ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಎನ್‌ಕೌಂಟರ್​​: ಇಬ್ಬರು ಉಗ್ರರ ಹತ್ಯೆ, ಶಸ್ತ್ರಾಸ್ತ್ರ ವಶಕ್ಕೆ

ಸಿಕ್ಕಿಬಿದ್ದ ಉಗ್ರರಲ್ಲಿ ಒಬ್ಬ ಪಾಕಿಸ್ತಾನಿ ಎಂದು ಕಾಶ್ಮೀರದ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ), ವಿಜಯ್ ಕುಮಾರ್ ಹೇಳಿದ್ದಾರೆ. ಹೈದರ್ ಎರಡು ವರ್ಷಗಳಿಂದ ಉತ್ತರ ಕಾಶ್ಮೀರದಲ್ಲಿ ಸಕ್ರಿಯನಾಗಿದ್ದ...

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಎನ್‌ಕೌಂಟರ್​​: ಇಬ್ಬರು ಉಗ್ರರ ಹತ್ಯೆ, ಶಸ್ತ್ರಾಸ್ತ್ರ ವಶಕ್ಕೆ
ಕುಲ್ಗಾಮ್ ಎನ್​ಕೌಂಟರ್
Edited By:

Updated on: May 08, 2022 | 3:57 PM

ಕುಲ್ಗಾಮ್: ಭಾನುವಾರ ಜಮ್ಮು ಮತ್ತು ಕಾಶ್ಮೀರದ (Jammu and Kashmir)ಕುಲ್ಗಾಮ್ ಜಿಲ್ಲೆಯಲ್ಲಿ(Kulgam) ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಹತರಾದ ಇಬ್ಬರು ಉಗ್ರರಲ್ಲಿ ಲಷ್ಕರ್-ಎ-ತೈಬಾ (LeT) ಸಂಘಟನೆಯ ಪಾಕಿಸ್ತಾನಿ ಭಯೋತ್ಪಾದಕನೂ ಸೇರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ನೀಡಿದ ನಂತರ ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸಿಕ್ಕಿಬಿದ್ದ ಉಗ್ರರಲ್ಲಿ ಒಬ್ಬ ಪಾಕಿಸ್ತಾನಿ ಎಂದು ಕಾಶ್ಮೀರದ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ), ವಿಜಯ್ ಕುಮಾರ್ ಹೇಳಿದ್ದಾರೆ. ಹೈದರ್ ಎರಡು ವರ್ಷಗಳಿಂದ ಉತ್ತರ ಕಾಶ್ಮೀರದಲ್ಲಿ ಸಕ್ರಿಯನಾಗಿದ್ದ ಮತ್ತು ಹಲವಾರು ಭಯೋತ್ಪಾದಕ ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ ಎಂದು ಕಾಶ್ಮೀರದ ಐಜಿಪಿ ಹೇಳಿದ್ದಾರೆ.


ಕುಲ್ಗಾಮ್‌ನ ಚೆಯಾನ್ ದೇವ್ಸರ್ ಪ್ರದೇಶದಲ್ಲಿ ಸಿಕ್ಕಿಬಿದ್ದ ಇಬ್ಬರೂ ಭಯೋತ್ಪಾದಕರ ಹತ್ಯೆಮಾಡಲಾಗಿದೆ. ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.  ಪೊಲೀಸರ ಪ್ರಕಾರ, ಎಲ್‌ಇಟಿ ಭಯೋತ್ಪಾದಕ ಉತ್ತರ ಕಾಶ್ಮೀರದಲ್ಲಿ ಎರಡು ವರ್ಷಗಳಿಗೂ ಹೆಚ್ಚು ಕಾಲ ಸಕ್ರಿಯನಾಗಿದ್ದನು ಮತ್ತು ವಿವಿಧ ಭಯೋತ್ಪಾದಕ ಅಪರಾಧಗಳಲ್ಲಿ ಭಾಗಿಯಾಗಿದ್ದನು, ಆದರೆ ಸಿಕ್ಕಿಬಿದ್ದ ಇನ್ನೊಬ್ಬ ಸ್ಥಳೀಯ ಭಯೋತ್ಪಾದಕನಾಗಿದ್ದಾನೆ. ಪೊಲೀಸರ ಪ್ರಕಾರ, ಭಾನುವಾರ ಮುಂಜಾನೆ ಎನ್‌ಕೌಂಟರ್ ಪ್ರಾರಂಭವಾಗಿದೆ

ಕುಲ್ಗಾಮ್‌ನ ಚೆಯಾನ್ ದೇವ್ಸರ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಸೇನೆಯು ಕಾರ್ಯದಲ್ಲಿದೆ. ಹೆಚ್ಚಿನ ವಿವರಗಳನ್ನು ನೀಡಲಾಗುವುದು” ಎಂದು ಪೊಲೀಸರು ಟ್ವೀಟ್ ಮಾಡಿದ್ದರು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

 

Published On - 3:42 pm, Sun, 8 May 22