AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಬೃಹತ್ ಎನ್‌ಕೌಂಟರ್; ಪಾಕ್​ ಮೂಲದ ಇಬ್ಬರು ಜೈಶ್ ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಇಂದು ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮೂಲದ 'ಜೈಶ್-ಎ-ಮೊಹಮ್ಮದ್' ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಇದೇ ವೇಳೆ ಕಾರ್ಯಾಚರಣೆಯ ಸ್ಥಳದಲ್ಲಿ ಉಗ್ರರಿಗೆ ನೆರವು ನೀಡುತ್ತಿದ್ದ ಶಂಕಿತ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸ್ ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ಉಗ್ರ ನಿಗ್ರಹ ಕಾರ್ಯಾಚರಣೆಯನ್ನು ನಡೆಸಿವೆ.

ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಬೃಹತ್ ಎನ್‌ಕೌಂಟರ್; ಪಾಕ್​ ಮೂಲದ ಇಬ್ಬರು ಜೈಶ್ ಉಗ್ರರ ಹತ್ಯೆ
ಉಧಂಪುರದಲ್ಲಿ ಬೃಹತ್ ಎನ್‌ಕೌಂಟರ್Image Credit source: TV9
ಸುಷ್ಮಾ ಚಕ್ರೆ
|

Updated on: Sep 17, 2026 | 6:21 PM

Share

ಜಮ್ಮು, ಸೆಪ್ಟೆಂಬರ್ 17: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದ ‘ಆಪರೇಷನ್ ಸೋಹನ್’ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳಿಂದ ಹತ್ಯೆಯಾದ ಇಬ್ಬರು ಭಯೋತ್ಪಾದಕರು ಪಾಕಿಸ್ತಾನ ಮೂಲದ ‘ಜೈಶ್-ಎ-ಮೊಹಮ್ಮದ್’ ಸಂಘಟನೆಗೆ ಸೇರಿದವರೆಂದು ಗುರುತಿಸಲಾಗಿದೆ. ಹತ್ಯೆಯಾದ ಉಗ್ರರನ್ನು ಸದ್ದಾಂ ಮತ್ತು ಮುಸ್ತಫಾ ಎಂದು ಗುರುತಿಸಲಾಗಿದ್ದು, ಇವರಿಬ್ಬರೂ ಪಾಕಿಸ್ತಾನಿ ಪ್ರಜೆಗಳು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ದೃಢಪಡಿಸಿದ್ದಾರೆ.

ಮಾರಕಾಸ್ತ್ರಗಳ ಬೃಹತ್ ಸಂಗ್ರಹ ವಶಕ್ಕೆ:

ಎನ್‌ಕೌಂಟರ್ ನಡೆದ ಸ್ಥಳದಿಂದ ಭದ್ರತಾ ಪಡೆಗಳು ಭಾರಿ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ವಶಪಡಿಸಿಕೊಂಡ ವಸ್ತುಗಳಲ್ಲಿ 4 ಮ್ಯಾಗಜೀನ್‌ಗಳನ್ನೊಳಗೊಂಡ 1 ಎಕೆ ಅಸಲ್ಟ್ ರೈಫಲ್, 3 ಮ್ಯಾಗಜೀನ್‌ಗಳನ್ನೊಳಗೊಂಡ 1 ಎಂ4 ಕಾರ್ಬೈನ್, 2 ಮ್ಯಾಗಜೀನ್‌ಗಳನ್ನೊಳಗೊಂಡ 1 ಗ್ಲಾಕ್ ಪಿಸ್ತೂಲ್, 4 ಹ್ಯಾಂಡ್ ಗ್ರೆನೇಡ್ ಕೂಡ ಸೇರಿವೆ.

ಇದನ್ನೂ ಓದಿ: ಭಾರತದ ನಿಷೇಧಿತ ಉಗ್ರ ಸಂಘಟನೆಯ ಪಟ್ಟಿಗೆ ಸೇರಿದ ಪಾಕಿಸ್ತಾನದ ಶಹಜಾದ್ ಭಟ್ಟಿ ನೆಟ್‌ವರ್ಕ್; ಸರ್ಕಾರ ಘೋಷಣೆ

ತೀವ್ರ ಶೋಧ ಕಾರ್ಯಾಚರಣೆ:

ಉಗ್ರರ ಇರುವಿಕೆಯ ಕುರಿತು ನಿಖರ ಮಾಹಿತಿ ಲಭ್ಯವಾದ ನಂತರ ರಾತ್ರಿಯೇ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಶೋಧ ನಡೆಸಿದಾಗ ಈ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತ್ತು. ಈ ಉಗ್ರರ ಚಲನವಲನಗಳು ಮತ್ತು ಅವರು ನಡೆಸಲು ಯೋಜಿಸಿದ್ದ ದಾಳಿಗಳ ಕುರಿತು ಮತ್ತಷ್ಟು ತನಿಖೆ ಮುಂದುವರಿದಿದೆ. ಈ ಪ್ರದೇಶದಲ್ಲಿ ಇನ್ನುಳಿದ ಉಗ್ರರು ಅಥವಾ ಬೆಂಬಲಿಗರು ಅಡಗಿದ್ದಾರೆಯೇ ಎಂದು ಪತ್ತೆಹಚ್ಚಲು ಡ್ರೋನ್ ಮತ್ತು ಹೆಲಿಕಾಪ್ಟರ್ ತಂತ್ರಜ್ಞಾನ ಬಳಸಿ ಕೂಂಬಿಂಗ್ ಕಾರ್ಯಚರಣೆಯನ್ನು ತೀವ್ರಗೊಳಿಸಲಾಗಿದೆ.

ಇದನ್ನೂ ಓದಿ: ಜಾಗತಿಕ ಸಮುದಾಯವನ್ನು ಮತ್ತೊಮ್ಮೆ ದಾರಿತಪ್ಪಿಸಲು ಪಾಕಿಸ್ತಾನ ಯತ್ನ: ಉಗ್ರ ಮಸೂದ್ ಅಜರ್‌ ತಲೆಗೆ 70 ಲಕ್ಷ ಬಹುಮಾನ ಘೋಷಣೆ

ಸುರಿಯುವ ಮಳೆಯಲ್ಲೂ ಕಾರ್ಯಾಚರಣೆ:

ದಟ್ಟ ಕತ್ತಲು, ಸುರಿಯುವ ಮಳೆ ಮತ್ತು ಕಡಿದಾದ ಗುಡ್ಡಗಾಡು ಪ್ರದೇಶದ ನಡುವೆಯೂ ಸಶಸ್ತ್ರ ಪಡೆಗಳು ಉಗ್ರರಿದ್ದ ಅಡಗುದಾಣವನ್ನು ಯಶಸ್ವಿಯಾಗಿ ಸುತ್ತುವರಿದವು. ತಪ್ಪಿಸಿಕೊಳ್ಳಲು ಯತ್ನಿಸಿದ ಉಗ್ರರು ತೀವ್ರ ಗುಂಡಿನ ದಾಳಿ ನಡೆಸಿದಾಗ, ಪಡೆಗಳು ಪ್ರತ್ಯುತ್ತರ ನೀಡಿ ಇಬ್ಬರನ್ನೂ ಹತ್ಯೆ ಮಾಡಿದವು. ಜಮ್ಮು-ಕಾಶ್ಮೀರದಲ್ಲಿ ಸಕ್ರಿಯವಾಗಿರುವ ಭಯೋತ್ಪಾದನಾ ಜಾಲಗಳನ್ನು ಸಂಪೂರ್ಣವಾಗಿ ಮಟ್ಟಹಾಕಲು ಭದ್ರತಾ ಪಡೆಗಳು ಸತತ ನಿಗ್ರಹ ಕಾರ್ಯಾಚರಣೆಗಳನ್ನು ಕಟ್ಟುನಿಟ್ಟಾಗಿ ಮುಂದುವರಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’