ಹೈದರಾಬಾದ್: ನಗರದ ವಿವಿಧೆಡೆ ಶನಿವಾರ ರಾತ್ರಿಯಿಂದೀಚೆಗೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಒಟ್ಟು 7 ಜನರು ಸಾವಿಗೀಡಾಗಿದ್ದಾರೆ.
ಹೈದರಾಬಾದ್‌ನ ಗಚ್ಚಿಬೌಲಿ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಐವರು ಯುವಕರು ಮೃತಪಟ್ಟಿದ್ದಾರೆ. ಸಿಗ್ನಲ್ ಜಂಪ್ ಹಾಗೂ ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಮೃತರನ್ನು ಸಂತೋಷ (25), ಪವನ್‌ಕುಮಾರ (24), ಪಪ್ಪು (20), ಮನೋಹರ (23), ರೋಷನ್ (23) ಎಂದು ಗುರುತಿಸಲಾಗಿದೆ.
ಹೈದರಾಬಾದ್‌ನ ಪಠಾನಚೇರುನಲ್ಲಿ ಮತ್ತೊಂದು ಭೀಕರ ಅಪಘಾತ ನಡೆದಿದ್ದು, ಬೈಕೊಂದಕ್ಕೆ ಟಿಪ್ಪರ್ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಸಾವಿಗೀಡಾದರನ್ನು ಗುರುತಿಸಲು ಸಾಧ್ಯವಾಗಿಲ್ಲ.