Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರ ಕಣ್ತಪ್ಪಿಸಿ ಕಾರಿನೊಳಗೆ ಹೋಗಿ ಕುಳಿತಿದ್ದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಸಾವು

ಪೋಷಕರ ಕಣ್ಣು ತಪ್ಪಿಸಿ ಕಾರಿನೊಳಗೆ ಹೋಗಿ ಕುಳಿತಿದ್ದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಎರಡರಿಂದ ಏಳು ವರ್ಷದೊಳಗಿನ ಮಕ್ಕಳು ಹತ್ತಿರದಲ್ಲಿ ಆಟವಾಡುತ್ತಿದ್ದಾಗ ಕಾರಿನ ಕೀಲಿಗಳು ಸಿಕ್ಕಿದ್ದು ವಾಹನಕ್ಕೆ ಪ್ರವೇಶಿಸಿದ್ದವು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಬಾಗಿಲು ತೆರೆಯಲು ಸಾಧ್ಯವಾಗದೆ, ಅವರ ಪೋಷಕರು ಕೆಲಸದಿಂದ ಹಿಂತಿರುಗಿ ಬಂದು ದುರಂತವನ್ನು ಕಂಡುಕೊಳ್ಳುವವರೆಗೂ ಅವರು ಒಳಗೆ ಸಿಲುಕಿಕೊಂಡಿದ್ದರು.

ಪೋಷಕರ ಕಣ್ತಪ್ಪಿಸಿ ಕಾರಿನೊಳಗೆ ಹೋಗಿ ಕುಳಿತಿದ್ದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಸಾವು
ಕಾರು-ಸಾಂದರ್ಭಿಕ ಚಿತ್ರ
Follow us
ನಯನಾ ರಾಜೀವ್
|

Updated on: Apr 15, 2025 | 9:34 AM

ತೆಲಂಗಾಣ, ಏಪ್ರಿಲ್ 15: ಇಬ್ಬರು ಸಹೋದರಿಯರು ಕಾರಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ರಂಗಾರೆಡ್ಡಿಯಲ್ಲಿ ನಡೆದಿದೆ. ಅವರಿಬ್ಬರು ಕಾರು ಹತ್ತಿ ಕುಳಿತು ಒಂದು ಗಂಟೆಗಳೇ ಕಳೆದಿದ್ದರೂ ಯಾರೂ ಕೂಡ ಅದನ್ನು ಗಮನಿಸಿರಲಿಲ್ಲ. ತೆಲಂಗಾಣ(Telangana)ದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ದಮರಗಿರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.

ತನುಶ್ರೀ, ಅಭಿನೇತ್ರಿ ಮೃತರು, ಪೋಷಕರು ಸಂಬಂಧಿಕರೊಬ್ಬರ ವಿವಾಹದ ಬಗ್ಗೆ ಚರ್ಚಿಸಲು ಮಕ್ಕಳನ್ನು ಕರೆದುಕೊಂಡು ಅಜ್ಜಿಯ ಮನೆಗೆ ಹೋಗಿದ್ದರು. ಚರ್ಚೆ ನಡೆಯುತ್ತಿರುವಾಗ ತನುಶ್ರೀ ಮತ್ತು ಅಭಿನೇತ್ರಿ ಹೊರಗೆ ಹೋಗಿ, ಕಾರಿನ ಬಾಗಿಲು ತೆರೆದು, ವಾಹನದೊಳಗೆ ಯಾರಿಗೂ ತಿಳಿಯದಂತೆ ಕುಳಿತಿದ್ದರು.

ಅವರು ಒಂದು ಗಂಟೆಗೂ ಹೆಚ್ಚು ಕಾಲ ಕಾರಿನಲ್ಲೇ ಇದ್ದರು, ಉಸಿರುಗಟ್ಟುವಿಕೆಯಿಂದಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಪೋಷಕರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು ಎಂದು ವರದಿಯಾಗಿದೆ, ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ, ಇದುವರೆಗೆ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ.

ಇದನ್ನೂ ಓದಿ
Image
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
Image
ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯ: ಗೃಹ ಸಚಿವ ಪರಮೇಶ್ವರ್
Image
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Image
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ

ಮತ್ತಷ್ಟು ಓದಿ: ಕೌಟುಂಬಿಕ ಕಲಹ: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಕಳೆದ ವರ್ಷ ನವೆಂಬರ್‌ನಲ್ಲಿ, ಗುಜರಾತ್‌ನ ಅಮ್ರೇಲಿ ಜಿಲ್ಲೆಯ ರಾಂಧಿಯಾ ಗ್ರಾಮದಲ್ಲಿ ಮಧ್ಯಪ್ರದೇಶದ ವಲಸೆ ಕುಟುಂಬದ ನಾಲ್ವರು ಮಕ್ಕಳು ಆಕಸ್ಮಿಕವಾಗಿ ನಿಲ್ಲಿಸಿದ್ದ ಕಾರಿನೊಳಗೆ ಕುಳಿತುಕೊಂಡು ಉಸಿರುಗಟ್ಟಿ ಸಾವನ್ನಪ್ಪಿದ್ದರು .

ಎರಡರಿಂದ ಏಳು ವರ್ಷದೊಳಗಿನ ಮಕ್ಕಳು ಹತ್ತಿರದಲ್ಲಿ ಆಟವಾಡುತ್ತಿದ್ದಾಗ ಕಾರಿನ ಕೀಲಿಗಳು ಸಿಕ್ಕಿದ್ದು ಕೂಡಲೇ ಕಾರು ಹತ್ತಿ ಕುಳಿತಿದ್ದರು. ಬಾಗಿಲು ತೆರೆಯಲು ಸಾಧ್ಯವಾಗದೆ, ಅವರ ಪೋಷಕರು ಕೆಲಸದಿಂದ ಹಿಂತಿರುಗಿ ಬರುವಷ್ಟರಲ್ಲಿ ದುರಂತ ಸಾವು ಕಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ