ಬದ್ಗಾಮ್: ಮಂಗಳವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ (Shopian) ಕಾಂಜಿಯುಲಾರ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ (LeT) ಜೊತೆ ನಂಟು ಹೊಂದಿದ್ದ ಇಬ್ಬರು ಉಗ್ರರನ್ನು ಹತ್ಯೆ (Terrorists Encounter) ಮಾಡಲಾಗಿದೆ. ಈ ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ ಇಬ್ಬರು ಉಗ್ರರಲ್ಲಿ ಒಬ್ಬ ಈ ಹಿಂದೆ ಬ್ಯಾಂಕ್ ಮ್ಯಾನೇಜರ್ ಹತ್ಯೆಯಲ್ಲಿ ಭಾಗಿಯಾಗಿದ್ದ.
ಇಬ್ಬರು ಉಗ್ರರ ಪೈಕಿ ಒಬ್ಬನನ್ನು ಜಾನ್ ಮೊಹಮ್ಮದ್ ಲೋನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೋಪಿಯಾನ್‌ನ ನಿವಾಸಿಯಾಗಿರುವ ಜಾನ್ ಮೊಹಮ್ಮದ್ ಲೋನ್, ಕುಲ್ಗಾಮ್ ಜಿಲ್ಲೆಯಲ್ಲಿ ಬ್ಯಾಂಕ್ ಮ್ಯಾನೇಜರ್‌ನ ಹತ್ಯೆಯಲ್ಲಿ ಭಾಗಿಯಾಗಿದ್ದ. ಜೂನ್ 2ರಂದು ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರ ಹತ್ಯೆಯಲ್ಲಿ ಈತ ಭಾಗಿಯಾಗಿದ್ದ ಎಂದು ಕಾಶ್ಮೀರ ವಲಯ ಪೊಲೀಸ್ ಐಜಿಪಿ ಕಾಶ್ಮೀರ ವಿಜಯ್ ಕುಮಾರ್ ತಳಿಸಿದ್ದಾರೆ.
ಜೂನ್ 2ರಂದು ದಕ್ಷಿಣ ಕಾಶ್ಮೀರ ಜಿಲ್ಲೆಯ ಅರೆಹ್ ಮೋಹನ್‌ಪೋರಾ ಶಾಖೆಯಲ್ಲಿ ಎಲ್ಲಕಿ ದೇಹತಿ ಬ್ಯಾಂಕ್‌ನ ಮ್ಯಾನೇಜರ್ ಆಗಿದ್ದ ವಿಜಯ್ ಕುಮಾರ್ ಬೇನಿವಾಲ್ ಅವರನ್ನು ಹಗಲು ಹೊತ್ತಿನಲ್ಲೇ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು. ಮ್ಯಾನೇಜರ್ ವಿಜಯ್ ಕುಮಾರ್ ರಾಜಸ್ಥಾನದ ಹನುಮಾನ್‌ಗಢ ನಿವಾಸಿಯಾಗಿದ್ದರು.
ಇದನ್ನೂ ಓದಿ: Encounter: ಪುಲ್ವಾಮಾದಲ್ಲಿ ಮೂವರು ಉಗ್ರರ ಎನ್ಕೌಂಟರ್: ಈ ಪೈಕಿ ಒಬ್ಬ ಪೊಲೀಸ್ ಹತ್ಯೆಯ ಸಂಚು ರೂಪಿಸಿದ್ದವ
ಭದ್ರತಾ ಕ್ಯಾಮೆರಾದ ದೃಶ್ಯಾವಳಿಯಲ್ಲಿ ಈ ದೃಶ್ಯ ಸೆರೆಯಾಗಿತ್ತು. ಉಗ್ರ ಬ್ಯಾಂಕ್‌ಗೆ ನುಗ್ಗಿ ಬ್ಯಾಂಕ್ ಮ್ಯಾನೇಜರ್‌ಗೆ ಗುಂಡು ಹಾರಿಸುತ್ತಿರುವುದು ವಿಡಿಯೋದಲ್ಲಿ ರೆಕಾರ್ಡ್ ಆಗಿತ್ತು. ಮೇ 1ರಿಂದ ನಡೆಯುತ್ತಿರುವ ಉದ್ದೇಶಿತ ಹತ್ಯೆಗಳ ಪೈಕಿ ವಿಜಯ್ ಕುಮಾರ್ ಅವರದ್ದು 8ನೇ ಹತ್ಯೆಯಾಗಿದೆ. ಕಾಶ್ಮೀರಿ ಪಂಡಿತರು, ಹಿಂದೂ ವಲಸಿಗರು ಮತ್ತು ಸರ್ಕಾರಿ ಉದ್ಯೋಗಿಗಳ ಮೇಲೆ ಇತ್ತೀಚಿನ ದಿನಗಳಲ್ಲಿ ಸರಣಿ ಹತ್ಯೆ ನಡೆಯುತ್ತಿದೆ. ಹೀಗಾಗಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರು ತಮ್ಮನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
#ShopianEncounterUpdate: One of the killed #terrorists has been identified as Jan Mohd Lone of #Shopian. Besides other #terror crimes, he was involved in recent killing of Vijay Kumar, Bank manager on 2/6/22 in #Kulgam district: IGP Kashmir@JmuKmrPolice https://t.co/ltyIDWSGQj
— Kashmir Zone Police (@KashmirPolice) June 14, 2022
ಕಳೆದ ತಿಂಗಳು ಬುದ್ಗಾಮ್‌ನ ಮ್ಯಾಜಿಸ್ಟ್ರೇಟ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಅವರನ್ನು ಗುಂಡಿಕ್ಕಿ ಕೊಂದ ನಂತರ ಕಾಶ್ಮೀರಿ ಪಂಡಿತ್ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಧಾನಿಯವರ ಪುನರ್ವಸತಿ ಪ್ಯಾಕೇಜ್ ಅಡಿಯಲ್ಲಿ ಕಾಶ್ಮೀರದ ಕಣಿವೆಯಲ್ಲಿ ಉದ್ಯೋಗದಲ್ಲಿರುವ ಸುಮಾರು 4,000 ಕಾಶ್ಮೀರ ಪಂಡಿತರು ಸುರಕ್ಷಿತವಾಗಿಲ್ಲದ ಕಾರಣ ಸಾಮೂಹಿಕ ವಲಸೆ ಹೋಗುವ ಬೆದರಿಕೆ ಹಾಕಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:58 am, Wed, 15 June 22