Jammu and Kashmir: ಭಯೋತ್ಪಾದಕರು ನಡೆಸಿದ ಬಾಂಬ್ ಸ್ಫೋಟದಲ್ಲಿ ಸೇನಾ ಸಿಬ್ಬಂದಿಗಳು ಹುತಾತ್ಮ
ಇಂದು (ಮೇ 5) ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿದ ಬಾಂಬ್ ಸ್ಫೋಟದಲ್ಲಿ 5 ಸೇನಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ದೆಹಲಿ: ಇಂದು (ಮೇ 5) ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿದ ಬಾಂಬ್ ಸ್ಫೋಟದಲ್ಲಿ 5 ಸೇನಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ರಾಜೌರಿ ಸೆಕ್ಟರ್‌ನ ಕಂಡಿ ಅರಣ್ಯ ಪ್ರದೇಶದಲ್ಲಿ ಸೇನಾ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಮಂಗಳವಾರ ಜಮ್ಮು ಪ್ರದೇಶದ ಭಾಟಾ ಧುರಿಯನ್‌ನ ತೋಟಾ ಗಲಿ ಪ್ರದೇಶದಲ್ಲಿ ಸೇನಾ ಟ್ರಕ್‌ಗೆ ಹೊಂಚು ಹಾಕಿದ್ದ ಭಯೋತ್ಪಾದಕರ ಗುಂಪನ್ನು ಪತ್ತೆಹಚ್ಚಲು ಮತ್ತು ನಿರ್ಮೂಲನೆ ಮಾಡಲು ಗುಪ್ತಚರ ಆಧಾರಿತ ಕಾರ್ಯಾಚರಣೆಗಳನ್ನು ನಡೆಸುತ್ತಿದೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.
ಕಾಂಡಿ ಅರಣ್ಯದ ದಟ್ಟವಾದ ಪೊದೆಗಳಲ್ಲಿ ಮತ್ತು ಕಲ್ಲಿನ ಭೂಪ್ರದೇಶದ ಗುಹೆಯಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಆಧರಿಸಿ, ಗುರುವಾರ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಶುಕ್ರವಾರ ಬೆಳಿಗ್ಗೆ 7:30ರ ಸುಮಾರಿಗೆ ಶೋಧ ತಂಡಕ್ಕೆ ಭಯೋತ್ಪಾದಕರ ಸಂಪರ್ಕ ಎಲ್ಲಿದೆ ಎಂದು ಪತ್ತೆ ಮಾಡಿದ್ದಾರೆ. ಭಯೋತ್ಪಾದಕರು ಮತ್ತು ಸೇನೆಯ ನಡುವೆ ಭೀಕರ ಗುಂಡಿನ ಚಕಮಕಿ ನಡೆಯಿತು. ನಂತರ ಭಯೋತ್ಪಾದಕರು ತಪ್ಪಿಸಿಕೊಳ್ಳಲು ಸ್ಫೋಟಕ ಸಾಧನಗಳಿಂದ ದಾಳಿ ಮಾಡಿದ್ದಾರೆ.
ಇದನ್ನೂ ಓದಿ:Jammu And Kashmir Blast: ಜಮ್ಮು- ಕಾಶ್ಮೀರದ ಹೀರಾನಗರದಲ್ಲಿ IED ಸ್ಫೋಟ
ಸ್ಫೋಟದಲ್ಲಿ ಇಬ್ಬರು ಸೇನಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಮತ್ತು ಅಧಿಕಾರಿ ಸೇರಿದಂತೆ ನಾಲ್ವರಿಗೆ ಗಾಯಗಳಾಗಿವೆ ಎಂದು ಹೇಳಿಕೆ ತಿಳಿಸಿದೆ. ಗಾಯಗೊಂಡ ಯೋಧರನ್ನು ಚಿಕಿತ್ಸೆಗಾಗಿ ಉಧಂಪುರದ ಕಮಾಂಡ್ ಆಸ್ಪತ್ರೆಗೆ ವಿಮಾನದ ಮೂಲಕ ರವಾನಿಸಲಾಗಿದೆ.
ಇದೀಗ ಕಾರ್ಯಾಚರಣೆಯನ್ನು ಬಲಪಡಿಸಲು ಹೆಚ್ಚುವರಿ ತಂಡಗಳನ್ನು ಎನ್‌ಕೌಂಟರ್ ಸ್ಥಳಕ್ಕೆ ಕಳುಹಿಸಲಾಗಿದೆ. ಜಮ್ಮುವಿನ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ನಡೆದ ಸ್ಫೋಟದಲ್ಲಿ ಇಬ್ಬರು ಸೇನಾ ಸಿಬ್ಬಂದಿ ಬಲಿ, 4 ಮಂದಿ ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ ಉಗ್ರರ ಗುಂಪು ಇನ್ನೂ ಬೀಡುಬಿಟ್ಟಿದೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:57 pm, Fri, 5 May 23