ ಹೇಳಿದ್ದರು. ನಂತರ ಕೆಲವೇ ಹೊತ್ತಲ್ಲಿ ಪ್ರಧಾನಿ ಟ್ವಿಟರ್​ ಖಾತೆ ಭದ್ರಗೊಂಡಿತ್ತು. ಬಳಿಕ ಟ್ವೀಟ್ ಮಾಡಿ ಸ್ಪಷ್ಟನೆ ಕೊಟ್ಟಿದ್ದ ಪ್ರಧಾನಮಂತ್ರಿ ಕಾರ್ಯಾಲಯ, ನರೇಂದ್ರ ಮೋದಿಯವರ ವೈಯಕ್ತಿಕ ಟ್ವಿಟರ್ ಖಾತೆ ಕೆಲಕಾಲ್​ ಹ್ಯಾಕ್ ಆಗಿತ್ತು. ಆ ಸಮಯದಲ್ಲಿ ಮಾಡಲಾದ ಟ್ವೀಟ್​ಗಳನ್ನು ಗಂಭೀರವಾಗಿ ಪರಿಗಣಿಸಬಾರದು ಎಂದು ಹೇಳಿತ್ತು.

ಅದಾದ ಬಳಿಕ 2022ರ ಜನವರಿ 12ರಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಟ್ವಿಟರ್​ ಖಾತೆ ಯನ್ನು ಇಂದು ಹ್ಯಾಕ್​ ಮಾಡಲಾಗಿತ್ತು. ಟ್ವಿಟರ್ ಅಕೌಂಟ್ ಹ್ಯಾಕ್​ ಮಾಡಿದ್ದ ಹ್ಯಾಕರ್ಸ್​ಗಳು, ಖಾತೆಯ ಹೆಸರನ್ನು ಎಲೋನ್​ ಮಸ್ಕ್​ಎಂದು ಬದಲಿಸಿದ್ದರು. ಹಾಗೇ, ಗ್ರೇಟ್​ ಜಾಬ್​ (ಅದ್ಭುತ ಕೆಲಸ) ಎಂದೂ ಟ್ವೀಟ್ ಮಾಡಿದ್ದರು. ಇನ್ನು ಒಂದಿಷ್ಟು ಲಿಂಕ್​ಗಳನ್ನೆಲ್ಲ ಪೋಸ್ಟ್ ಮಾಡಿದ್ದರು. ಆದರೆ ಕೆಲವೇ ಹೊತ್ತಿನಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತನ್ನ ಟ್ವಿಟರ್ ಖಾತೆಯ ಮೇಲೆ ನಿಯಂತ್ರಣ ಹೊಂದಿತ್ತು.

ಇದನ್ನೂ ಓದಿ: ನಾಪತ್ತೆಯಾಗಿರುವ ನಿಮ್ಮ ದೇಶದ ಹುಡುಗ ಇನ್ನೊಂದು ವಾರದಲ್ಲಿ ಮರಳಿ ಬರುತ್ತಾನೆ; ಭಾರತೀಯ ಸೇನೆಗೆ ಮಾಹಿತಿ ನೀಡಿದ ಚೀನಾ ಸೇನೆ

Published On - 1:24 pm, Sun, 23 January 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ