ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ಚೀತಾ ಮರಿಗಳು ಸಾವು, 2 ದಿನಗಳಲ್ಲಿ ಸಾವಿಗೀಡಾಗಿದ್ದು ಮೂರು ಚೀತಾ

Kuno National Park: ಈ ಹಿಂದೆ ಸಿಯಾಯಾ ಎಂದು ಕರೆಯಲ್ಪಡುತ್ತಿದ್ದ ಜ್ವಾಲಾ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಮೀಬಿಯಾದಿಂದ ಕೆಎನ್‌ಪಿಗೆ ಸ್ಥಳಾಂತರಗೊಂಡ ನಂತರ ಮಾರ್ಚ್ ಕೊನೆಯ ವಾರದಲ್ಲಿ ನಾಲ್ಕು ಮರಿಗಳಿಗೆ ಜನ್ಮ ನೀಡಿತು

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ಚೀತಾ ಮರಿಗಳು ಸಾವು, 2 ದಿನಗಳಲ್ಲಿ ಸಾವಿಗೀಡಾಗಿದ್ದು ಮೂರು ಚೀತಾ
ಚೀತಾ ಮರಿ
Follow us
ರಶ್ಮಿ ಕಲ್ಲಕಟ್ಟ
|

Updated on: May 25, 2023 | 6:10 PM

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (Kuno National Park) ಎರಡು ಚೀತಾ ಮರಿಗಳು (cheetah Cubs) ಸಾವನ್ನಪ್ಪಿವೆ ಎಂದು ಅರಣ್ಯಾಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಕಳೆದ ಮೂರು ದಿನಗಳಲ್ಲಿ ಕೆಎನ್‌ಪಿಯಲ್ಲಿ ಸಾವನ್ನಪ್ಪಿದ ಚೀತಾ ಮರಿಗಳ ಸಂಖ್ಯೆ ಮೂರಕ್ಕೆ ಏರಿದೆ. ಮೇ 23ರಂದು ಒಂದು ಚೀತಾ ಮರಿ ಸಾವನ್ನಪ್ಪಿತ್ತು. ಮೇ 23 ರಂದು ಮಧ್ಯಾಹ್ನ ಎರಡು ಮರಿಗಳು ಸಾವಿಗೀಡಾಗಿದ್ದು, ಅವುಗಳ ಸಾವು ಗುರುವಾರ ವರದಿಯಾಗಿದೆ. ಒಂದೇ ದಿನ ಈ ಎರಡು ಮರಿಗಳು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ನೀಡದಿರುವ ಕಾರಣವನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.

ಭಾರತದಲ್ಲಿ ಚೀತಾಗಳ ಸಂಖ್ಯೆ ಪುನರುಜ್ಜೀವನಗೊಳಿಸುವ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಕೆಎನ್‌ಪಿ ಚೀತಾಗಳನ್ನು ಆಫ್ರಿಕಾದಿಂದ ಸ್ಥಳಾಂತರಿಸಲಾಗಿದೆ.ಅಧಿಕೃತ ಪ್ರಕಟಣೆಯ ಪ್ರಕಾರ, ಮೇ 23 ರಂದು ಚೀತಾ ಮರಿ ಸಾವನ್ನಪ್ಪಿದ ನಂತರ, ಮೇಲ್ವಿಚಾರಣಾ ತಂಡವು ಹೆಣ್ಣು ಚೀತಾ ಜ್ವಾಲಾ ಮತ್ತು ಅದರ ಉಳಿದ ಮೂರು ಮರಿಗಳ ಚಲನವಲನಗಳ ಮೇಲೆ ಕಣ್ಣಿಟ್ಟಿದೆ.

ಈ ಹಿಂದೆ ಸಿಯಾಯಾ ಎಂದು ಕರೆಯಲ್ಪಡುತ್ತಿದ್ದ ಜ್ವಾಲಾ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಮೀಬಿಯಾದಿಂದ ಕೆಎನ್‌ಪಿಗೆ ಸ್ಥಳಾಂತರಗೊಂಡ ನಂತರ ಮಾರ್ಚ್ ಕೊನೆಯ ವಾರದಲ್ಲಿ ನಾಲ್ಕು ಮರಿಗಳಿಗೆ ಜನ್ಮ ನೀಡಿತು.ಮೇ 23ರಂದು ಮೂರು ಮರಿಗಳ ಸ್ಥಿತಿ ಚೆನ್ನಾಗಿಲ್ಲ ಎಂಬುದನ್ನು ಪತ್ತೆ ಹಚ್ಚಿದ ನಿಗಾ ತಂಡ ಚಿಕಿತ್ಸೆನೀಡಲು ಶುರು ಮಾಡಿತ್ತು. ಹಗಲಿನ ತಾಪಮಾನವು 46-47 ಡಿಗ್ರಿ ಸೆಲ್ಸಿಯಸ್ ಆಗಿತ್ತು ಎಂದು ಪ್ರಕಟಣೆ ತಿಳಿಸಿದೆ.

ಚಿಕಿತ್ಸೆ ನೀಡಿದರೂ ಎರಡು ಮರಿಗಳನ್ನು ಉಳಿಸಲಾಗಲಿಲ್ಲ ಎಂದು ಅದು ಹೇಳಿದೆ. ನಾಲ್ಕನೇ ಮರಿಯ ಸ್ಥಿತಿ ಸ್ಥಿರವಾಗಿದೆ, ಆದರೆ ಅದು ಕೂಡ ತೀವ್ರ ಚಿಕಿತ್ಸೆಯಲ್ಲಿದೆ ಎಂದು ಅದು ಹೇಳಿದೆ.

ಚೀತಾ ಅಳಿವಿನ 70 ವರ್ಷಗಳ ನಂತರ ಕಳೆದ ವರ್ಷ ಭಾರತದಲ್ಲಿ ಚೀತಾಗಳನ್ನು ಮರು ಪರಿಚಯಿಸಲಾಯಿತು. ನಮೀಬಿಯಾದ ಚೀತಾಗಳಲ್ಲಿ ಒಂದಾದ ಸಾಶಾ ಮಾರ್ಚ್ 27 ರಂದು ಕಿಡ್ನಿ ಸಂಬಂಧಿ ಕಾಯಿಲೆಯಿಂದ ಸಾವನ್ನಪ್ಪಿದ್ದರೆ, ದಕ್ಷಿಣ ಆಫ್ರಿಕಾದ ಉದಯ್ ಎಂಬ ಮತ್ತೊಂದು ಚೀತಾ ಏಪ್ರಿಲ್ 13 ರಂದು ಸಾವನ್ನಪ್ಪಿತು.

ಇದನ್ನೂ ಓದಿ: Cheetah Death: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವು, 3 ತಿಂಗಳಲ್ಲಿ ಮೂರನೇ ಘಟನೆ

ದಕ್ಷಿಣ ಆಫ್ರಿಕಾದಿಂದ ತರಲಾದ ದಕ್ಷ ಎಂಬ ಚೀತಾ, ಈ ವರ್ಷ ಮೇ 9 ರಂದು ಗಂಡು ಚೀತಾ ಜತೆ ಕಾದಾಟ ನಡೆಸಿ ಸಾವಿಗೀಡಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ