ಒಡಿಶಾದಲ್ಲಿ ಎರಡು ಪ್ರತ್ಯೇಕ ಅಪಘಾತ, 8 ಮಂದಿ ಸಾವು
ಒಡಿಶಾದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಸಿಮೆಂಟ್ ತುಂಬಿದ ಟ್ರಕ್ ಪಲ್ಟಿಯಾಗಿ ಆರು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಒಡಿಶಾದ ಮಲ್ಕನಗಿರಿ ಜಿಲ್ಲೆಯಲ್ಲಿ ನಡೆದಿದೆ. ಸ್ವಾಭಿಮಾನ್ ಅಂಚಲ್ ಪ್ರದೇಶದ ಹಂತಲಗುಡ ಘಾಟ್ ನಲ್ಲಿ ಈ ಘಟನೆ ನಡೆದಿದೆ. ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ 3 ಲಕ್ಷ ರೂಪಾಯಿ ಪರಿಹಾರ ಘೋಷಿಸುವ ಮೂಲಕ ತ್ವರಿತ ಕ್ರಮ ಕೈಗೊಂಡಿದ್ದಾರೆ. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಆದೇಶಿಸಿದ್ದಾರೆ.

ಟ್ರಕ್ ಚಿತ್ರಕೊಂಡದಿಂದ ಜೋಡಂಬಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೆಂಟ್ ಚೀಲಗಳ ಅಡಿಯಲ್ಲಿ ಸಿಲುಕಿಕೊಂಡಿದ್ದ ಐದು ಕಾರ್ಮಿಕರ ಶವಗಳನ್ನು ಹೊರತೆಗೆಯಲಾಯಿತು.
ಗಾಯಾಳುಗಳನ್ನು ಜೋಡಂಬದ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತ್ವರಿತವಾಗಿ ಸಾಗಿಸಲಾಯಿತು ಮತ್ತು ನಂತರ ಹೆಚ್ಚಿನ ವೈದ್ಯಕೀಯ ಸಹಾಯಕ್ಕಾಗಿ ಚಿತ್ರಕೊಂಡಕ್ಕೆ ವರ್ಗಾಯಿಸಲಾಯಿತು.
ಮತ್ತಷ್ಟು ಓದಿ: ರಾಮನಗರ: ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಾಲನೆ, ಪಲ್ಟಿಯಾಗಿ ಹೊತ್ತಿ ಉರಿದ ಕಾರು
ಸಂತ್ರಸ್ತರು ನೆರೆಯ ನಬರಂಗಪುರ ಜಿಲ್ಲೆಯ ಕೊಸಗುಮುಡಾ ಪ್ರದೇಶದವರು. ನಬರಂಗಪುರದ ಸಂಸದ ರಮೇಶ್ ಮಾಝಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಪರಿಶೀಲಿಸಿ, ಅವರ ಯೋಗಕ್ಷೇಮ ವಿಚಾರಿಸಿದರು.
ಮತ್ತೊಂದು ಅಪಘಾತ ಮೂವರು ಸಾವು ನಯಾಗರ್ ಜಿಲ್ಲೆಯ ದಸ್ಪಲ್ಲಾ ಪ್ರದೇಶದಲ್ಲಿ ಕಾರು ಮತ್ತು ಬೈಕ್ ನಡುವೆ ಅಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಛತ್ತೀಸ್‌ಗಢದಿಂದ ಪುರಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಕಾರಿಗೆ ಸುಬಲಯ ಚೌಕದಲ್ಲಿ ಡಿಕ್ಕಿ ಸಂಭವಿಸಿದ್ದು, ಬೈಕ್ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ