ಜಾರ್ಖಂಡ್ ಕೇಬಲ್ ಕಾರ್ ಅಪಘಾತದಲ್ಲಿ ಇಬ್ಬರು ದುರ್ಮರಣ; ಜನರ ರಕ್ಷಣೆಗೆ ಧಾವಿಸಿದ ವಾಯುಪಡೆ

ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಇನ್ನೂ ಕೆಲವರು ರೋಪ್‌ವೇಯಲ್ಲಿ ಕೇಬಲ್ ಕಾರ್‌ಗಳಲ್ಲಿ ಸಿಲುಕಿಕೊಂಡಿದ್ದು, ಅವರನ್ನು ರಕ್ಷಿಸಲಾಗುತ್ತಿದೆ. ಎಲ್ಲಾ ಪ್ರವಾಸಿಗರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗುತ್ತಿದೆ ಎಂದು ಡಿಸಿ ಹೇಳಿದ್ದು ವದಂತಿಗಳನ್ನು ಹರಡದಂತೆ ಜನರಿಗೆ ಮನವಿ ಮಾಡಿದರು.

ಜಾರ್ಖಂಡ್ ಕೇಬಲ್ ಕಾರ್ ಅಪಘಾತದಲ್ಲಿ ಇಬ್ಬರು ದುರ್ಮರಣ; ಜನರ ರಕ್ಷಣೆಗೆ ಧಾವಿಸಿದ ವಾಯುಪಡೆ
ಜಾರ್ಖಂಡ್ ಕೇಬಲ್ ಕಾರ್ ಅಪಘಾತ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Apr 11, 2022 | 4:31 PM

ರಾಂಚಿ: ಜಾರ್ಖಂಡ್‌ನ ದಿಯೋಘರ್ (Jharkhand) ಜಿಲ್ಲೆಯ ತ್ರಿಕೂಟ್ ಬೆಟ್ಟಗಳಲ್ಲಿ (Trikut hills) ಭಾನುವಾರ ಕೇಬಲ್ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವರದಿಗಳ ಪ್ರಕಾರ, ಹತ್ತಾರು ಜನರು ಇನ್ನೂ ಅಲ್ಲಿ ಸಿಲುಕಿಕೊಂಡಿದ್ದಾರೆ ಮತ್ತು ಭಾರತೀಯ ವಾಯುಪಡೆ(Indian Air Force)ಎರಡು ಹೆಲಿಕಾಪ್ಟರ್‌ಗಳ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ತಾಂತ್ರಿಕ ದೋಷದಿಂದ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ನಿಖರವಾದ ಕಾರಣವನ್ನು ಇನ್ನೂ ತಿಳಿದಿಲ್ಲ. ಘಟನೆಯ ನಂತರ ರೋಪ್‌ವೇ ಮ್ಯಾನೇಜರ್ ಮತ್ತು ಇತರ ಉದ್ಯೋಗಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಜಿಗಿದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಲ್ಲಿ ಹೇಳಿದೆ. ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ದಿಯೋಘರ್ ಉಪ ಆಯುಕ್ತ ಮಂಜುನಾಥ ಭಜಂತ್ರಿ ತಿಳಿಸಿದ್ದಾರೆ. ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (ಐಟಿಬಿಪಿ) ಕೂಡ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದೆ. ಡಿಸಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸುಭಾಷ್ ಚಂದ್ರ ಜಾಟ್ ಇಬ್ಬರೂ ಸ್ಥಳದಿಂದ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸ್ಥಳೀಯ ಗ್ರಾಮಸ್ಥರು ಸಹ ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದ್ದಾರೆ ಎಂದು ಭಜಂತ್ರಿ ಹೇಳಿದರು.

ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಇನ್ನೂ ಕೆಲವರು ರೋಪ್‌ವೇಯಲ್ಲಿ ಕೇಬಲ್ ಕಾರ್‌ಗಳಲ್ಲಿ ಸಿಲುಕಿಕೊಂಡಿದ್ದು, ಅವರನ್ನು ರಕ್ಷಿಸಲಾಗುತ್ತಿದೆ. ಎಲ್ಲಾ ಪ್ರವಾಸಿಗರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗುತ್ತಿದೆ ಎಂದು ಡಿಸಿ ಹೇಳಿದ್ದು ವದಂತಿಗಳನ್ನು ಹರಡದಂತೆ ಜನರಿಗೆ ಮನವಿ ಮಾಡಿದರು. ಗೊಡ್ಡಾ ಸಂಸದ ನಿಶಿಕಾಂತ್ ದುಬೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಜಾರ್ಖಂಡ್ ಮುಖ್ಯ ಕಾರ್ಯದರ್ಶಿ ಸುಖದೇವ್ ಸಿಂಗ್ ಅವರಿಗೆ ತಿಳಿಸಿದ್ದು, ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲು ವಿನಂತಿಸಿದ್ದಾರೆ.

ಈ ವಿಷಯದ ಬಗ್ಗೆ ತಕ್ಷಣ ಗಮನ ಹರಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು. ಜಾರ್ಖಂಡ್ ಪ್ರವಾಸೋದ್ಯಮವು ಬಾಬಾ ಬೈದ್ಯನಾಥ ದೇವಾಲಯದ ಸಮೀಪವಿರುವ ತ್ರಿಕುಟ್ ರೋಪ್‌ವೇ ಭಾರತದ ಅತಿ ಎತ್ತರದ ಲಂಬ ರೋಪ್‌ವೇ ಎಂದು ಹೇಳುತ್ತದೆ. ಬಾಬಾ ಬೈದ್ಯನಾಥ ದೇವಸ್ಥಾನದಿಂದ ಸುಮಾರು 20 ಕಿಮೀ ದೂರದಲ್ಲಿರುವ ರೋಪ್‌ವೇ ಸುಮಾರು 766 ಮೀಟರ್ ಉದ್ದವಿದ್ದರೆ, ಬೆಟ್ಟವು 392 ಮೀಟರ್ ಎತ್ತರದಲ್ಲಿದೆ. ರೋಪ್‌ವೇಯಲ್ಲಿ 25 ಗಾಡಿಗಳಿದ್ದು, ಪ್ರತಿಯೊಂದರಲ್ಲಿ ನಾಲ್ಕು ಜನರಿಗೆ ಆಸನಗಳಿವೆ.

ಇದನ್ನೂ ಓದಿ: ;ರೈತರು ಸರ್ಕಾರ ಉರುಳಿಸಬಹುದು: ಪ್ರಧಾನಿ ಮೋದಿಗೆ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಎಚ್ಚರಿಕೆ