ಪುಲ್ವಾಮಾದಲ್ಲಿ ಎನ್​ಕೌಂಟರ್: ಇಬ್ಬರು ಉಗ್ರರ ಸಾವು

| Updated By: ಸಾಧು ಶ್ರೀನಾಥ್​

Updated on: Dec 09, 2020 | 1:27 PM

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಇಬ್ಬರು ಅಲ್ಟ್ರಾ ಭಯೋತ್ಪಾದಕರ ಎನ್​ಕೌಂಟರ್. ಶೋಧ ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ಗುಂಪನ್ನು ಪತ್ತೆ ಹಚ್ಚಲಾಗುವುದು ಎಂದು ಪೊಲೀಸ್ ಹೇಳಿದ್ದಾರೆ.

ಪುಲ್ವಾಮಾದಲ್ಲಿ ಎನ್​ಕೌಂಟರ್: ಇಬ್ಬರು ಉಗ್ರರ ಸಾವು
ಸಾಂದರ್ಭಿಕ ಚಿತ್ರ
Follow us on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪುಲ್ವಾಮಾ ಜಿಲ್ಲೆಯಲ್ಲಿ ಬುಧವಾರ ನಡೆದ ಭದ್ರತಾ ಪಡೆಗಳ ಮುಖಾಮುಖಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಪುಲ್ವಾಮಾ ಜಿಲ್ಲಾ ಪೊಲೀಸರು ತಿಳಿಸಿದರು. ದಾಳಿಯ ಗುಂಡಿನ ಕಾಳಗದಲ್ಲಿ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಭದ್ರತಾ ಪಡೆಗಳು ಪುಲ್ವಾಮಾ ಜಿಲ್ಲೆಯ ಟಿಕೆನ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿಯನ್ನು ಪಡೆದರು. ನಂತರ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಗುಂಡಿನ ಚಕಾಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವರೆಗೆ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಶೋಧ ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ಗುಂಪನ್ನು ಪತ್ತೆ ಹಚ್ಚಲಾಗುವುದು ಎಂದು ಕಾಶ್ಮೀರ ವಲಯ ಪೊಲೀಸರು ಹೇಳಿದ್ದಾರೆ.