AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ವಿವೇಕ್ ವಿಹಾರ್‌ನಲ್ಲಿ ಮನೆ ಕುಸಿದು 3 ವರ್ಷದ ಮಗು ಸೇರಿ ಇಬ್ಬರು ಸಾವು; ನಾಲ್ವರಿಗೆ ಗಾಯ

ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಹಳೆಯ ಕಟ್ಟಡವೊಂದು ಏಕಾಏಕಿ ಕುಸಿದು ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಈ ಘಟನೆಯ ಕುರಿತು ದೆಹಲಿ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಹಳೆಯ ಹಾಗೂ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವು ಹಠಾತ್ತನೆ ಕುಸಿದ ಪರಿಣಾಮ ಕಟ್ಟಡದ ಒಳಗಿದ್ದವರು ಮತ್ತು ಸಮೀಪದಲ್ಲಿದ್ದವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡರು.

ದೆಹಲಿಯ ವಿವೇಕ್ ವಿಹಾರ್‌ನಲ್ಲಿ ಮನೆ ಕುಸಿದು 3 ವರ್ಷದ ಮಗು ಸೇರಿ ಇಬ್ಬರು ಸಾವು; ನಾಲ್ವರಿಗೆ ಗಾಯ
Delhi House Collapse
ಸುಷ್ಮಾ ಚಕ್ರೆ
|

Updated on: Nov 17, 2026 | 3:09 PM

Share

ನವದೆಹಲಿ, ನವೆಂಬರ್ 17: ದೆಹಲಿಯ ಶಹದರಾದ ವಿವೇಕ್ ವಿಹಾರ್ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಮನೆಯೊಂದು ಕುಸಿದು ಬಿದ್ದ ಪರಿಣಾಮ 3 ವರ್ಷದ ಮಗು ಸೇರಿದಂತೆ ಕನಿಷ್ಠ ಇಬ್ಬರು ಮೃತಪಟ್ಟಿದ್ದಾರೆ. ಇದಲ್ಲದೆ, ಈ ಕಟ್ಟಡದಲ್ಲಿ ಬಾಡಿಗೆಗಿದ್ದ ನಾಲ್ವರು ಈ ದುರಂತದಲ್ಲಿ ಗಾಯಗೊಂಡಿದ್ದಾರೆ. ಮೃತಪಟ್ಟ ಮತ್ತೊಬ್ಬ ವ್ಯಕ್ತಿಯನ್ನು ಕಟ್ಟಡದ ನೆಲಮಹಡಿಯಲ್ಲಿ ವಾಸಿಸುತ್ತಿದ್ದ 30 ವರ್ಷದ ಪಿಂಟು ಎಂದು ಗುರುತಿಸಲಾಗಿದೆ.

ನೆಲಮಹಡಿ ಮತ್ತು ಮೊದಲ ಮಹಡಿಯನ್ನು ಹೊಂದಿದ್ದ ಈ ಮನೆ ಇಂದು ಬೆಳಿಗ್ಗೆ ಏಕಾಏಕಿ ಕುಸಿದು ಬಿದ್ದಿದೆ. “ಮಾಹಿತಿ ತಿಳಿದ ತಕ್ಷಣವೇ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದರು. ಕ್ಯಾಟ್ ಆ್ಯಂಬುಲೆನ್ಸ್‌ಗಳ ನೆರವಿನೊಂದಿಗೆ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಎಲ್ಲಾ 6 ಮಂದಿಯನ್ನು ರಕ್ಷಿಸಿ, ವೈದ್ಯಕೀಯ ಚಿಕಿತ್ಸೆಗಾಗಿ ಹೆಡ್ಗೆವಾರ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು” ಎಂದು ಅಧಿಕಾರಿಗಳ ಪ್ರಕಟಣೆ ತಿಳಿಸಿದೆ. ಈ ಕಟ್ಟಡದ ಮಾಲೀಕರನ್ನು ಸುರೇಂದರ್ ಸಿಂಗ್ ಎಂದು ಅಧಿಕಾರಿಗಳು ಗುರುತಿಸಿದ್ದಾರೆ.

ಇದನ್ನೂ ಓದಿ: ದೆಹಲಿಗೆ ಬರಲಿದ್ದಾರೆ ಸಿಂಧೂ ನದಿ ವಿಚಾರಕ್ಕೆ ಬಂದ್ರೆ ಕೈ ಕತ್ತರಿಸ್ತೀವಿ ಎಂದು ಭಾರತಕ್ಕೆ ಬೆದರಿಕೆ ಹಾಕಿದ್ದ ಪಾಕ್ ಸಚಿವ

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸಂತಾಪ:

ಈ ಘಟನೆಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹೇಳಿಕೆ ನೀಡಿರುವ ಬಿಜೆಪಿ ನಾಯಕಿ ರೇಖಾ ಗುಪ್ತಾ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.

“ದೆಹಲಿಯ ಶಹದರಾದ ಜ್ವಾಲಾ ನಗರದಲ್ಲಿ ಸಂಭವಿಸಿದ ಭೀಕರ ಕಟ್ಟಡ ಕುಸಿತದ ದುರಂತದಲ್ಲಿ ಜೀವಹಾನಿಯಾಗಿರುವುದು ತೀವ್ರ ನೋವುಂಟುಮಾಡಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಹೃದಯಪೂರ್ವಕ ಸಂತಾಪಗಳು. ಮೃತರ ಆತ್ಮಕ್ಕೆ ಭಗವಂತನು ತನ್ನ ದಿವ್ಯ ಪಾದಗಳಲ್ಲಿ ಸ್ಥಾನ ನೀಡಲಿ ಮತ್ತು ದುಃಖತಪ್ತ ಕುಟುಂಬಗಳಿಗೆ ಈ ಭರಿಸಲಾಗದ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ನಾನು ವೈಯಕ್ತಿಕವಾಗಿ ಇಡೀ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ದುಃಖದ ಸಮಯದಲ್ಲಿ ದೆಹಲಿ ಸರ್ಕಾರವು ಸಂತ್ರಸ್ತ ಕುಟುಂಬಗಳೊಂದಿಗೆ ನಿಲ್ಲುತ್ತದೆ” ಎಂದು ಅವರು ‘ಎಕ್ಸ್’ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ
ಕಾಂಗ್ರೆಸ್ ನಾಯಕರ ವೈಯಕ್ತಿಕ ಟೀಕೆಗೆ ಯದುವೀರ್ ಒಡೆಯರ್ ಖಡಕ್ ತಿರುಗೇಟು
ಕಾಂಗ್ರೆಸ್ ನಾಯಕರ ವೈಯಕ್ತಿಕ ಟೀಕೆಗೆ ಯದುವೀರ್ ಒಡೆಯರ್ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು