ಚೆನ್ನೈ: ತಮಿಳುನಾಡಿನ ಪಪ್ಪರಪಟ್ಟಿಯಲ್ಲಿರುವ ಜನಪ್ರಿಯ ದೇವಸ್ಥಾನದ ಬೃಹತ್ ರಥ ಸೋಮವಾರ ಮಗುಚಿ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಧರ್ಮಪುರಿ ಜಿಲ್ಲೆಯ ಸಿ ಮನೋಹರನ್ (57) ಮತ್ತು ಜಿ ಸರವಣನ್ (50) ಎಂದು ಗುರುತಿಸಲಾಗಿದೆ. ವೈಕಾಶಿ ಹಬ್ಬದ ಅಂಗವಾಗಿ ಕಾಳಿಯಮ್ಮನ ದೇವಸ್ಥಾನದ ಅಲಂಕೃತ ರಥವನ್ನು ಪೂಜಾ ಸ್ಥಳದ ಬಳಿಯ ಪ್ರಮುಖ ಬೀದಿಗಳಲ್ಲಿ ಎಳೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ: ಇಡಿಯಿಂದ 10 ತಾಸು ರಾಹುಲ್ ಗಾಂಧಿ ವಿಚಾರಣೆ: ಇಂದು ಮತ್ತೆ ವಿಚಾರಣೆಗೆ ಹಾಜರಾಗಲು ಸಮನ್ಸ್
ರಥ ಮಗುಚಿ ಬಿದ್ದಾಗ ಅದರ ಚಕ್ರದಡಿ ಸಿಲುಕಿದ ಇಬ್ಬರ ರಕ್ಷಣೆಗೆ ರಥ ಎಳೆಯುತ್ತಿದ್ದ ಭಕ್ತರು ಹಾಗೂ ಮೆರವಣಿಗೆ ವೀಕ್ಷಿಸುತ್ತಿದ್ದವರು ತಕ್ಷಣ ಧಾವಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಚಲಿಸುತ್ತಿದ್ದ ರಥವು ಇದ್ದಕ್ಕಿದ್ದಂತೆ ಉರುಳಿ ಬಿದ್ದಿದೆ. ಈ ವೇಳೆ ಇಬ್ಬರು ಭಕ್ತರು ರಥದ ಮರದ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾರೆ” ಎಂದು ತಿಳಿಸಿದ್ದಾರೆ.
ಘಟನೆ ಬಗ್ಗೆ ಚೆನ್ನೈನಲ್ಲಿ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ದುರ್ಘಟನೆಯಲ್ಲಿ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: Gold Price Today: ಚಿನ್ನದ ಬೆಲೆಯಲ್ಲಿ ಇಂದು ಯಾವುದೇ ಏರಿಳಿತವಿಲ್ಲ; ಬೆಳ್ಳಿ ದರ 500 ರೂ. ಕುಸಿತ
ಆಟೋದಿಂದ ಕೆಳಗೆ ಬಿದ್ದ ಮಗುವಿನ ರಕ್ಷಣೆ
ಡೆಹ್ರಾಡೂನ್: ಚಲಿಸುತ್ತಿದ್ದ ಆಟೋರಿಕ್ಷಾದಿಂದ ಕೆಳಗೆ ಬಿದ್ದ ಮಗುವನ್ನು ಟ್ರಾಫಿಕ್ ಪೊಲೀಸ್ ಒಬ್ಬರು ಪ್ರಾಣಾಪಾಯದಿಂದ ರಕ್ಷಿಸಿದ ಘಟನೆ ಉತ್ತರಾಖಂಡದ ಕಾಶಿಪುರದಲ್ಲಿ ನಡೆದಿದೆ. ಆಟೋರಿಕ್ಷಾದಲ್ಲಿ ತಾಯಿ ಜೊತೆ ಮಗು ಪ್ರಯಾಣಿಸುತ್ತಿತ್ತು. ಈ ವೇಳೆ ಮಗು ರಸ್ತೆ ಮೇಲೆ ಬಿದ್ದಿದೆ. ಇದನ್ನು ನೋಡಿದ ಕೂಡಲೇ ಎಚ್ಚೆತ್ತ ಟ್ರಾಫಿಕ್ ಪೊಲೀಸ್, ತನ್ನ ಪ್ರಾಣವನ್ನೂ ಲೆಕ್ಕಿಸದೆ ಕಾರು ಹಾಗೂ ಬಸ್ ನಡುವೆ ಬಿದ್ದ ಮಗುವನ್ನು ರಕ್ಷಣೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿ ಮಗುವನ್ನು ರಕ್ಷಿಸುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:02 am, Tue, 14 June 22