AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi: ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್​ನ ಇಬ್ಬರು ಸಹಚರರ ಬಂಧನ

ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್(Lawrence Bishnoi)​ನ ಇಬ್ಬರು ಸಹಚರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಹಲವು ಪ್ರಕರಣಗಳಲ್ಲಿ ಇವರು ಬೇಕಾಗಿದ್ದರು.

Delhi: ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್​ನ ಇಬ್ಬರು ಸಹಚರರ ಬಂಧನ
ಗ್ಯಾಂಗ್​ಸ್ಟರ್Image Credit source: ABP Live
ನಯನಾ ರಾಜೀವ್
|

Updated on: Jun 20, 2023 | 3:21 PM

Share

ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್(Lawrence Bishnoi)​ನ ಇಬ್ಬರು ಸಹಚರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಹಲವು ಪ್ರಕರಣಗಳಲ್ಲಿ ಇವರು ಬೇಕಾಗಿದ್ದರು. ಕಪಿಲ್ ಸಂಗ್ವಾನ್, ರೋಹಿತ್ ಶರ್ಮಾ ಅಲಿಯಾಸ್ ಅಣ್ಣಾ ಅಲಿಯಾಸ್ ಗೋಲು ಮತ್ತು ಸಂಜು ಅಲಿಯಾಸ್ ಸುಶಾಂತ್ ರಾಣಾ ಅವರನ್ನು ಬಂಧಿಸಲಾಗಿದೆ. ಇಬ್ಬರನ್ನೂ ದೆಹಲಿ ಪೊಲೀಸರ ವಿಶೇಷ ವಿಭಾಗ ಬಂಧಿಸಿದೆ. ಈ ಬಗ್ಗೆ ಸ್ವತಃ ಪೊಲೀಸರೇ ಮಾಹಿತಿ ಹಂಚಿಕೊಂಡಿದ್ದಾರೆ.

ಹಲವು ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿದ್ದರು ಲಂಡನ್‌ನಿಂದ ಕಪಿಲ್ ಸಾಂಗ್ವಾನ್ ಅವರ ಆದೇಶದ ಮೇರೆಗೆ ಇಬ್ಬರೂ ಸಹಾಯಕರು ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಅಪರಾಧ ಸಿಂಡಿಕೇಟ್‌ಗಳನ್ನು ನಡೆಸುತ್ತಿದ್ದರು.

ಇಬ್ಬರೂ ಕೊಲೆ, ಸುಲಿಗೆ, ಹತ್ಯೆಯಂತಹ ಅಪರಾಧಗಳನ್ನು ಮಾಡುತ್ತಿದ್ದರು. ನಂತರ ದೆಹಲಿ ಪೊಲೀಸರು ಅವರನ್ನು ನಿರಂತರವಾಗಿ ಹುಡುಕುತ್ತಿದ್ದರು.

ಮತ್ತಷ್ಟು ಓದಿ: Gangster Lawrence Bishnoi: ತಿಹಾರ್ ಜೈಲಿನಲ್ಲಿ ಗ್ಯಾಂಗ್​ವಾರ್ ನಡೆಯುವ ಸಂಭವ, ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್​ ದೆಹಲಿಗೆ ಶಿಫ್ಟ್​

ಬಿಜೆಪಿ ಮುಖಂಡ ಸುರೇಂದ್ರ ಮಟಿಯಾಳ ಹತ್ಯೆಯಲ್ಲೂ ಇಬ್ಬರು ಗ್ಯಾಂಗ್​ಸ್ಟರ್​ಗಳು ಭಾಗಿಯಾಗಿದ್ದರು. ಇವರಿಬ್ಬರ ವಿರುದ್ಧ ದೆಹಲಿಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಎಲ್ಲಾ ಪ್ರಕರಣಗಳಲ್ಲಿ ದೆಹಲಿ ಪೊಲೀಸರು ಇಬ್ಬರಿಗಾಗಿ ನಿರಂತರ ಶೋಧ ನಡೆಸುತ್ತಿದ್ದರು.

ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ ಈ ಇಬ್ಬರಿಂದ 32 ಬೋರ್‌ನ ಪಿಸ್ತೂಲ್ ಮತ್ತು 4 ಜೀವಂತ ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ರೋಹಿತ್ ಶರ್ಮಾ ಅಲಿಯಾಸ್ ಅಣ್ಣ, ದೆಹಲಿಯ ಮೋಹನ್ ಗಾರ್ಡನ್‌ನಲ್ಲಿ ಸುಲಿಗೆ ಮತ್ತು ಗುಂಡಿನ ದಾಳಿ ಪ್ರಕರಣದಲ್ಲಿಯೂ ಬೇಕಾಗಿದ್ದ ಎನ್ನಲಾಗಿದೆ.

ಇವರಿಬ್ಬರ ಬಗ್ಗೆ ದೆಹಲಿ ಪೊಲೀಸರಿಗೆ ಗುಪ್ತಚರ ಮಾಹಿತಿ ದೊರೆತಿದ್ದು, ಬಳಿಕ ಅವರನ್ನು ಬಂಧಿಸಲು ವಿಶೇಷ ದಳ ತಂಡವನ್ನು ರಚಿಸಿತ್ತು. ದೆಹಲಿ ಪೊಲೀಸರ ವಿಶೇಷ ದಳದ ತಂಡ ಅವರನ್ನು ಬಂಧಿಸಿದಾಗ ಇಬ್ಬರೂ ದರೋಡೆಕೋರರು ಒಂದೇ ಸ್ಥಳದಲ್ಲಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ