Srinagar Encounter: ಶ್ರೀನಗರದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದ ಇಬ್ಬರು ಪಾಕಿಸ್ತಾನಿ ಉಗ್ರರ ಎನ್‌ಕೌಂಟರ್
ಇತ್ತೀಚೆಗೆ ಸಿಆರ್‌ಪಿಎಫ್ ಸಿಬ್ಬಂದಿಯ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಇಂದು ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರದ ಖನ್ಯಾರ್ ಪ್ರದೇಶದಲ್ಲಿ ಇಂದು ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ (Lashkar-e-Toiba) ಭಯೋತ್ಪಾದಕ ಸಂಘಟನೆಯ ಹಿಟ್ ಸ್ಕ್ವಾಡ್‌ನ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಹತರಾಗಿದ್ದಾರೆ. ಇತ್ತೀಚೆಗೆ ಸಿಆರ್‌ಪಿಎಫ್ ಸಿಬ್ಬಂದಿಯ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಇಂದು ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಲಷ್ಕರ್- ಇ- ತೊಯ್ಬಾ ಸಂಘಟನೆಗೆ ಸೇರಿದವನಾಗಿದ್ದು, ಇದೇ ಸಂಘಟನೆಯ ಇನ್ನೋರ್ವ ಉಗ್ರನನ್ನು ಕೂಡ ಎನ್‌ಕೌಂಟರ್ ಮಾಡಲಾಗಿದೆ.
ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ನಗರದ ಬಿಶೆಂಬರ್ ನಗರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಪಡೆಗಳು ಶೋಧ ನಡೆಸುತ್ತಿದ್ದಂತೆ ಉಗ್ರರು ಭದ್ರತಾ ಪಡೆಯ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಕೂಡ ದಾಳಿ ನಡೆಸಿದ್ದು, ಎನ್‌ಕೌಂಟರ್‌ನಲ್ಲಿ ಉಗ್ರರನ್ನು ಕೊಲ್ಲಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.
ಏಪ್ರಿಲ್ 4ರಂದು ನಗರದ ಮೈಸುಮಾ ಪ್ರದೇಶದಲ್ಲಿ ಸಿಆರ್‌ಪಿಎಫ್ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರನನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ವಿಜಯ್ ಕುಮಾರ್ ಹೇಳಿದ್ದಾರೆ. ಎನ್‌ಕೌಂಟರ್ ಸ್ಥಳದಲ್ಲಿ ಭಯೋತ್ಪಾದಕರು ಗ್ರೆನೇಡ್ ಎಸೆದರು. ಇದರಿಂದಾಗಿ ಸಿಆರ್‌ಪಿಎಫ್ ಸಿಬ್ಬಂದಿ ಮತ್ತು ಇಬ್ಬರು ಪೊಲೀಸರಿಗೆ ಚೂರು ಗಾಯಗಳಾಗಿವೆ ಎಂದು ಅವರು ತಿಳಿಸಿದ್ದಾರೆ. ಗಾಯಾಳುಗಳನ್ನು ಶ್ರೀನಗರದಲ್ಲಿರುವ ಸೇನೆಯ 92 ಮೂಲ ಆಸ್ಪತ್ರೆಗೆ ರವಾನಿಸಲಾಗಿದೆ.
One of the #terrorists involved in recent #terror attack on CRPF Personnel, killed in #Srinagar encounter and other is trapped. #Encounter is going on: IGP Kashmir@JmuKmrPolice
— Kashmir Zone Police (@KashmirPolice) April 10, 2022
ಹತರಾದ ಭಯೋತ್ಪಾದಕರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ಜೊತೆಗೆ ಜಮ್ಮು ವಿಳಾಸವನ್ನು ಹೊಂದಿರುವ ಎರಡು ಆಧಾರ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವರ ಆಧಾರ್ ಕಾರ್ಡ್ ಪ್ರಕಾರ, ಅವರ ಹೆಸರು ನರ್ವಾಲ್ ಕನ್ಯಾನಿ ತಲಾಬ್ ನಿವಾಸಿ ಮುಬಾಶಿರ್ ಉಲ್ ಶಾಫಿ ಮತ್ತು ಜಮ್ಮುವಿನ ಉಮರ್ ಕಾಲೋನಿ ಮಲಿಕ್ ಮಾರ್ಕೆಟ್ ನಿವಾಸಿ ಆದಿಲ್ ಹುಸೇನ್ ಎಂಬುದು ಪತ್ತೆಯಾಗಿದೆ. ಭದ್ರತಾ ಏಜೆನ್ಸಿಗಳನ್ನು ಚೆಕ್‌ಮೇಟ್ ಮಾಡಲು ಅವರು ಈ ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸುತ್ತಿದ್ದರು.
ಇದನ್ನೂ ಓದಿ: Terrorists Encounter: ಜಮ್ಮು ಕಾಶ್ಮೀರದಲ್ಲಿ ಮಾಜಿ ಪತ್ರಕರ್ತ ಸೇರಿ ಇಬ್ಬರು ಉಗ್ರರ ಎನ್‌ಕೌಂಟರ್
60 ಪ್ರಕರಣಗಳ ಆರೋಪಿಯನ್ನು ಎನ್‌ಕೌಂಟರ್‌ನಲ್ಲಿ ಕೊಂದ ತಮಿಳುನಾಡು ಪೊಲೀಸರು; ತನಿಖೆ ಪ್ರಾರಂಭ