Sign In

By signing in or creating an account, you agree with Associated Broadcasting Company's Terms & Conditions and Privacy Policy.

Terrorists Encounter: ಜಮ್ಮು ಕಾಶ್ಮೀರದ ದೋಡಾದಲ್ಲಿ ಇಬ್ಬರು ಉಗ್ರರ ಎನ್‌ಕೌಂಟರ್‌

Jammu and Kashmir Encounter: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಇಂದು (ಬುಧವಾರ) ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Terrorists Encounter: ಜಮ್ಮು ಕಾಶ್ಮೀರದ ದೋಡಾದಲ್ಲಿ ಇಬ್ಬರು ಉಗ್ರರ ಎನ್‌ಕೌಂಟರ್‌
ಎನ್‌ಕೌಂಟರ್‌Image Credit source: PTI
Follow us
ಸುಷ್ಮಾ ಚಕ್ರೆ
|

Updated on: Jun 26, 2024 | 4:54 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ (Doda Encounter) ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಇಂದು (ಬುಧವಾರ) ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು (Terrorists Attack) ಹತರಾಗಿದ್ದಾರೆ. ಜೂನ್ 11 ಮತ್ತು 12ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯ ನಂತರ ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜೊತೆಗೆ ಪೊಲೀಸರ ತೀವ್ರ ಶೋಧ ಮತ್ತು ಕಾರ್ಡನ್ ಕಾರ್ಯಾಚರಣೆಯ ನಡುವೆ ಬೆಳಿಗ್ಗೆ 9.50ರ ಸುಮಾರಿಗೆ ಗಂಡೋ ಪ್ರದೇಶದ ಬಜಾದ್ ಗ್ರಾಮದಲ್ಲಿ ಗುಂಡಿನ ಚಕಮಕಿ ಪ್ರಾರಂಭವಾಯಿತು ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಜೂನ್ 11ರಂದು ಚತ್ತರಗಲ್ಲದ ಜಂಟಿ ಚೆಕ್ ಪೋಸ್ಟ್ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದರಿಂದ 6 ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರೆ, ಮರುದಿನ ಗಂಡೋ ಪ್ರದೇಶದ ಕೋಟಾ ಮೇಲ್ಭಾಗದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್​ನಲ್ಲಿ ನಡೆದ​ ಎನ್​ಕೌಂಟರ್​ನಲ್ಲಿ ನಾಲ್ವರು ನಕ್ಸಲರ ಹತ್ಯೆ

ಅವಳಿ ದಾಳಿಯ ನಂತರ ಭದ್ರತಾ ಪಡೆಗಳು ತಮ್ಮ ಭಯೋತ್ಪಾದನಾ-ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದವು. ಭದ್ರತಾ ಪಡೆಗಳ ಸಹಾಯದಿಂದ ಪೊಲೀಸರು ಸಿನೂ ಪಂಚಾಯತ್ ಗ್ರಾಮದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಆ ವೇಳೆ ಅಡಗಿಕೊಂಡಿದ್ದ ಭಯೋತ್ಪಾದಕರಿಂದ ಪೊಲೀಸರ ಮೇಲೆ ಭಾರೀ ಗುಂಡಿನ ದಾಳಿ ನಡೆಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರದ ಬಾರಾಮುಲ್ಲಾ ಎನ್​ಕೌಂಟರ್​​ನಲ್ಲಿ ಹತ್ಯೆಗೀಡಾದ ಉಗ್ರರಿಗೂ ಎಲ್​ಇಟಿಗೂ ನಂಟು

ದಾಳಿಗೆ ಪ್ರತಿಕ್ರಿಯೆಯಾಗಿ, ಭದ್ರತಾ ಪಡೆಗಳು ತಮ್ಮ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳನ್ನು ಹೆಚ್ಚಿಸಿವೆ. ಇದರ ನಡುವೆ, ರಾಜೌರಿ ಜಿಲ್ಲೆಯ ಚಿಂಗಸ್ ಪ್ರದೇಶದ ಪಿಂಡ್ ಗ್ರಾಮದಿಂದ ಚೀನಾದ ಹ್ಯಾಂಡ್ ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ಸಂಜೆ ಭದ್ರತಾ ಪಡೆಗಳ ಗಸ್ತು ತಿರುಗುತ್ತಿದ್ದ ತಂಡಕ್ಕೆ ಗ್ರೆನೇಡ್ ಪತ್ತೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ