ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚೌಗಾಮ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾಗೆ ಸೇರಿದ ಇಬ್ಬರು ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ. ಘಟನೆ ನಡೆದ ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವು ವಸ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
“ಶೋಪಿಯಾನ್‌ನ ಚೌಗಾಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಅವರಲ್ಲಿ ಒಬ್ಬ ಭಯೋತ್ಪಾದಕ ಗ್ರೆನೇಡ್ ಗುಂಡು ಹಾರಿಸಿ ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದ. ಇತ್ತೀಚೆಗೆ ಮತ್ತೊಬ್ಬ ಭಯೋತ್ಪಾದಕ ಕೂಡ ಅವರ ಗುಂಪಿಗೆ ಸೇರಿಕೊಂಡಿದ್ದ” ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಉಲ್ಲೇಖಿಸಿದ್ದಾರೆ.
#UPDATE | Two unidentified terrorists neutralized in the encounter that broke out between security forces and terrorists in the Chowgam area of Shopian. Incriminating materials including arms & ammunition recovered. The search operation is underway: Kashmir Zone Police pic.twitter.com/fphCiEXP3f
— ANI (@ANI) December 25, 2021
ಶೋಪಿಯಾನ್‌ನ ಚೌಗಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಸದೆಬಡಿಯಲಾಗಿದೆ. ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಅಧಿಕಾರಿಯೊಬ್ಬರ ಪ್ರಕಾರ, ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಪ್ರದೇಶವನ್ನು ಸುತ್ತುವರೆದಿರುವಾಗ ಗುಂಡಿನ ಚಕಮಕಿ ಪ್ರಾರಂಭವಾಯಿತು. ಆ ಸ್ಥಳದಲ್ಲಿ ಉಗ್ರರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಅಡಗಿದ್ದ ಉಗ್ರರು ಭದ್ರತಾ ಪಡೆಗಳ ಶೋಧನಾ ದಳದ ಮೇಲೆ ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು.
ಇದನ್ನೂ ಓದಿ: Terrorist Encounter: ಶ್ರೀನಗರದಲ್ಲಿ ಸೇನಾ ಪಡೆಯಿಂದ ಎನ್ಕೌಂಟರ್; ಓರ್ವ ಉಗ್ರನ ಹತ್ಯೆ
ಕುಲಗಾಂವ್ನಲ್ಲಿ ಮುಂದುವರಿದ ಎನ್ಕೌಂಟರ್; ಇಂದು ಇಬ್ಬರು ಭಯೋತ್ಪಾದಕರ ಹತ್ಯೆ