ಕೊಯಮತ್ತೂರಿನಲ್ಲಿ ಬಹುಮಹಡಿ ಕಟ್ಟಡ ಕುಸಿದು ಇಬ್ಬರು ಸಾವು
ಚೆನ್ನೈ: ಬಹುಮಹಡಿ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಅವರನ್ನು ಕೊಯಮತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ರಕ್ಷಣ ತಂಡದವರು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರೋ ಮಳೆಯಿಂದಾಗಿ ಶಿಥಿಲಾವ್ಯಸ್ಥೆಗೆ ತಲುಪಿದ್ದ ಬಹುಮಹಡಿ ಕಟ್ಟಡ ಇಂದು ಬೆಳಗಿನ ಜಾವ ಧಿಡೀರನೆ ಕುಸಿದಿದೆ. ಕುಸಿದ ಹಳೆ ಭವನದ ಅವಶೇಷಗಳಡಿ ಸಿಲುಕಿದ್ದ 2ಮೃತ ದೇಹಗಳನ್ನು ಹೊರ ತೆಗೆಯಲಾಗಿದ್ದು ನಾಲ್ವರನ್ನು ಅಗ್ನಿ ಶ್ಯಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. […]
ಚೆನ್ನೈ: ಬಹುಮಹಡಿ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಅವರನ್ನು ಕೊಯಮತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ರಕ್ಷಣ ತಂಡದವರು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.
ಕಳೆದ ಕೆಲ ದಿನಗಳಿಂದ ಸುರಿಯುತ್ತಿರೋ ಮಳೆಯಿಂದಾಗಿ ಶಿಥಿಲಾವ್ಯಸ್ಥೆಗೆ ತಲುಪಿದ್ದ ಬಹುಮಹಡಿ ಕಟ್ಟಡ ಇಂದು ಬೆಳಗಿನ ಜಾವ ಧಿಡೀರನೆ ಕುಸಿದಿದೆ. ಕುಸಿದ ಹಳೆ ಭವನದ ಅವಶೇಷಗಳಡಿ ಸಿಲುಕಿದ್ದ 2ಮೃತ ದೇಹಗಳನ್ನು ಹೊರ ತೆಗೆಯಲಾಗಿದ್ದು ನಾಲ್ವರನ್ನು ಅಗ್ನಿ ಶ್ಯಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಇನ್ನೂ ಹಲವಾರು ಜನ ಸಿಕ್ಕಿಕೊಂಡಿರುವ ಶಂಕೆ ಇದೆ.