ಕಾಶ್ಮೀರದಲ್ಲಿ ಮತ್ತೆ ಉಗ್ರರ ಗುಂಡಿನ ದಾಳಿ; ನೇಪಾಳ, ಬಿಹಾರದ ಇಬ್ಬರು ಕಾರ್ಮಿಕರ ಮೇಲೆ ಫೈರಿಂಗ್

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಗುರುವಾರ ಸಂಜೆ ನಡೆದ ಉದ್ದೇಶಿತ ದಾಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಗಾಯಗೊಂಡಿದ್ದಾರೆ.

ಕಾಶ್ಮೀರದಲ್ಲಿ ಮತ್ತೆ ಉಗ್ರರ ಗುಂಡಿನ ದಾಳಿ; ನೇಪಾಳ, ಬಿಹಾರದ ಇಬ್ಬರು ಕಾರ್ಮಿಕರ ಮೇಲೆ ಫೈರಿಂಗ್
ಸಾಂದರ್ಭಿಕ ಚಿತ್ರ
Updated By: ಸುಷ್ಮಾ ಚಕ್ರೆ

Updated on: Nov 04, 2022 | 8:53 AM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ (Anantnag) ಜಿಲ್ಲೆಯಲ್ಲಿ ನಡೆದ ಮತ್ತೊಂದು ಉಗ್ರರ ದಾಳಿಯಲ್ಲಿ (Terrorists Attack) ಇಬ್ಬರು ವಲಸೆ ಕಾರ್ಮಿಕರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಅನಂತನಾಗ್ ಜಿಲ್ಲೆಯ ಬೋಂಡಿಯಾಲ್ಗಾಮ್‌ನಲ್ಲಿರುವ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ನೇಪಾಳ ಮತ್ತು ಬಿಹಾರ ಮೂಲದ ಇಬ್ಬರು ವಲಸೆ ಕಾರ್ಮಿಕರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಗುರುವಾರ ಸಂಜೆ ನಡೆದ ಉದ್ದೇಶಿತ ದಾಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಗಾಯಗೊಂಡಿದ್ದಾರೆ. ಅವರಿಬ್ಬರೂ ಅನಂತನಾಗ್‌ನ ಬೊಂಡಿಯಾಲ್‌ಗಾಮ್‌ನಲ್ಲಿರುವ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.


ಇಬ್ಬರನ್ನೂ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದು ಅಮಾನವೀಯ ಭಯೋತ್ಪಾದನಾ ಕೃತ್ಯವಾಗಿದೆ. ಆ ಇಬ್ಬರು ಉಗ್ರರನ್ನು ಕೆಲಸದಲ್ಲಿ ತೊಡಗಿಸಿಕೊಳ್ಳಲು ಹೊರಗೆ ಬರುವಂತೆ ಭಯೋತ್ಪಾದಕ ಕರೆದಿದ್ದಾನೆ. ಇಬ್ಬರೂ ಹೊರಬಂದ ನಂತರ ಉಗ್ರರು ಅವರ ಮೇಲೆ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾರೆ ಎಂದು ಕಾಶ್ಮೀರದ ಎಡಿಜಿಪಿ ಹೇಳಿದ್ದಾರೆ.


ಇದನ್ನೂ ಓದಿ: Kupwara Encounter: ಕಾಶ್ಮೀರದ ಕುಪ್ವಾರದಲ್ಲಿ ಪಾಕಿಸ್ತಾನದ ಓರ್ವ ಉಗ್ರನ ಎನ್​ಕೌಂಟರ್; ಮುಂದುವರಿದ ಶೋಧ ಕಾರ್ಯಾಚರಣೆ

ನವೆಂಬರ್ 1ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಯ ಶಿಬಿರದ ಮೇಲೆ ದಾಳಿ ಮಾಡಲು ಹೊರಟಿದ್ದಾಗ ಕಮಾಂಡರ್ ಸೇರಿದಂತೆ 3 ಎಲ್‌ಇಟಿ ಭಯೋತ್ಪಾದಕರನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿತ್ತು. ಅವಂತಿಪೋರಾ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದರು. ಅವರಲ್ಲಿ ಒಬ್ಬ ವಿದೇಶಿ ಭಯೋತ್ಪಾದಕ ಮತ್ತು ಒಬ್ಬ ಸ್ಥಳೀಯ ಭಯೋತ್ಪಾದಕ ಮುಖ್ತಿಯಾರ್ ಭಟ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ