ಅಸ್ಸಾಂನ (Assam) ಧೇಮಾಜಿ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವಿಗೀಡಾಗಿದ್ದು, ಇಬ್ಬರಿಗೆ ಗಾಯಗಳಾಗಿವೆ ಎಂದು ಪ್ರತಿದಿನ್ ಟೈಮ್ ವರದಿ ಮಾಡಿದೆ. ಅಸ್ಸಾಂ-ಅರುಣಾಚಲ ಪ್ರದೇಶದ(Arunachal Pradesh border) ಗಡಿಭಾಗದ ಪನ್ಬರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಧೇಮಾಜಿಯ ಶಾಸಕ ರನೋಜ್ ಪೆಗು ಈ ಬಗ್ಗೆ ಟ್ವೀಟ್ ಮಾಡಿದ್ದು, ಮೃತರನ್ನು ಬೋರ್ಬಿಲಾ ಚುಟಿಯಾಕಾರಿ ಗ್ರಾಮದ ನಿವಾಸಿ ಬೋಗಾ ಚುಟಿಯಾ ಮತ್ತು ಮೊನಿತು ಗೊಗೊಯ್ ಎಂದು ಗುರುತಿಸಿದ್ದಾರೆ. ಗಾಯಗೊಂಡವರನ್ನು ಪುಷ್ಪಾ ಗೊಗೊಯ್ ಮತ್ತು ಅಕೋನಿ ಗೊಹೈನ್ ಎಂದು ಗುರುತಿಸಲಾಗಿದೆ. ಜಿಲ್ಲಾಡಳಿತ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎಂದು ಪೆಗು ಹೇಳಿದ್ದಾರೆ.
ಧೇಮಾಜಿಯ ಹಲವು ಪ್ರದೇಶಗಳಲ್ಲಿ ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ಗಡಿಯನ್ನು ಇನ್ನೂ ಸರಿಯಾಗಿ ಗುರುತಿಸಲಾಗಿಲ್ಲ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
I strongly condemn the act of violence at the Panbari area of the Asam-Arunachal border in Dhemaji, where one person named Boga Chutia of Borbila Chutiakari village of my constituency has been killed, and 3 persons – Monitu Gogoi, Puspa Gogoi and Akoni Gohain of Milonpur village…
— Ranoj Pegu (@ranojpeguassam) June 5, 2023
ಸಾಮಾನ್ಯವಾಗಿ, ನೆರೆಯ ರಾಜ್ಯವು ನಮ್ಮ ಮೇಲೆ ದಾಳಿ ಮಾಡುವುದಿಲ್ಲ ಎಂದು ಅವರು ಹೇಳಿದರು. ಆದರೆ ನೆರೆಯ ರಾಜ್ಯಗಳ ಕೆಲವರು ಭೂಮಿಯನ್ನು ಆಕ್ರಮಿಸಿಕೊಳ್ಳುವ ದುರಾಸೆಯಿಂದ ಇಂತಹ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಧೇಮಾಜಿಯ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿ ಈ ವಿಷಯವನ್ನು ಪರಿಶೀಲಿಸುತ್ತಿದ್ದಾರೆ ಎಂದು ಶರ್ಮಾ ಹೇಳಿದ್ದಾರೆ.
ಇದನ್ನೂ ಓದಿ: ಮಧ್ಯಪ್ರದೇಶದ ಚುನಾವಣೆಗೆ ಕಮಲ್ ನಾಥ್ ನಾಯಕತ್ವ ಬಗ್ಗೆ ಪಕ್ಷದಲ್ಲೇ ಅಸಮಾಧಾನ; ಪರಸ್ಪರ ವಾಕ್ಸಮರ ನಡೆಸಿದ ನಾಯಕರು
ಏಪ್ರಿಲ್ 20 ರಂದು, ಶರ್ಮಾ ಮತ್ತು ಅರುಣಾಚಲ ಪ್ರದೇಶದ ಸಿಎಂ ಪೇಮಾ ಖಂಡು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಉಭಯ ರಾಜ್ಯಗಳ ನಡುವಿನ ದೀರ್ಘಾವಧಿಯ ಗಡಿ ವಿವಾದವನ್ನು ಇತ್ಯರ್ಥಗೊಳಿಸಲು ಒಪ್ಪಂದಕ್ಕೆ ಸಹಿ ಹಾಕಿದರು. 700 ಕಿಲೋಮೀಟರ್ ಗಡಿ ಪ್ರದೇಶದ ವಿವಾದವನ್ನು ಸಂಪೂರ್ಣವಾಗಿ ಪರಿಹರಿಸಲಾಗಿದೆ ಎಂದು ಆ ಸಮಯದಲ್ಲಿ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ಗೃಹ ಸಚಿವರು ಹೇಳಿದ್ದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ