ಆಗಸ್ಟ್ 2019ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಹೊರಗಿನ ಇಬ್ಬರು ಮಾತ್ರ ಆಸ್ತಿ ಖರೀದಿಸಿದ್ದಾರೆ: ಕೇಂದ್ರ ಗೃಹ ಸಚಿವಾಲಯ

Jammu and Kashmir: ಜಮ್ಮು ಮತ್ತು ಕಾಶ್ಮೀರದಲ್ಲಿ ಆಸ್ತಿ ಖರೀದಿಸುವಾಗ ಇತರ ರಾಜ್ಯಗಳ ಜನರು ಎದುರಿಸುತ್ತಿರುವ ತೊಂದರೆಗಳು ಮತ್ತು ಅಡೆತಡೆಗಳ ಕುರಿತು ಕೇಳಿದಾಗ ಅಂತಹ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ರಾಯ್ ಹೇಳಿದರು.

ಆಗಸ್ಟ್ 2019ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಹೊರಗಿನ ಇಬ್ಬರು ಮಾತ್ರ ಆಸ್ತಿ ಖರೀದಿಸಿದ್ದಾರೆ: ಕೇಂದ್ರ ಗೃಹ ಸಚಿವಾಲಯ
ನಿತ್ಯಾನಂದ ರಾಯ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 10, 2021 | 5:59 PM

ದೆಹಲಿ: ಹೊರಗಿನ ಇಬ್ಬರು ವ್ಯಕ್ತಿಗಳು ಮಾತ್ರ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಆಸ್ತಿಗಳನ್ನು ಖರೀದಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಸಂಸತ್ ನಲ್ಲಿ ಹೇಳಿದೆ. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಕಾಶ್ಮೀರದ ಹೊರಗಿನವರಿಗೂ ಅಲ್ಲಿ ಆಸ್ತಿ ಖರೀದಿಸುವ ಹಕ್ಕನ್ನು ನೀಡಿದೆ. ಜಮ್ಮು ಮತ್ತು ಕಾಶ್ಮೀರ ಸರ್ಕಾರ ನೀಡಿದ ಮಾಹಿತಿಯ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ಹೊರಗಿನ ಇಬ್ಬರು ವ್ಯಕ್ತಿಗಳು ಆಗಸ್ಟ್ 2019 ರಿಂದ ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದಲ್ಲಿ ಎರಡು ಆಸ್ತಿಗಳನ್ನು ಖರೀದಿಸಿದ್ದಾರೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಹೇಳಿದರು. ರಾಯ್ ಅವರು ಆಸ್ತಿಗಳ ವಿವರಗಳನ್ನು ಅಥವಾ ಅವುಗಳ ಮಾಲೀಕರ ಬಗ್ಗೆ ನೀಡಿ ವಿವರಗಳನ್ನು ನೀಡಿಲ್ಲ. ಜಮ್ಮು ಮತ್ತು ಕಾಶ್ಮೀರದಲ್ಲಿ ಆಸ್ತಿ ಖರೀದಿಸುವಾಗ ಇತರ ರಾಜ್ಯಗಳ ಜನರು ಎದುರಿಸುತ್ತಿರುವ ತೊಂದರೆಗಳು ಮತ್ತು ಅಡೆತಡೆಗಳ ಕುರಿತು ಕೇಳಿದಾಗ ಅಂತಹ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ರಾಯ್ ಹೇಳಿದರು.

ಕೇಂದ್ರವು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹೊರಗಿನವರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕೃಷಿಯೇತರ ಭೂಮಿಯನ್ನು ಖರೀದಿಸಲು ಅವಕಾಶ ನೀಡುವ ನಿಯಮಗಳನ್ನು ಸೂಚಿಸಿತು. ಜಮ್ಮು ಕಾಶ್ಮೀರದ ಹೊರಗಿನವರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಿರ ಆಸ್ತಿಯನ್ನು ಖರೀದಿಸಲು ಅಥವಾ ಹೊಂದಲು, ಅಲ್ಲಿ ಶಾಶ್ವತವಾಗಿ ನೆಲೆಸಲು, ಅಥವಾ ರಾಜ್ಯ ಪ್ರಾಯೋಜಿತ ಸ್ಕಾಲರ್‌ಶಿಪ್ ಯೋಜನೆಗಳ ಲಾಭವನ್ನು ಪಡೆಯಲು 2019 ರ ಆಗಸ್ಟ್‌ನಲ್ಲಿ ಅನುಚ್ಛೇದ 35ಎ ರದ್ದುಗೊಳಿಸುವ ಮೊದಲು ನಿರ್ಬಂಧಿಸಲಾಗಿತ್ತು.

ಕೇಂದ್ರವು ಅಕ್ಟೋಬರ್ 2020 ರಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿನ ಭೂಮಿಯನ್ನು ವಿಲೇವಾರಿ ಮಾಡುವ ಕುರಿತು ಜಮ್ಮು ಮತ್ತು ಕಾಶ್ಮೀರ ಅಭಿವೃದ್ಧಿ ಕಾಯಿದೆಯ ಸೆಕ್ಷನ್ 17 ರಿಂದ “ರಾಜ್ಯದ ಖಾಯಂ ನಿವಾಸಿ” ಎಂಬ ಪದಗುಚ್ಛವನ್ನು ಬಿಟ್ಟು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿತು. ಉಪವಿಭಾಗ 2 ರಲ್ಲಿ, ಅಧಿಸೂಚನೆಯು ಇಡೀ ರಾಜ್ಯವನ್ನು” “ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶ” ದೊಂದಿಗೆ ಬದಲಿಸಿದೆ. ಇದು “ರಾಜ್ಯದ ಖಾಯಂ ನಿವಾಸಿಯಾಗಿರುವುದನ್ನು” ಬಿಟ್ಟುಬಿಡುವಂತೆ ಸೂಚಿಸಿತು, ಪ್ರತಿಯೊಬ್ಬರೂ ಭೂಮಿಯನ್ನು ಖರೀದಿಸಲು ದಾರಿ ಮಾಡಿಕೊಟ್ಟಿತು. ಅಂದ ಹಾಗೆ ಕೃಷಿ ಭೂಮಿಯನ್ನು ರೈತರಿಗಾಗಿ ಕಾಯ್ದಿರಿಸಲಾಗಿದೆ.

1989 ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ 5,886 ಭದ್ರತಾ ಸಿಬ್ಬಂದಿ ಹತ್ಯೆಯಾಗಿದ್ದಾರೆ: ಸರ್ಕಾರದ ಮಾಹಿತಿ 1989 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಆರಂಭವಾದಾಗಿನಿಂದ 5,800 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಲಾಗಿದೆ ಎಂದು ರಾಯ್ ಲೋಕಸಭೆಗೆ ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರವು ಭಯೋತ್ಪಾದಕ ಹಿಂಸಾಚಾರದಿಂದ ಪ್ರಭಾವಿತವಾಗಿದೆ ಮತ್ತು ಗಡಿಯುದ್ದಕ್ಕೂ ಬೆಂಬಲಿತವಾಗಿದೆ ಎಂದು ರಾಯ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಆರಂಭವಾದಾಗಿನಿಂದ (1989 ರಿಂದ ಆಗಸ್ಟ್ 5, 2019 ರವರೆಗೆ) ಭಯೋತ್ಪಾದಕ ಘಟನೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 5,886 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ:  Jammu and Kashmir ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ, ಹಲವರಿಗೆ ಗಾಯ

(Two people from outside Jammu and Kashmir have purchased properties in the union territory since August 2019 says MHA)

Published On - 5:58 pm, Tue, 10 August 21

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ