ದೆಹಲಿ ವಿಮಾನ ನಿಲ್ದಾಣದ ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವು, 6 ಕಾರ್ಮಿಕರಿಗೆ ಗಾಯ
ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಬಳಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ.
ದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (IGI) ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದು ಆರು ಮಂದಿ ಗಾಯಗೊಂಡಿದ್ದಾರೆ. ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಬಳಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ. ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ.
Delhi | Two labourers dead, six injured at a construction site near Terminal 1 of Delhi airport; FIR registered
— ANI (@ANI) October 9, 2022
Published On - 1:32 pm, Sun, 9 October 22