AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದ ಚುನಾವಣೆಗೆ ಕಮಲ್ ನಾಥ್ ನಾಯಕತ್ವ ಬಗ್ಗೆ ಪಕ್ಷದಲ್ಲೇ ಅಸಮಾಧಾನ; ಪರಸ್ಪರ ವಾಕ್ಸಮರ ನಡೆಸಿದ ನಾಯಕರು

ಮಧ್ಯಪ್ರದೇಶದ ಜನರು ಮತ್ತು ಪಕ್ಷದ ನಾಯಕರು ಕಮಲ್ ನಾಥ್ ಅವರನ್ನು ರಾಜ್ಯದ ಸಿಎಂ ಆಗಬೇಕೆಂದು ಬಯಸುತ್ತಾರೆ. ಇತರರು ಅವರೊಂದಿಗೆ ಹೇಗೆ ಸಹಕರಿಸಬೇಕು ಎಂದು ನಿರೀಕ್ಷಿಸುತ್ತಾರೋ ಗೋವಿಂದ್ ಸಿಂಗ್ ಹಾಗೆ ನಡೆದುಕೊಳ್ಳಬೇಕು ಎಂದು ಸಜ್ಜನ್ ಸಿಂಗ್ ವರ್ಮಾ ಹೇಳಿದ್ದಾರೆ.

ಮಧ್ಯಪ್ರದೇಶದ ಚುನಾವಣೆಗೆ ಕಮಲ್ ನಾಥ್ ನಾಯಕತ್ವ ಬಗ್ಗೆ ಪಕ್ಷದಲ್ಲೇ ಅಸಮಾಧಾನ; ಪರಸ್ಪರ ವಾಕ್ಸಮರ ನಡೆಸಿದ ನಾಯಕರು
ಗೋವಿಂದ್ ಸಿಂಗ್- ಕಮಲ್ ನಾಥ್
Follow us
ರಶ್ಮಿ ಕಲ್ಲಕಟ್ಟ
|

Updated on:Jun 05, 2023 | 4:39 PM

ಭೋಪಾಲ್: ವರ್ಷಾಂತ್ಯದಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಮಧ್ಯಪ್ರದೇಶ (Madhya Pradesh Election) ಘಟಕದ ಅಧ್ಯಕ್ಷ ಕಮಲ್ ನಾಥ್ (Kamal Nath) ಅವರನ್ನು ಪಕ್ಷದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ಕುರಿತು ಇಬ್ಬರು ಹಿರಿಯ ಕಾಂಗ್ರೆಸ್ ನಾಯಕರ ನಡುವೆ ಜಗಳ ನಡೆದಿದೆ.  ಮೇ 29 ರಂದು ದೆಹಲಿಯಲ್ಲಿ ಮಧ್ಯಪ್ರದೇಶ ಚುನಾವಣಾ ಸಿದ್ಧತೆ ಕುರಿತು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಭಾಗವಹಿಸಿದ್ದ ಸಭೆಯ ನಂತರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಗೋವಿಂದ್ ಸಿಂಗ್ (Govind Singh )ಮತ್ತು ಕಮಲ್ ನಾಥ್ ನಿಷ್ಠ ಶಾಸಕ ಸಜ್ಜನ್ ಸಿಂಗ್ ವರ್ಮಾ (Sajjan Singh Verma) ನಡುವೆ ಮಾತಿನ ಚಕಮಕಿ ನಡೆದಿದೆ.

ವಿಷಯ ಏನೆಂದರೆ, ಸಭೆಯಲ್ಲಿ ಭಾಗವಹಿಸಿದ ನಂತರ ಗೋವಿಂದ್ ಸಿಂಗ್, ಕಾಂಗ್ರೆಸ್ ಪ್ರಜಾಪ್ರಭುತ್ವ ಪಕ್ಷವಾಗಿದೆ.  ಸಿಎಂ ಯಾರು ಎಂಬುದನ್ನು ಮುಂಚಿತವಾಗಿ ಘೋಷಿಸುವುದು ಕಾಂಗ್ರೆಸ್ ಸಂಪ್ರದಾಯವಲ್ಲ. ಸಾರ್ವಜನಿಕರು ಶಾಸಕರನ್ನು ಆಯ್ಕೆ ಮಾಡುತ್ತಾರೆ. ಆನಂತರ ಸಿಎಂ ಆಯ್ಕೆ ನಡೆಯುತ್ತದೆ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಜ್ಜನ್ ಸಿಂಗ್ ವರ್ಮಾ, ಶಾಸಕರು ನಿಮ್ಮನ್ನು  ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆಯೇ ಎಂಬುದನ್ನು ಗೋವಿಂದ್ ಸಿಂಗ್ ಅವರು ಕೆಲವೊಮ್ಮೆ ಮರೆತುಬಿಡುತ್ತಾರೆಯೇ? ಅವರು (ಸಿಂಗ್) ಶಾಸಕರಿಂದ ಚುನಾಯಿತರಾಗಿಲ್ಲ. ಅವರು ಹಿರಿಯರು. ಆದ್ದರಿಂದ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ನೇಮಿಸಲು ನಾವು ಸಹ ಒಪ್ಪಿಕೊಂಡಿದ್ದೇವೆ ಎಂದಿದ್ದಾರೆ.

ಮಧ್ಯಪ್ರದೇಶದ ಜನರು ಮತ್ತು ಪಕ್ಷದ ನಾಯಕರು ಕಮಲ್ ನಾಥ್ ಅವರನ್ನು ರಾಜ್ಯದ ಸಿಎಂ ಆಗಬೇಕೆಂದು ಬಯಸುತ್ತಾರೆ. ಇತರರು ಅವರೊಂದಿಗೆ ಹೇಗೆ ಸಹಕರಿಸಬೇಕು ಎಂದು ನಿರೀಕ್ಷಿಸುತ್ತಾರೋ ಗೋವಿಂದ್ ಸಿಂಗ್ ಹಾಗೆ ನಡೆದುಕೊಳ್ಳಬೇಕು ಎಂದು ಸಜ್ಜನ್ ಸಿಂಗ್ ವರ್ಮಾ ಹೇಳಿದ್ದಾರೆ.

ಎಲ್ಲ 22 ಮಂದಿ (ರಾಹುಲ್ ಗಾಂಧಿಯವರ ಸಭೆಯಲ್ಲಿ) ಕಮಲ್ ನಾಥ್ ಅವರನ್ನು ತಮ್ಮ ನಾಯಕ ಎಂದು ಒಪ್ಪಿಕೊಂಡಿದ್ದಾರೆ. ಇದು ದಾಖಲೆಯಲ್ಲಿದೆ. 2023 ರ ಚುನಾವಣೆಯು ಕಮಲ್ ನಾಥ್ ಅವರ ನಾಯಕತ್ವದಲ್ಲಿ ನಡೆಯಲಿದೆ ಎಂದು ಎಲ್ಲಾ ನಾಯಕರು ಒಪ್ಪಿಕೊಂಡಿದ್ದಾರೆ ಎಂದು ಸಜ್ಜನ್ ಸಿಂಗ್ ವರ್ಮಾ ಹೇಳಿದ್ದಾರೆ.

ಏತನ್ಮಧ್ಯೆ, ಭಾನುವಾರದಂದು ಸಜ್ಜನ್ ಸಿಂಗ್ ವರ್ಮಾ ಅವರು ತಮ್ಮ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ ಎಂದು ಹೇಳುವ ವಿಡಿಯೊ ಬಿಡುಗಡೆ ಮಾಡಿದರು.

ಕಮಲ್ ನಾಥ್ ನೇತೃತ್ವದಲ್ಲಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಎಲ್ಲಾ ಹಿರಿಯ ನಾಯಕರು ನಿರ್ಧರಿಸಿದ್ದಾರೆ ನಿಜ,ಅವರು ನಮ್ಮ ಪಕ್ಷದ ನಾಯಕ ಎಂದು ನಾನು ಹಲವಾರು ಬಾರಿ ಹೇಳಿದ್ದೇನೆ ಎಂದಿದ್ದಾರೆ ವರ್ಮಾ.ಆದಾಗ್ಯೂ, ಚುನಾವಣೆಯ ನಂತರ ಮತ್ತು ಶಾಸಕಾಂಗ ಪಕ್ಷದಲ್ಲಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುತ್ತದೆ ಎಂದು ಗೋವಿಂದ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: Sakshi Malik: ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ, ಎಲ್ಲವೂ ಸುಳ್ಳು ಸುದ್ದಿ ಎಂದ ಸಾಕ್ಷಿ ಮಲಿಕ್

ಏತನ್ಮಧ್ಯೆ,  ಕಮಲ್ ನಾಥ್ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸಬೇಕೆಂದು ಪಕ್ಷದ ನಾಯಕರು ಬಯಸುತ್ತಾರೆ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್  ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿಯೂ ಕಾಂಗ್ರೆಸ್ ಕರ್ನಾಟಕದ ರೀತಿಯನ್ನು ಅಳವಡಿಸುವುದಾದರೆ ವಿಪಕ್ಷ ನಾಯಕನೇ ಮುಖ್ಯಮಂತ್ರಿ ಸ್ಥಾನಕ್ಕೇರಬೇಕು. ಕರ್ನಾಟಕದಲ್ಲಿ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಈಗ ಮುಖ್ಯಮಂತ್ರಿ. ಹಾಗೆ ನೋಡುವುದಾದರೆ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಚುನಾವಣೆ ಗೆದ್ದರೆ ಸಿಎಂ ಪಟ್ಟ ಗೋವಿಂದ್ ಸಿಂಗ್​​ಗೆ ನೀಡಬೇಕು. ಆದರೆ ಕಮಲ್ ನಾಥ್ ಅವರಿಗೆ ಹೈಕಮಾಂಡ್ ಬೆಂಬಲವಿದೆ. ಹೀಗಿರುವಾಗ ಸಿಎಂ ಸ್ಥಾನಕ್ಕೆ ನಾಯಕರ ನಡುವೆಯೇ ಪೈಪೋಟಿ ನಡೆಯಲಿದೆ. ವಿಪಕ್ಷ ನೇತಾರನಾಗಿರುವ ಸಿಂಗ್ ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ನೀಡಲಿದೆಯೇ ಅಥವಾ ಆಪ್ತ ಕಮಲ್ ನಾಥ್ ಅವರನ್ನೇ ಸಿಎಂ ಮಾಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:38 pm, Mon, 5 June 23

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ