ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿ; ಇಬ್ಬರು ರೈಲ್ವೆ ಪೊಲೀಸ್​ ಸಿಬ್ಬಂದಿ ಮರಣ, ಇನ್ನೊಬ್ಬರಿಗೆ ಗಾಯ

ಕಳೆದ ಮೂರು ವಾರಗಳಿಂದ ಉಗ್ರರು ಭದ್ರತಾ ಪಡೆಗಳ ಮೇಲೆ ಪದೇಪದೆ ದಾಳಿ ನಡೆಸುತ್ತಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ನಾಗರಿಕರನ್ನೂ ಹತ್ಯೆಗೈಯ್ಯುತ್ತಿದ್ದಾರೆ. ಈ ತಿಂಗಳಲ್ಲಿ ನಡೆದ 9ನೇ ದಾಳಿ ಇದು.

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿ; ಇಬ್ಬರು ರೈಲ್ವೆ ಪೊಲೀಸ್​ ಸಿಬ್ಬಂದಿ ಮರಣ, ಇನ್ನೊಬ್ಬರಿಗೆ ಗಾಯ
ಪ್ರಾತಿನಿಧಿಕ ಚಿತ್ರ
Follow us
| Updated By: Lakshmi Hegde

Updated on: Apr 18, 2022 | 8:44 PM

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿರುವ ಕಾಕ್ಪೋರಾ ರೈಲ್ವೆ ಸ್ಟೇಶನ್​​ ಬಳಿ ಉಗ್ರರು ದಾಳಿ ನಡೆಸಿದ ಪರಿಣಾಮ ಇಬ್ಬರು ರೈಲ್ವೆ ಪೊಲೀಸ್​ ಸಿಬ್ಬಂದಿ ಮೃತಪಟ್ಟಿದ್ದಾರೆ. ಇನ್ನೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಸುತ್ತಲಿನ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರಿದಿವೆ. ರೈಲ್ವೆ ಸ್ಟೇಶನ್​ ಸಮೀಪವೇ ಒಂದು ಟೀ ಅಂಗಡಿ ಇದ್ದು, ಅಲ್ಲಿಯೇ ಉಗ್ರರು ದಾಳಿ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಅಲ್ಲಿದ್ದ ರೈಲ್ವೆ ರಕ್ಷಣಾ ಪಡೆಯ ಅಧಿಕಾರಿಗಳು ಉಗ್ರರ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. 

ಕಳೆದ ಮೂರು ವಾರಗಳಿಂದ ಉಗ್ರರು ಭದ್ರತಾ ಪಡೆಗಳ ಮೇಲೆ ಪದೇಪದೆ ದಾಳಿ ನಡೆಸುತ್ತಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ನಾಗರಿಕರನ್ನೂ ಹತ್ಯೆಗೈಯ್ಯುತ್ತಿದ್ದಾರೆ. ಈ ತಿಂಗಳಲ್ಲಿ ನಡೆದ 9ನೇ ದಾಳಿ ಇದು. ಏಪ್ರಿಲ್​ 15ರಂದು ಬಾರಾಮುಲ್ಲಾ ಜಿಲ್ಲೆಯ ಹಳ್ಳಿಯೊಂದರ ಸರ್​ಪಂಚ್​ ಮಂಜೂರ್ ಅಹ್ಮದ್​​​ನನ್ನು ಉಗ್ರರು ಕೊಂದು ಹಾಕಿದ್ದರು. ಅದಾದ ಮೇಲೆ ಬಾಂಗ್ರೂ ಎಂಬಾತನನ್ನು ಹತ್ಯೆಗೈಯಲಾಗಿತ್ತು. ಬುಧವಾರ ಕುಲಗಾಂ ಜಿಲ್ಲೆಯಲ್ಲಿ ಸತೀಶ್​ ಸಿಂಗ್​ ಎಂಬುವರನ್ನು ಉಗ್ರರು ಕೊಂದಿದ್ದರು.

ಇದನ್ನೂ ಓದಿ: ಪೋಸ್ಟ್ ಹಾಕಿದವನ ವಿರುದ್ಧ ಪೊಲೀಸ್ ಕ್ರಮ ತೆಗೆದುಕೊಂಡಿದ್ದರೂ ಮುಸ್ಲಿಮರು ಕಲ್ಲು ತೂರಾಟ ನಡೆಸಿದ್ದು ತಪ್ಪು: ಇಮ್ರಾನ್, ಕಾರ್ಪೊರೇಟರ್