Shopian Encounter: ಜಮ್ಮು ಕಾಶ್ಮೀರದ ಶೋಪಿಯಾನ್​​​ನಲ್ಲಿ ಎನ್​ಕೌಂಟರ್; ಇಬ್ಬರು ಎಲ್​ಇಟಿ ಉಗ್ರರ ಹತ್ಯೆ

ಈ ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ ಇಬ್ಬರು ಉಗ್ರರಲ್ಲಿ ಒಬ್ಬ ಈ ಹಿಂದೆ ಬ್ಯಾಂಕ್ ಮ್ಯಾನೇಜರ್​​ ಹತ್ಯೆಯಲ್ಲಿ ಭಾಗಿಯಾಗಿದ್ದ.

Shopian Encounter: ಜಮ್ಮು ಕಾಶ್ಮೀರದ ಶೋಪಿಯಾನ್​​​ನಲ್ಲಿ ಎನ್​ಕೌಂಟರ್; ಇಬ್ಬರು ಎಲ್​ಇಟಿ ಉಗ್ರರ ಹತ್ಯೆ
ಕಾಶ್ಮೀರದಲ್ಲಿ ಬ್ಯಾಂಕ್ ಮ್ಯಾನೇಜರ್ ಹತ್ಯೆಯ ದೃಶ್ಯImage Credit source: NDTV
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 15, 2022 | 8:00 AM

ಬದ್ಗಾಮ್: ಮಂಗಳವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ (Shopian) ಕಾಂಜಿಯುಲಾರ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ (LeT) ಜೊತೆ ನಂಟು ಹೊಂದಿದ್ದ ಇಬ್ಬರು ಉಗ್ರರನ್ನು ಹತ್ಯೆ (Terrorists Encounter) ಮಾಡಲಾಗಿದೆ. ಈ ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ ಇಬ್ಬರು ಉಗ್ರರಲ್ಲಿ ಒಬ್ಬ ಈ ಹಿಂದೆ ಬ್ಯಾಂಕ್ ಮ್ಯಾನೇಜರ್​​ ಹತ್ಯೆಯಲ್ಲಿ ಭಾಗಿಯಾಗಿದ್ದ.

ಇಬ್ಬರು ಉಗ್ರರ ಪೈಕಿ ಒಬ್ಬನನ್ನು ಜಾನ್ ಮೊಹಮ್ಮದ್ ಲೋನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೋಪಿಯಾನ್‌ನ ನಿವಾಸಿಯಾಗಿರುವ ಜಾನ್ ಮೊಹಮ್ಮದ್ ಲೋನ್, ಕುಲ್ಗಾಮ್ ಜಿಲ್ಲೆಯಲ್ಲಿ ಬ್ಯಾಂಕ್ ಮ್ಯಾನೇಜರ್‌ನ ಹತ್ಯೆಯಲ್ಲಿ ಭಾಗಿಯಾಗಿದ್ದ. ಜೂನ್ 2ರಂದು ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರ ಹತ್ಯೆಯಲ್ಲಿ ಈತ ಭಾಗಿಯಾಗಿದ್ದ ಎಂದು ಕಾಶ್ಮೀರ ವಲಯ ಪೊಲೀಸ್ ಐಜಿಪಿ ಕಾಶ್ಮೀರ ವಿಜಯ್ ಕುಮಾರ್ ತಳಿಸಿದ್ದಾರೆ.

ಇದನ್ನೂ ಓದಿ
Image
Encounter: ಪುಲ್ವಾಮಾದಲ್ಲಿ ಮೂವರು ಉಗ್ರರ ಎನ್​ಕೌಂಟರ್: ಈ ಪೈಕಿ ಒಬ್ಬ ಪೊಲೀಸ್ ಹತ್ಯೆಯ ಸಂಚು ರೂಪಿಸಿದ್ದವ
Image
Kulgam Encounter: ಕಾಶ್ಮೀರದ ಕುಲ್ಗಾಂನಲ್ಲಿ ಎನ್​ಕೌಂಟರ್; ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನ ಹತ್ಯೆ
Image
Kupwara Encounter: ಕಾಶ್ಮೀರದ ಕುಪ್ವಾರಾದಲ್ಲಿ ಎನ್​ಕೌಂಟರ್; ಸೇನಾ ಪಡೆಯಿಂದ ಇಬ್ಬರು ಎಲ್​ಇಟಿ ಉಗ್ರರ ಹತ್ಯೆ
Image
Terrorist Encounter: ಜಮ್ಮು ಕಾಶ್ಮೀರದ ಅನಂತ್​ನಾಗ್​ನಲ್ಲಿ ಎನ್​ಕೌಂಟರ್; ಹಿಜ್ಬ್ ಕಮಾಂಡರ್ ಹತ್ಯೆ

ಜೂನ್ 2ರಂದು ದಕ್ಷಿಣ ಕಾಶ್ಮೀರ ಜಿಲ್ಲೆಯ ಅರೆಹ್ ಮೋಹನ್‌ಪೋರಾ ಶಾಖೆಯಲ್ಲಿ ಎಲ್ಲಕಿ ದೇಹತಿ ಬ್ಯಾಂಕ್‌ನ ಮ್ಯಾನೇಜರ್ ಆಗಿದ್ದ ವಿಜಯ್ ಕುಮಾರ್ ಬೇನಿವಾಲ್ ಅವರನ್ನು ಹಗಲು ಹೊತ್ತಿನಲ್ಲೇ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು. ಮ್ಯಾನೇಜರ್ ವಿಜಯ್ ಕುಮಾರ್ ರಾಜಸ್ಥಾನದ ಹನುಮಾನ್‌ಗಢ ನಿವಾಸಿಯಾಗಿದ್ದರು.

ಇದನ್ನೂ ಓದಿ: Encounter: ಪುಲ್ವಾಮಾದಲ್ಲಿ ಮೂವರು ಉಗ್ರರ ಎನ್​ಕೌಂಟರ್: ಈ ಪೈಕಿ ಒಬ್ಬ ಪೊಲೀಸ್ ಹತ್ಯೆಯ ಸಂಚು ರೂಪಿಸಿದ್ದವ

ಭದ್ರತಾ ಕ್ಯಾಮೆರಾದ ದೃಶ್ಯಾವಳಿಯಲ್ಲಿ ಈ ದೃಶ್ಯ ಸೆರೆಯಾಗಿತ್ತು. ಉಗ್ರ ಬ್ಯಾಂಕ್‌ಗೆ ನುಗ್ಗಿ ಬ್ಯಾಂಕ್ ಮ್ಯಾನೇಜರ್‌ಗೆ ಗುಂಡು ಹಾರಿಸುತ್ತಿರುವುದು ವಿಡಿಯೋದಲ್ಲಿ ರೆಕಾರ್ಡ್​ ಆಗಿತ್ತು. ಮೇ 1ರಿಂದ ನಡೆಯುತ್ತಿರುವ ಉದ್ದೇಶಿತ ಹತ್ಯೆಗಳ ಪೈಕಿ ವಿಜಯ್ ಕುಮಾರ್​ ಅವರದ್ದು 8ನೇ ಹತ್ಯೆಯಾಗಿದೆ. ಕಾಶ್ಮೀರಿ ಪಂಡಿತರು, ಹಿಂದೂ ವಲಸಿಗರು ಮತ್ತು ಸರ್ಕಾರಿ ಉದ್ಯೋಗಿಗಳ ಮೇಲೆ ಇತ್ತೀಚಿನ ದಿನಗಳಲ್ಲಿ ಸರಣಿ ಹತ್ಯೆ ನಡೆಯುತ್ತಿದೆ. ಹೀಗಾಗಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರು ತಮ್ಮನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕಳೆದ ತಿಂಗಳು ಬುದ್ಗಾಮ್‌ನ ಮ್ಯಾಜಿಸ್ಟ್ರೇಟ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಅವರನ್ನು ಗುಂಡಿಕ್ಕಿ ಕೊಂದ ನಂತರ ಕಾಶ್ಮೀರಿ ಪಂಡಿತ್ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಧಾನಿಯವರ ಪುನರ್ವಸತಿ ಪ್ಯಾಕೇಜ್ ಅಡಿಯಲ್ಲಿ ಕಾಶ್ಮೀರದ ಕಣಿವೆಯಲ್ಲಿ ಉದ್ಯೋಗದಲ್ಲಿರುವ ಸುಮಾರು 4,000 ಕಾಶ್ಮೀರ ಪಂಡಿತರು ಸುರಕ್ಷಿತವಾಗಿಲ್ಲದ ಕಾರಣ ಸಾಮೂಹಿಕ ವಲಸೆ ಹೋಗುವ ಬೆದರಿಕೆ ಹಾಕಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:58 am, Wed, 15 June 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್