ಮಹಾರಾಷ್ಟ್ರದ (Maharashtra) ಥಾಣೆ ಜಿಲ್ಲೆಯ ಭಿವಂಡಿಯಲ್ಲಿ (Bhiwandi)ಶನಿವಾರ ಎರಡು ಅಂತಸ್ತಿನ ಗೋಡೌನ್ ಕುಸಿದಿದ್ದು, ಅಲ್ಲಿ ವಾಸಿಸುತ್ತಿದ್ದ ಮತ್ತು ಕೆಲಸ ಮಾಡುತ್ತಿದ್ದ ಹಲವಾರು ಜನರನ್ನು ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಸ್ತುತ ಪ್ರಕರಣದಲ್ಲಿ ಇಬ್ಬರು ಸಾವಿಗೀಡಾಗಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ. ಸುಮಾರು 110-15 ಮಂದಿ ಸಿಲುಕಿರುವ ಶಂಕೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪ್ರಾಥಮಿಕ ಮಾಹಿತಿ ಪ್ರಕಾರ 10 ವರ್ಷ ಹಳೇ ಕಟ್ಟಡವಾಗಿದೆ ಇದು. ಈಗಾಗಲೇ ಘಟನೆ ನಡೆದ ಮಂಕೋಳಿಯ ವಾಲ್ಪಾಡಾ ಪ್ರದೇಶದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಪ್ರಾರಂಭಿಸಿರುವುದಾಗಿ ಪ್ರಾದೇಶಿಕ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ಅವಿನಾಶ್ ಸಾವಂತ್ ಹೇಳಿದ್ದಾರೆ. ವರದಿಗಳ ಪ್ರಕಾರ, ಒಂಬತ್ತು ಜನರನ್ನು ರಕ್ಷಿಸಲಾಗಿದೆ.
ಮಂಕೋಳಿಯ ವಾಲ್ಪಾಡದಲ್ಲಿರುವ ಸ್ಥಳದಲ್ಲಿ ಭಾರೀ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಥಾಣೆ ವಿಪತ್ತು ನಿರ್ವಹಣಾ ಪಡೆಗಳ ತಲಾ ಒಂದು ತಂಡ ಆಗಮಿಸಿದ್ದು, ಇನ್ನೊಂದು ಎನ್‌ಡಿಆರ್‌ಎಫ್ ತಂಡ ಆಗಮಿಸುತ್ತಿದೆ ಎಂದು ಜಿಲ್ಲಾ ವಿಪತ್ತು ನಿಯಂತ್ರಣ ಸೆಲ್ ಮುಖ್ಯಸ್ಥೆ ಅನಿತಾ ಜವಾಂಜಲ್ ಪಿಟಿಐಗೆ ತಿಳಿಸಿದರು.
ಇದನ್ನೂ ಓದಿ: Defamation case: ಮಾನನಷ್ಟ ಪ್ರಕರಣ: ಶಿಕ್ಷೆಗೆ ತಡೆಯಾಜ್ಞೆ ಕೋರಿ ರಾಹುಲ್ ಗಾಂಧಿ ಮೇಲ್ಮನವಿ ಅಂತಿಮ ವಿಚಾರಣೆ ಮೇ 2ಕ್ಕೆ
ವರ್ಧಮಾನ್ ಕಾಂಪೌಂಡ್‌ನಲ್ಲಿ ಎರಡು ಅಂತಸ್ತಿನ ಕಟ್ಟಡವು ಮಧ್ಯಾಹ್ನ 1.45 ರ ಸುಮಾರಿಗೆ ಕುಸಿದಿದೆ. ಮೇಲಿನ ಮಹಡಿಯಲ್ಲಿ ನಾಲ್ಕು ಕುಟುಂಬಗಳು ವಾಸವಾಗಿದ್ದು, ನೆಲ ಮಹಡಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಭಿವಂಡಿ, ಥಾಣೆ ಮತ್ತು ಇತರ ಹತ್ತಿರದ ಪ್ರದೇಶಗಳಿಂದ ಅಗ್ನಿಶಾಮಕ ವಾಹನಗಳನ್ನು ಕರೆತಂದಿದ್ದು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:00 pm, Sat, 29 April 23