ಬಾರಾಮುಲ್ಲಾದಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರ ಹತ್ಯೆ
ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ನಿಯಂತ್ರಣ ರೇಖೆ ಬಳಿ ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಸೇನೆ ಸದೆಬಡಿದಿದೆ. ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಿನ್ನೆ ನಡೆದ ಉಗ್ರರ ದಾಳಿ ಬಳಿಕ. ಸೇನೆಯು ಭದ್ರತೆಯನ್ನು ಮತ್ತಷ್ಟು ಬಲಪಡಿಸಿದೆ. ಉಗ್ರರು 26 ಮಂದಿಯನ್ನು ಕೊಂದಿದ್ದರು. ಪ್ರಮುಖವಾಗಿ ಹಿಂದೂಗಳನ್ನೇ ಟಾರ್ಗೆಟ್ ಮಾಡಿದ್ದರು.

ಬಾರಾಮುಲ್ಲಾ, ಏಪ್ರಿಲ್ 23: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಸೇನೆ ಸದೆಬಡಿದಿದೆ. ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಿನ್ನೆ ನಡೆದ ಉಗ್ರರ ದಾಳಿ(Terror Attack) ಬಳಿಕ ಸೇನೆಯು ಭದ್ರತೆಯನ್ನು ಮತ್ತಷ್ಟು ಬಲಪಡಿಸಿದೆ. ಉಗ್ರರು 26 ಮಂದಿಯನ್ನು ಕೊಂದಿದ್ದರು. ಪ್ರಮುಖವಾಗಿ ಹಿಂದೂಗಳನ್ನೇ ಟಾರ್ಗೆಟ್ ಮಾಡಿದ್ದರು.
ಏಪ್ರಿಲ್ 23ರಂದು ಉಗ್ರರು ಬಾರಾಮುಲ್ಲಾದ ಉರಿ ನಾಲಾದಲ್ಲಿ ಒಳನುಸುಳಲು ಯತ್ನಿಸಿದ್ದರು. ಭದ್ರತಾ ಪಡೆಯು ಉಗ್ರರನ್ನು ಅಲ್ಲೇ ತಡೆದು ಹತ್ಯೆ ಮಾಡಿವೆ. ಭಯೋತ್ಪಾದಕರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಯುದ್ಧೋಚಿತ ದಾಸ್ತಾನುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಪುರುಷರ ಪ್ಯಾಂಟ್ ಬಿಚ್ಚಿಸಿ ಅವರು ಹಿಂದೂ ಎಂದು ಖಚಿತಪಡಿಸಿಕೊಂಡು ಕೊಲೆ ಮಾಡಿದ್ದಾರೆ. ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿಯಲ್ಲಿ ನೌಕಾಪಡೆಯ ಒಬ್ಬ ಅಧಿಕಾರಿ ಮತ್ತು ಗುಪ್ತಚರ ಬ್ಯೂರೋದ ಮತ್ತೊಬ್ಬ ಅಧಿಕಾರಿ ಕೂಡ ಬಲಿಯಾಗಿದ್ದಾರೆ. ದಾಳಿಯಲ್ಲಿ ಗಾಯಗೊಂಡವರನ್ನು ಸ್ಥಳಾಂತರಿಸಲು ಮಿಲಿಟರಿ ಹೆಲಿಕಾಪ್ಟರ್‌ಗಳನ್ನು ಸೇವೆಗೆ ನಿಯೋಜಿಸಲಾಗಿತ್ತು.
ಮತ್ತಷ್ಟು ಓದಿ: ಮೆಹಂದಿ ಮಾಸುವ ಮುನ್ನವೇ ನೌಕಾಪಡೆ ಅಧಿಕಾರಿ ಪತ್ನಿಯ ಕುಂಕುಮ ಅಳಿಸಿದ ಉಗ್ರರು
ಏಕೆಂದರೆ ಆ ಪ್ರದೇಶವನ್ನು ಕಾಲ್ನಡಿಗೆಯಲ್ಲಿ ಅಥವಾ ಕುದುರೆ ಸವಾರಿ ಮೂಲಕ ಮಾತ್ರ ಪ್ರವೇಶಿಸಬಹುದು. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಈ ಘೋರ ಕೃತ್ಯದ ಹಿಂದಿರುವವರನ್ನು ಬಿಡಲಾಗುವುದಿಲ್ಲ ಅವರ ದುಷ್ಟ ಕಾರ್ಯಸೂಚಿ ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಅವರು ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಬುಧವಾರ ಬೆಳಗ್ಗೆ ಹಿಂತಿರುಗಿದರು. ಹಿಂದಿರುಗಿದ ನಂತರ, ಅವರು ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ ನಡೆಸಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಪರಿಸ್ಥಿತಿಯನ್ನು ಅವಲೋಕಿಸಿದರು. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ