AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ನಕಲಿ ಐಡಿ, ಗನ್ ಹೊಂದಿದ್ದ ಇಬ್ಬರು ಶಂಕಿತರ ಬಂಧನ

ಪ್ರಧಾನಮಂತ್ರಿ ನರೇಂದ್ರ ಮೋದಿ ಮುಂಬೈಗೆ ಭೇಟಿ ನೀಡಿದ್ದಾರೆ. ಬೃಹತ್ 'ಗ್ಲೋಬಲ್ ಫಿನ್ ಟೆಕ್ ಫೆಸ್ಟ್ (ಜಿಎಫ್​ಎಫ್​)' ಉದ್ಘಾಟಿಸಬೇಕಿದ್ದ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನ ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್ ಆವರಣದಲ್ಲಿ ಭಾರಿ ಭದ್ರತಾ ಲೋಪದ ಯತ್ನವೊಂದು ಬೆಳಕಿಗೆ ಬಂದಿದೆ. ಪ್ರಧಾನಮಂತ್ರಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ, ಗನ್ ಹಿಡಿದು ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಇಬ್ಬರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಮುಂಬೈನ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ನಕಲಿ ಐಡಿ, ಗನ್ ಹೊಂದಿದ್ದ ಇಬ್ಬರು ಶಂಕಿತರ ಬಂಧನ
ರೋಹನ್ ಪಾರೇಖ್Image Credit source: TV9
ಸುಷ್ಮಾ ಚಕ್ರೆ
|

Updated on: Sep 08, 2026 | 6:43 PM

Share

ಮುಂಬೈ, ಸೆಪ್ಟೆಂಬರ್ 8: ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಬೇಕಿದ್ದ ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನ ‘ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್’ (NMACC) ಆವರಣಕ್ಕೆ ನಕಲಿ ಗುರುತಿನ ಚೀಟಿ ಬಳಸಿ ಪ್ರವೇಶಿಸಲು ಯತ್ನಿಸಿದ ಇಬ್ಬರು ವ್ಯಕ್ತಿಗಳನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಂಕಿತರ ಬಳಿ ನಕಲಿ ಐಡಿ ಹಾಗೂ ಗನ್ ಪತ್ತೆಯಾದ ಬೆನ್ನಲ್ಲೇ ಭದ್ರತಾ ಪಡೆಗಳು ಭಾರಿ ಕಟ್ಟೆಚ್ಚರ ವಹಿಸಿವೆ.

ಬಂಧಿತ ಪ್ರಮುಖ ಆರೋಪಿಯನ್ನು 24 ವರ್ಷದ ರೋಹನ್ ಪಾರೇಖ್ ಎಂದು ಗುರುತಿಸಲಾಗಿದೆ. ಈತ ಭದ್ರತಾ ತಪಾಸಣೆ ವೇಳೆ ಪ್ರಧಾನಿ ಕಚೇರಿಯ (ಪಿಎಂಒ) ನಕಲಿ ಸರ್ಕಾರಿ ಐಡಿ ಕಾರ್ಡ್ ತೋರಿಸಿ ಮೋದಿಯ ಕಾರ್ಯಕ್ರಮ ನಡೆಯುವ ಆವರಣದೊಳಗೆ ನುಗ್ಗಲು ಯತ್ನಿಸಿದ್ದ. ತಪಾಸಣೆಯ ವೇಳೆ ಈ ದಾಖಲೆಗಳು ನಕಲಿ ಎಂದು ದೃಢಪಟ್ಟಿವೆ. ಹಾಗೇ, ಆರೋಪಿ ರೋಹನ್ ಪಾರೇಖ್ ಜೊತೆ ಬಂದಿದ್ದ ಆತನ ಬಾಡಿಗಾರ್ಡ್​ ಬಳಿ ಬಂದೂಕು ಪತ್ತೆಯಾಗಿದೆ. ಆರಂಭಿಕ ತನಿಖೆಯಲ್ಲಿ ಈ ಗನ್​ಗೆ ಲೈಸೆನ್ಸ್ ಇದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ದೇಶದ ಸರಕು ಸಾಗಣೆಗೆ ಹೊಸ ಶಕ್ತಿ, 2,800 ಕಿ.ಮೀ. ಮೀಸಲಾದ ಸರಕು ಕಾರಿಡಾರ್ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ ಮೋದಿ

ಕ್ರೈಮ್ ಬ್ರಾಂಚ್ ತನಿಖೆ:

ಪ್ರಧಾನಿ ಮೋದಿ ಆಗಮನಕ್ಕೂ ಕೆಲವೇ ಗಂಟೆಗಳ ಮೊದಲು ಈ ಘಟನೆ ನಡೆದಿರುವುದರಿಂದ ಮುಂಬೈ ಕ್ರೈಮ್ ಬ್ರಾಂಚ್ ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದೆ. ಶಂಕಿತರ ಹಿನ್ನೆಲೆ, ನಕಲಿ ಐಡಿ ಸೃಷ್ಟಿಸಿದ ಉದ್ದೇಶ ಹಾಗೂ ಹೈ-ಪ್ರೊಫೈಲ್ ವಲಯಕ್ಕೆ ಮಾರಕಾಸ್ತ್ರದೊಂದಿಗೆ ಪ್ರವೇಶಿಸಲು ಇದ್ದ ಪ್ಲಾನ್ ಕುರಿತು ಸುದೀರ್ಘ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: 66 ಕೆಜಿ ಚಿನ್ನ, 335 ಕೆಜಿ ಬೆಳ್ಳಿ ಹಾಗೂ 703 ಕೋಟಿ ರೂ. ವಿಮೆ: ಮುಂಬೈ ಜಿಎಸ್‌ಬಿ ಮಹಾ ಗಣಪತಿಯ ದಿವ್ಯ ವೈಭವ!

ಇಂದಿನಿಂದ ಸೆಪ್ಟೆಂಬರ್ 11ರವರೆಗೆ ಮುಂಬೈನಲ್ಲಿ ‘ಗ್ಲೋಬಲ್ ಫಿನ್ ಟೆಕ್ ಫೆಸ್ಟ್’ನ 7ನೇ ಆವೃತ್ತಿ ನಡೆಯುತ್ತಿದೆ. 2020ರಲ್ಲಿ ಆರಂಭಗೊಂಡ ಈ ಜಾಗತಿಕ ವೇದಿಕೆಯು ಹಣಕಾಸು ಮತ್ತು ತಂತ್ರಜ್ಞಾನ ಕ್ಷೇತ್ರದ ನೀತಿ ನಿರೂಪಕರು, ಬ್ಯಾಂಕುಗಳು ಹಾಗೂ ಗ್ಲೋಬಲ್ ಫಿನ್ ಟೆಕ್ ಸಂಸ್ಥೆಗಳನ್ನು ಒಂದೆಡೆ ಸೇರಿಸುತ್ತದೆ. ಈ ಬಾರಿಯ ಸಮ್ಮೇಳನದಲ್ಲಿ ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆ, ಎಐ, ಪ್ರೋಗ್ರಾಮೆಬಲ್ ಫೈನಾನ್ಸ್ ಹಾಗೂ ಕ್ವಾಂಟಮ್ ತಂತ್ರಜ್ಞಾನಗಳ ಜಾಗತಿಕ ಪ್ರಭಾವದ ಕುರಿತು ಪ್ರಮುಖ ಚರ್ಚೆಗಳು ನಡೆಯಲಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!